ಭಾರತ ದೇಶ ಒಂದಾಗಿರುವುದು ಕಾಂಗ್ರೆಸ್‌ಗೆ ಇಷ್ಟವಿಲ್ಲ: ಈಶ್ವರಪ್ಪ

By Kannadaprabha NewsFirst Published Feb 2, 2024, 11:25 PM IST
Highlights

ಹಿಂದೆ ಭಾರತ- ಪಾಕಿಸ್ತಾನ ಬೇರೆ ಮಾಡಿದರು. ಈಗ ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆಯುತ್ತಿದ್ದಾರೆ. ಬಜೆಟ್ ವಿಚಾರದಲ್ಲೂ ಉತ್ತರ ಭಾರತ ದಕ್ಷಿಣ ಭಾರತ ಎಂದು ಇಬ್ಬಾಗ ಮಾಡುತ್ತಿದ್ದಾರೆ ಎಂದು ದೂರಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 

ರಾಯಚೂರು(ಫೆ.02): ಭಾರತ ದೇಶ ಒಂದಾಗಿರುವುದು ಕಾಂಗ್ರೆಸ್ ನಾಯಕರಿಗೆ ಇಷ್ಟವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಗುರುವಾರ ರೊಂದಿಗೆ ಸುದ್ದಿಗಾರ ಮಾತನಾಡಿದ ಅವರು, ಹಿಂದೆ ಭಾರತ- ಪಾಕಿಸ್ತಾನ ಬೇರೆ ಮಾಡಿದರು. ಈಗ ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆಯುತ್ತಿದ್ದಾರೆ. ಬಜೆಟ್ ವಿಚಾರದಲ್ಲೂ ಉತ್ತರ ಭಾರತ ದಕ್ಷಿಣ ಭಾರತ ಎಂದು ಇಬ್ಬಾಗ ಮಾಡುತ್ತಿದ್ದಾರೆ ಎಂದು ದೂರಿದರು.

ಸಂಸದ ಡಿ.ಕೆ.ಸುರೇಶ ಇದು ಕೇಂದ್ರದ ಬಜೆಟ್, ರಾಜ್ಯದ ಬಜೆಟ್ ಅಲ್ಲ ಎಂಬು ದನ್ನು ತಿಳಿದು ಪ್ರತಿಕ್ರಿಯಿಸಲಿ. ಯಾವ ಯೋಜನೆಯಲ್ಲಿ ರಾಜ್ಯಗಳಿಗೆ ಎಷ್ಟು ಪಾಲಿದೆ ಎಂದು ಹೇಳಿಲ್ಲ. ರಾಜ್ಯಕ್ಕೆ ಎಷ್ಟು ಬರಬೇಕು ಎಂಬುದನ್ನು ಪಟ್ಟಿ ಮಾಡಿ ಕೊಡಲಿ. ನಾವು ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಬಜೆಟ್‌ನಲ್ಲೂ ಉತ್ತರ ಭಾರತ ದಕ್ಷಿಣ ಭಾರತ ಎನ್ನುವುದು ಕಾಂಗ್ರೆಸ್ ನಾಯಕರ ಮನಸ್ಥಿತಿಯಾಗಿದೆ. ಡಿ.ಕೆ.ಸುರೇಶ್ ಕೂಗಿದ ತಕ್ಷಣ ದೇಶ
ಒಡೆಯೋಕೆ ಆಗಲ್ಲ. ನಮ್ಮನ್ನು ಬಿಟ್ಟು ಈ ದೇಶದಲ್ಲಿ ಬೇರೆ ಯಾರೂ ಅಧಿಕಾರಕ್ಕೆ ಬರಲ್ಲ. ಈ ದೇಶ ಒಡೆಯುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ ಎಂದರು.

ಇಂದಲ್ಲ ನಾಳೆ ಸಿದ್ದರಾಮಯ್ಯ ಕೂಡ ಬಿಜೆಪಿಗೆ ಬರ್ತಾರೆ: ಕೆ.ಎಸ್.ಈಶ್ವರಪ್ಪ

ಪ್ರಧಾನಿ ಮೋದಿಯವರ ವಿಶೇಷ ಬಜೆಟ್ ಇದಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಮಂಡನೆ ಮಾಡಿ ದ್ದಾರೆ. ಬಡವ, ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಯುವಕ, ಮಹಿಳೆಯರಿಗೆ ವಿಶೇಷ ವ್ಯವಸ್ಥೆ ಈ ಬಜೆಟ್‌ನಲ್ಲಿದೆ. ಏಳು ಲಕ್ಷದವರೆಗೆ ತೆರಿಗೆ ವಿನಾಯಿತಿ, ಮೀನುಗಾರಿಕೆಗೆ ವಿಶೇಷ ಸಚಿವಾಲಯ, ಗರ್ಭಕೋಶ ಕ್ಯಾನ್ಸರ್‌ಗೆ ಉಚಿತ ಚಿಕಿತ್ಸೆ ಸೌಲಭ್ಯ ನೀಡಿ ರುವುದು ಉತ್ತಮ ನಿರ್ಧಾರ. ಬಜೆಟ್ ಜನರಪ ಯೋಜನೆ ಆಗಿದೆ ಎಂದರು.

ಬಿಜೆಪಿಗೆ ಸೇರುವ ಪ್ರತಿಯೊಬ್ಬ ವ್ಯಕ್ತಿಯದು ನಾನು ಹೇಳೋಕೆ ಆಗುವು ದಿಲ್ಲ. ಅಜಿತ್ ಪವಾರ್, ನಿತೀಶ್ ಕುಮಾರ್ ಬಿಜೆಪಿಗೆ ಬಂದರು. ಇವತ್ತಲ್ಲ ನಾಳೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೊಡ್ಡ ಗುಂಪಿನೊಂದಿಗೆ ಬಿಜೆಪಿ ಸೇರುತ್ತಾರೆ ಕಾದುನೋಡಿ ಎಂದರು.

click me!