
ಶಿವಮೊಗ್ಗ(ಸೆ.03): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದನ್ನು ಮುಂದಿಟ್ಟುಕೊಂಡು ರಾಜಭವನ ಚಲೋ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಅರ್ಥಹೀನ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡರಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯಪಾಲರ ಹುದ್ದೆಗೆ ಘನತೆ ಇದೆ. ಸಂವಿಧಾನ ರಕ್ಷಕರಂತೆ ಮಾತನಾಡಿದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಾಲರ ಭಾವಚಿತ್ರವನ್ನು ಸುಡುವುದು, ಅವಹೇಳನ ಮಾಡುವುದು ಸಂವಿಧಾನ ವಿರೋಧಿ ಚಟುವಟಿಕೆ ಎಂದು ಗೊತ್ತಿಲ್ಲವೇ? ಎಂದರು.
ಭ್ರಷ್ಟಾಚಾರದಿಂದ ಮುಕ್ತವಾದರೆ ಸಹಕಾರ ಕ್ಷೇತ್ರ ಪ್ರಗತಿ: ಸಂಸದ ಬಿ.ವೈ.ರಾಘವೇಂದ್ರ
ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ರೆಡ್ಡಿಗೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ದೂರು ಇಲ್ಲ, ರಾಜ್ಯಪಾಲರ ಬಳಿ ಯಾವುದೇ ಕಡತಗಳೂ ಇಲ್ಲ. ಈ ಬಗ್ಗೆ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.