ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ನಂತರ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಗಳೂರು ಮಾಜಿ ಶಾಸಕ ಟಿ.ಗುರು ಸಿದ್ದನಗೌಡರ ಸೇರಿ ಎಲ್ಲರನ್ನೂ ರಾಜಕೀಯವಾಗಿ ಮುಗಿಸುವ ಕೆಲಸವನ್ನು ಸಿದ್ದೇಶ್ವರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ(ಅ.19): ಬಿಜೆಪಿಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರಗಿಂತ ನಾನು ಸೀನಿಯರ್. ವಯಸ್ಸಿನಲ್ಲಿ ಹಿರಿಯರಾದ ಸಿದ್ದೇಶ್ವರರ ಬಗ್ಗೆ ನನಗೆ ಗೌರವವಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾನೂ ಆಕಾಂಕ್ಷಿ ಅಂದ ದಿನದಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ನಂತರ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಗಳೂರು ಮಾಜಿ ಶಾಸಕ ಟಿ.ಗುರು ಸಿದ್ದನಗೌಡರ ಸೇರಿ ಎಲ್ಲರನ್ನೂ ರಾಜಕೀಯವಾಗಿ ಮುಗಿಸುವ ಕೆಲಸವನ್ನು ಸಿದ್ದೇಶ್ವರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಬಿಜೆಪಿಗೆ ಸಮರ್ಥ ನಾಯಕತ್ವ ಇಲ್ಲ: ರೇಣು ಮತ್ತೆ ರೆಬೆಲ್
ಬಿಜೆಪಿಯಿಂದ ಹೊರ ಹೋಗುವವರು ಹೋಗಲಿ ಎಂಬ ಸಿದ್ದೇಶ್ವರ ಅವರ ಹೇಳಿಕೆ ಸರಿಯಲ್ಲ. ನಾನು ಎಲ್ಲಿಯೂ ಕಾಂಗ್ರೆಸ್‌ಗೆ ಹೋಗುವೆ ಎಂದು ಹೇಳಿಲ್ಲ ಎಂದೂ ಸ್ಪಷ್ಟಪಡಿಸಿದರು.