ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ: ಬರಮಾಡಿಕೊಂಡ ಎಚ್‌ಡಿಕೆ

Published : Mar 31, 2023, 05:53 PM IST
ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ: ಬರಮಾಡಿಕೊಂಡ ಎಚ್‌ಡಿಕೆ

ಸಾರಾಂಶ

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರು (ಮಾ.31): ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.

ವರುಣಾದಲ್ಲಿ ವಿಜಯೇಂದ್ರ ನಿಂತ್ರೂ ಗೆಲ್ಲೋದು ಸಿದ್ರಾಮಯ್ಯ ಎಂದ ಬಿವಿ ಶ್ರೀನಿವಾಸ್‌!

ಜೆಡಿಎಸ್(JDS) ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ ಅವರು.

ಖೂಬಾ(Mallikarjun khooba) ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ  ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ