
ಕಾರವಾರ(ಆ.20): ಸಿದ್ದರಾಮಯ್ಯನವರ ಪತ್ನಿ ಸರಳ ವ್ಯಕ್ತಿತ್ವದವರು. ಬಹಳ ಒಳ್ಳೆಯ ಹೆಣ್ಣು ಮಗಳು. ಅಂತವರ ಹೆಸರನ್ನು ಬಿಜೆಪಿಯವರು ಎಳೆದು ತಂದು ಕೀಳುಮಟ್ಟದ ರಾಜಕಾರಣ ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ನಾನು, ಸಿದ್ದರಾಮಯ್ಯ ಬಹಳ ವರ್ಷದ ಸ್ನೇಹಿತರು. ಅವರ ಮನೆಗೆ ತಿಂಡಿಗೆ ಹೋದಾಗಲೂ ಅವರ ಪತ್ನಿ ಮುಂದೆ ಬರುತ್ತಿರಲಿಲ್ಲ. ಅಂತವರ ಹೆಸರನ್ನು ಬಿಜೆಪಿಯವರು ಎಳೆದು ತಂದು ಕೀಳುಮಟ್ಟದ ರಾಜಕಾರಣ ಮಾಡಿದ್ದಾರೆ. ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದೇ ರಾಜಕೀಯ ಮಾಡಿದ ನಾಯಕ ಸಿದ್ಧರಾಮಯ್ಯ. ಅವರ ಹೆಸರನ್ನು ಕೆಡಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಮನೆಗೆ ತೊಲಗಲಿ, ಅವರು ಸಮಾಜವಾದಿ ಅಲ್ಲ ಮಜಾವಾದಿ: ವಿಜಯೇಂದ್ರ ಆಕ್ರೋಶ
ಯಾವ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.