ಕರ್ನಾಟಕದಲ್ಲಿ ತಾಲಿಬಾನ್‌ ಸರ್ಕಾರವಿದೆ, ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ್‌

Published : Oct 07, 2023, 04:18 AM IST
ಕರ್ನಾಟಕದಲ್ಲಿ ತಾಲಿಬಾನ್‌ ಸರ್ಕಾರವಿದೆ, ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ್‌

ಸಾರಾಂಶ

ಶಿವಮೊಗ್ಗದಲ್ಲಿ ನಡೆದದ್ದು ಕಾಂಗ್ರೆಸ್‌ ಪ್ರೇರಿತ ಗಲಾಟೆ. ಮುಸ್ಲಿಂ ಭಯೋತ್ಪಾದಕರು ಹೊಡೆಯುವ ಏಟಿಗೆ ಪೊಲೀಸರೇ ಓಡಿ ಹೋದರು. ಇದು ತಾಲಿಬಾನ್‌ ಸಂಸ್ಕೃತಿ. ಶಿವಮೊಗ್ಗದಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದಾರೆ. ಗಲಭೆಯಲ್ಲಿ ಯಾರು ಭಾಗಿಯಾಗಿದ್ದಾರೋ ಅವರನ್ನು ಬಂಧಿಸಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಮಾಜಿ ಗೃಹ ಸಚಿವ ಆರ್‌.ಅಶೋಕ್ 

ಬೆಂಗಳೂರು(ಅ.07):  ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೆಯುತ್ತಿದೆ ಎಂದು ಮಾಜಿ ಗೃಹ ಸಚಿವ ಆರ್‌.ಅಶೋಕ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ರಾಜ್ಯದಲ್ಲಿ ರಕ್ಷಣೆಯೇ ಇಲ್ಲದಂತಾಗಿದೆ. ಪಾಕಿಸ್ತಾನದವರನ್ನು ಅಣ್ಣ-ತಮ್ಮ ಎನ್ನುವವರು ಯಾವ ಭಾರತೀಯರು ಎಂದು ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ನಡೆದದ್ದು ಕಾಂಗ್ರೆಸ್‌ ಪ್ರೇರಿತ ಗಲಾಟೆ. ಮುಸ್ಲಿಂ ಭಯೋತ್ಪಾದಕರು ಹೊಡೆಯುವ ಏಟಿಗೆ ಪೊಲೀಸರೇ ಓಡಿ ಹೋದರು. ಇದು ತಾಲಿಬಾನ್‌ ಸಂಸ್ಕೃತಿ. ಶಿವಮೊಗ್ಗದಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದಾರೆ. ಗಲಭೆಯಲ್ಲಿ ಯಾರು ಭಾಗಿಯಾಗಿದ್ದಾರೋ ಅವರನ್ನು ಬಂಧಿಸಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸೋನಿಯಾ ಗಾಂಧಿ ತೃಪ್ತಿಪಡಿಸಲು ತಮಿಳನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರದ ವಿರುದ್ಧ ಆರ್‌ ಅಶೋಕ್ ಆಕ್ರೋಶ

ಈ ಹಿಂದೆ ಕೋಮುಗಲಭೆ, ಹಿಜಾಬ್ ಗಲಾಟೆ ಆದಾಗ‌ ಕಾಂಗ್ರೆಸ್ ಯಾರ ಪರ ನಿಂತಿತ್ತು ಎಂಬುದು ಗೊತ್ತಿದೆ. ಶಾಸಕರು ಅನುದಾನ ಇಲ್ಲ ಎಂದು ಬಾಯಿ ಬಡಿದುಕೊಳ್ಳುತ್ತಿದ್ದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರು. ಕೊಡಲು ಹೊರಟಿದ್ದಾರೆ. ಹಿಂದೂ ವಿರೋಧಿ ಹಾಗೂ ಅಲ್ಪಸಂಖ್ಯಾತರ ಓಲೈಕೆ ಆಡಳಿತದ ಮೂಲಕ ಶೇ.100 ರಷ್ಟು ತಾಲಿಬಾನ್‌ ಸರ್ಕಾರವನ್ನು ನೆನಪಿಸುತ್ತಿದೆ. ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ