Karnataka Politics: ಜೂ.21ಕ್ಕೆ ಅಖಂಡ ಶ್ರೀನಿವಾಸಮೂರ್ತಿ ಎಚ್ಡಿಕೆ ಸಮ್ಮುಖದಲ್ಲಿ ಜೆಡಿಎಸ್ ದಳಕ್ಕೆ ಸೇರ್ಪಡೆ

Kannadaprabha News   | Kannada Prabha
Published : Jun 18, 2026, 06:13 AM IST
Akhand srinivasmoorhy rejoin jds party

ಸಾರಾಂಶ

ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಬಿಎಸ್‌ಪಿ ಸೇರಿ ಪರಾಭವಗೊಂಡಿದ್ದರು.

ಬೆಂಗಳೂರು (ಜೂ.18): ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ(Pulikeshinagar Assembly Constituency)ದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ(Akhanda Srinivasamurthy) ಅವರು ಜೆಡಿಎಸ್‌ ಪಕ್ಷ(JDS party) ಸೇರ್ಪಡೆಗೆ ಮುಹೂರ್ತ ಫಿಕ್ಸ್‌ ಆಗಿದೆ.

ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆ?

ಭಾನುವಾರ ನಗರದ ಟ್ಯಾನರಿ ರಸ್ತೆಯ ಪಿಳ್ಳಣ್ಣ ಗಾರ್ಡನ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್‌ ಮೂರ್ತಿ ಅವರು ತಮ್ಮ ಬೆಂಬಲಗರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದಾರೆ.

ನೆಲಮಂಗಲ ಕ್ಷೇತ್ರದ ಟಿಕೆಟ್ ಆಕಾಂಕ್ಷಿ

ಕೆಲ ದಿನಗಳ ಹಿಂದೆಯಷ್ಟೇ ಎಚ್‌.ಡಿ.ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಜೆಡಿಎಸ್‌ ಸೇರ್ಪಡೆಗೆ ಅಖಂಡ ಉತ್ಸುಕರಾಗಿರುವ ಬಗ್ಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್‌ಗೆ ಸೇರ್ಪಡೆಗೆ ಸಮಯ ನಿಗದಿಯಾಗಿದೆ. ಶ್ರೀನಿವಾಸಮೂರ್ತಿ ಅವರು ಪುಲಿಕೇಶಿನಗರ ಅಥವಾ ನೆಲಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. 

ಜೆಡಿಎಸ್‌ಗೆ ಮರು ಸೇರ್ಪಡೆ

ಜೆಡಿಎಸ್‌ ವರಿಷ್ಠರ ತೀರ್ಮಾನದಂತೆ ಅಂತಿಮವಾಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಹಿಂದೆ ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಬಳಿಕ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಸಿಗದೆ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

MLC Election Drama: ಅಡ್ಡ ಮತ ಭೀತಿಯಲ್ಲಿ ಎಂಎಲ್ಸಿ ಚುನಾವಣೆ! 7ನೇ ಸ್ಥಾನ ಗೆಲ್ಲೋರ್‍ಯಾರು?
Telegram Ban: 'ಮುಂದಿನ ನಿಷೇಧ ಯಾರ ಮೇಲೆ? ವಾಟ್ಸಾಪ್ ಮೇಲಾ?' ಟೆಲಿಗ್ರಾಂ ಬ್ಯಾನ್ ಮಾಡಿದ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ