ಕಾಡುಗೊಲ್ಲರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮಾಜಿ ಶಾಸಕ ಎ.ವಿ ಉಮಾಪತಿ ಆಗ್ರಹ

Published : Mar 09, 2023, 02:41 PM IST
ಕಾಡುಗೊಲ್ಲರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮಾಜಿ ಶಾಸಕ ಎ.ವಿ ಉಮಾಪತಿ ಆಗ್ರಹ

ಸಾರಾಂಶ

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಬಲವಾಗಿ ನಿಂತಿರುವ ಕಾಡುಗೊಲ್ಲರಿಗೆ ಬರುವ ಚುನಾವಣೆಯಲ್ಲಿ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಟಿಕೆಟ್ ನೀಡಬೇಕು ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಕಾಂಗ್ರೆಸ್ ಹೈ ಕಮಾಂಡ್ ಗೆ ಒತ್ತಾಯಿಸಿದ್ದಾರೆ.

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಮಾ.9) : ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಬಲವಾಗಿ ನಿಂತಿರುವ ಕಾಡುಗೊಲ್ಲರಿಗೆ ಬರುವ ಚುನಾವಣೆಯಲ್ಲಿ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಟಿಕೆಟ್ ನೀಡಬೇಕು ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಕಾಂಗ್ರೆಸ್ ಹೈ ಕಮಾಂಡ್ ಗೆ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಕಾಲದಿಂದಲೂ ಕಾಡುಗೊಲ್ಲರು ಕಾಂಗ್ರೆಸ್(Congress) ಪಕ್ಷಕ್ಕೆ ಸಂಪ್ರಾದಯ ಬದ್ದವಾಗಿ ಮತದಾರರಾಗಿದ್ದಾರೆ. ಇಂತಹ ಸಮಾಜವನ್ನು ಇಂದು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು‌

ನಿರುದ್ಯೋಗಿ ಕಾಂಗ್ರೆಸ್‌ ನಾಯಕರಿಂದ ತೋರಿಕೆಗಾಗಿ ಬಂದ್‌: ಸಚಿವ ಬಿ.ಸಿ.ಪಾಟೀಲ್‌

ಕಳೆದ ಬಾರಿ ಚುನಾವಣೆಯಲ್ಲಿ ಕಾಡು ಗೊಲ್ಲರ(Kadugolla)ನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಫಲಿತಾಂಶ ವ್ಯತಿರಿಕ್ತ ಆಗಿದ್ದನ್ನು ಪಕ್ಷದ ಮುಖಂಡರು ಗಮನಿಸಿದ್ದಾರೆ. ಆದ್ದರಿಂದ ಈ ಬಾರಿಯ ಚುನಾವಣೆ(Assembly election)ಯಲ್ಲಿ ಕಾಡುಗೊಲ್ಲರನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂಬ ನಂಬಿಕೆ ಇದೆ ಎಂದರು. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕಾಡುಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಈ ಭಾಗದಲ್ಲಿ ನಮಗೆ ಟಿಕೇಟ್ ನೀಡಬೇಕು. ಇದರಿಂದ ಪಕ್ಷಕ್ಕೆ ಆನೆ ಬಲ ಬರಲಿದೆ. ಅಲ್ಲದೆ ಇತರೆ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಅನುಕೂಲ ಆಗಲಿದೆ ಎಂದರು.

ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಎಲ್ಲಾ ಜಾತಿಗಳಿಗೂ ಮಾನ್ಯತೆ ನೀಡಬೇಕು. ನಾವುಗಳು ಪ್ರಚಾರಕ್ಕೆ ಹೋದಂತಹ ಸಂದರ್ಭದಲ್ಲಿ ನಮ್ಮನ್ನು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾಡುಗೊಲ್ಲರನ್ನು ಗುರುತಿಸುತ್ತಿಲ್ಲ. ಯಾಕೆ ಆ ಪಕ್ಷದಲ್ಲಿ ಇದ್ದಿರಿ ಎಂದು ಪ್ರಶ್ನೆ ಕೇಳ್ತಿದ್ದಾರೆ. ಆದ್ದರಿಂದ ಪಕ್ಷ ಕಾಡುಗೊಲ್ಲರನ್ನು ಗುರುತಿಸಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ: ಬೊಮ್ಮಾಯಿ

ಕೇವಲ ಚಿತ್ರದುರ್ಗ, ತುಮಕೂರು ಜಿಲ್ಲೆ ಮಾತ್ರವಲ್ಲದೇ, ರಾಜ್ಯದ ಬಳ್ಳಾರಿ, ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳ ಕೆಲ ಕ್ಷೇತ್ರಗಳಲ್ಲಿ ಗೊಲ್ಲ ಸಮುದಾಯ(Kadugolla community)ದ ಮತದಾರರೇ ನಿರ್ಣಾಯಕ ಆಗಿದ್ದಾರೆ. ಇದನ್ನೆಲ್ಲಾ ಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಮಾನ್ಯತೆ ನೀಡಬೇಕು‌. ಒಂದು ವೇಳೆ ಪಕ್ಷ ಈ ಬಾರಿಯೂ ಟಿಕೆಟ್ ನೀಡದೇ ಇದ್ರು ಕೂಡು ನಾವು ಪಕ್ಷದ ವಿರುದ್ದ ನಡೆದುಕೊಳ್ಳುವುದಿಲ್ಲ. ಯಾಕಂದ್ರೆ ಪಕ್ಷ ನಮಗೆ ಅನ್ನ ನೀಡಿದೆ ಹಾಗಾಗಿ ಪಕ್ಷದ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ನಮ್ಮ ಸಮುದಾಯಕ್ಕೆ ಒಂದು ಅವಕಾಶ ಕೊಡಿ ಎಂದು ಸಾಮಾಜಿಕ ನ್ಯಾಯ ಕೇಳುವುದು ನಮ್ಮ ಕರ್ತವ್ಯ ಎಂದು ಮಾಜಿ ಶಾಸಕ ಉಮಾಪತಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ