
ಕಾರ್ಕಳ(ಆ.13): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂರು ದಿನ ತುಂಬುವಷ್ಟರಲ್ಲಿ 100 ಪರ್ಸೆಂಟ್ ಸರ್ಕಾರವಾಗಲಿದೆ ಎಂದು ಶಾಸಕ, ಮಾಜಿ ಸಚಿವ ವಿ.ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮರು ದಿನದಿಂದಲೇ ಅಧಿಕೃತವಾಗಿ ಭ್ರಷ್ಟಾಚಾರದ ಅಂಗಡಿ ಬಾಗಿಲು ತೆರೆದ ಕಾಂಗ್ರೆಸ್ಸಿಗರು ತಮ್ಮ ಮೇಲಿನ ಆರೋಪಗಳೆಲ್ಲ ನಕಲಿ ಎಂದು ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಹಿಂದುಗಳ ಧ್ವನಿ ಹತ್ತಿಕ್ಕಲು ಸಾಧ್ಯವಾಗದು: ಡಾ.ಭರತ್ ಶೆಟ್ಟಿ
ಈ ಸರ್ಕಾರದ ಧನದಾಹಕ್ಕೆ ಈಗ ಗುತ್ತಿಗೆದಾರ ಗೌತಮ್ ಪ್ರಾಣ ತೆತ್ತಿದ್ದಾರೆ ಎಂದು ಆರೋಪಿಸಿದ ಅವರು ‘ಈ ಆತ್ಮಹತ್ಯೆಯೂ ನಕಲಿ ಎಂದು ಹೇಳುತ್ತೀರಾ?’ ಎಂದು ಪ್ರಶ್ನಿಸಿದರು. ಅಧಿಕಾರಕ್ಕೆ ಬಂದು ನೂರು ದಿನ ಪೂರೈಸುವುದರೊಳಗೇ ಇಷ್ಟೊಂದು ಆರೋಪಗಳು ಬಂದಿವೆ. ಸರ್ಕಾರ ನೂರು ದಿನ ಪೂರೈಸುವ ಹೊತ್ತಿಗೆ ನಿಮ್ಮದು 100 ಪರ್ಸೆಂಟ್ ಭ್ರಷ್ಟ ಸರ್ಕಾರವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.