
ಶಿವಮೊಗ್ಗ(ಆ.13): ಬಿಜೆಪಿಯ ಅಸಮಾಧಾನಿತ 12 ಹಿರಿಯ ಮುಖಂಡರು ಸಭೆ ನಡೆಸಿ ಪಾದಯಾತ್ರೆಗೆ ನಿರ್ಧರಿಸಿದ್ದು, ತಕ್ಷಣವೇ ಕೇಂದ್ರ ನಾಯಕರು ಮಧ್ಯ ಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷ ಇಬ್ಭಾಗವಾಗುವ ಅಪಾಯವಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಟ್ಟು ಈ ರೀತಿಯ ಸಭೆಗಳು ನಡೆಯುತ್ತಿವೆ. ಹೀಗೆ ಸಭೆಗಳನ್ನು ನಡೆಸುತ್ತ ಹೋದರೆ ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ ಇದೆ. ಈ ಪಾದಯಾತ್ರೆ ನಡೆದರೆ ರಾಜ್ಯದ ಎಲ್ಲಾ ತಾಲೂಕಿನಲ್ಲೂ ಪಕ್ಷ ಇಬ್ಭಾಗವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಸಂಸದ ರಾಘವೇಂದ್ರ ಎಷ್ಟು ಪೆದ್ದ ಅಂದರೆ ಯಾರಿಗೆ ಅರ್ಜಿ ಕೊಡಬೇಕು ಎಂದು ಗೊತ್ತಿಲ್ಲ: ಸಚಿವ ಮಧು ಬಂಗಾರಪ್ಪ
ಸಭೆಯಲ್ಲಿ ಚರ್ಚಿಸಿರುವ ವಿಷಯದ ಬಗ್ಗೆ ಬಹಿರಂಗವಾಗಿ ಯಾರೂ ಏನೂ ಹೇಳುತ್ತಿಲ್ಲ. ಇವತ್ತು 12 ಜನರಿರಬಹುದು. ಪಕ್ಷದ ವರಿಷ್ಟರು ಇದನ್ನು ನಿರ್ಲಕ್ಷ್ಯ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕುಂಠಿತವಾಗುತ್ತ ಹೋಗುತ್ತದೆ. ಕೂಡಲೇ ಕೇಂದ್ರದ ನಾಯಕರು ಈ ಬಗ್ಗೆ ಗಮನ ಹರಿಸಿ ಪಾದಯಾತ್ರೆಗೆ ಹೊರಟಿರುವ ಬಿಜೆಪಿ ನಾಯಕರನ್ನು ಕರೆದು, ಅವರ ನೋವುಗಳನ್ನು ಆಲಿಸಿ ಅಗತ್ಯ ಮುನ್ಸೂಚನೆ ನೀಡಬೇಕು ಎಂದು ಆಗ್ರಹಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.