ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಅವರ ನಿವಾಸ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರ ಕೈವಾಡವಿದೆ. ಅವರ ಪಿಎ ಕಾಣಿಸಿದ್ದು, ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ ಎಂದು ಹೆಸರು ಹೇಳದೇ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
ಹೊಳೆಹೊನ್ನೂರು(ಏ.23) : ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಅವರ ನಿವಾಸ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರ ಕೈವಾಡವಿದೆ. ಅವರ ಪಿಎ ಕಾಣಿಸಿದ್ದು, ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ ಎಂದು ಹೆಸರು ಹೇಳದೇ ಸಂಸದ ಬಿ.ವೈ. ರಾಘವೇಂದ್ರ (BY Raghavendra)ಆರೋಪಿಸಿದರು.
ಪಟ್ಟಣದ ಭಗೀರಥ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಸಮಾಜ ವತಿಯಿಂದ ಶನಿವಾರ ಆಯೋಜಿಸಿದ್ದ ಸರ್ಕಾರಕ್ಕೆ ಅಭಿನಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
undefined
ವಿಜಯೇಂದ್ರ ನಾಮಪತ್ರಕ್ಕೆ ಲಕ್ಕಿ ಕಾರಲ್ಲಿ ಬಂದ ಬಿ.ಎಸ್.ಯಡಿಯೂರಪ್ಪ!
ಮೀಸಲಾತಿ ವಿಚಾರದಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಅನೇಕ ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದರು. ಕೆಲವೇ ತಿಂಗಳ ಹಿಂದೆ ಬಿಜೆಪಿ ಸರ್ಕಾರ ಇದಕ್ಕೆ ಅನುಮೋದನೆ ನೀಡಿ, ಯಾವುದೇ ಸಮಾಜಕ್ಕೆ ತೊಂದರೆಯಾಗದ ರೀತಿಯಲ್ಲಿ ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೆ, ಕಾಂಗ್ರೆಸ್ ಇದನ್ನು ನಮ್ಮ ಸರ್ಕಾರ ಬಂದರೆ ಈ ಮೀಸಲಾತಿಯನ್ನು ಹಿಂದೆತೆಗೆದುಕೊಳ್ಳುವುದಾಗಿ ಘೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಕನಸು ಕಂಡಿದ್ದ ಭಾರತವನ್ನು ವಿಶ್ವಗುರು ಮಾಡುವಲ್ಲಿ ಪ್ರಧಾನಿ ಮೋದಿ ಅವರು ಸಾಕಾರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಹಿಂದಿನ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದಲ್ಲದೇ, ಅವರ ನಿಧನ ನಂತರ ದೆಹಲಿಯಲ್ಲಿ ಸಮಾಧಿ ಮಾಡಲೂ ಸ್ಥಳಾವಕಾಶ ನೀಡದೇ ಅವಮಾನ ಮಾಡಿದ್ದಾರೆ. ಸಂವಿಧಾನ ನೀಡಿದಂತ ಮಹಾತ್ಮನಿಗೆ ಭಾರತ ರತ್ನ ನೀಡಲು ಅಟಲ್‌ಜೀಯವರ ಬಿಜೆಪಿ ಸರ್ಕಾರ ಬರಬೇಕಾಯಿತು. ಅವರು ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಕಾಲೇಜಿನ್ನು ಸುಮಾರು .800 ಕೋಟಿಗೆ ತೆಗೆದುಕೊಂಡು ಪರಿಶಿಷ್ಟಪಂಗಡ ಹಾಗೂ ಪರಿಶಿಷ್ಟವರ್ಗದವರಿಗೆ ಉಚಿತ ವಿದ್ಯಾಭ್ಯಾಸ ನೀಡಲು ಅನುಕೂಲ ಮಾಡಿಕೊಡಲಾಗಿದೆ ಎಂದರು.
ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 10ರಿಂದ 15 ಕ್ಷೇತ್ರಗಳನ್ನು ಒಗ್ಗೂಡಿಸಿ ಮೋದಿ ಅವರ ಕಾರ್ಯಕ್ರಮ ಇರುತ್ತದೆ. ಜಿಲ್ಲೆಯಲ್ಲಿ ಈ ಅದೃಷ್ಟಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಒಲಿಯಬಹುದು. ಆದ್ದರಿಂದ ಕಾರ್ಯಕರ್ತರು ಇಂದಿನಿಂದಲೇ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಅಭಿವೃದ್ಧಿಯನ್ನು ಬೆಂಬಲಿಸಬೇಕು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಎಸ್‌ಸಿ ಮತ್ತು ಎಸ್ಟಿ ಎಂದು ಪ್ರತ್ಯೇಕ ಎರಡು ನಿಗಮಗಳನ್ನು ಸ್ಥಾಪಿಸುವ ಮೂಲಕ ಆ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದರು ಎಂದರು.
ಶಾಸಕ ಕೆ.ಬಿ.ಅಶೋಕ ನಾಯ್ಕ ಮಾತನಾಡಿ, ಸಂವಿಧಾನದ ಪ್ರಕಾರ ಹಿಂದುಳಿದ ಪಂಗಡ ಮತ್ತು ಪರಿಶಿಷ್ಟಜಾತಿಗಳಿಗೆ 60 ವರ್ಷಗಳಿಂದ ಕ್ರಮವಾಗಿ ಶೇ.3 ಹಾಗೂ ಶೇ.15ರಷ್ಟುಮೀಸಲಾತಿ ನೀಡಲಾಗುತ್ತು. ಆದರೆ, ಹಿಂದುಳಿದ ವರ್ಗಗಳ ಜನಸಂಖ್ಯೆ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ಮೀಸಲಾತಿಯನ್ನು 3ರಿಂದ 7ಕ್ಕೆ 15ರಿಂದ 17ಕ್ಕೆ ಹೆಚ್ಚು ಮಾಡಿದೆ. ಆದರೆ ಕೆಲವು ನಾಯಕರು ರಾಜಕೀಯ ದುರುದ್ಧೇಶದಿಂದ ಜನರಲ್ಲಿ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಮೀಸಲಾತಿ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯ ಎಂದರು.
ಯಡಿಯೂರಪ್ಪ ನಿವಾಸಕ್ಕೆ ಶಾಸಕ ಬಸನಗೌಡ ಯತ್ನಾಳ್ ಭೇಟಿ
ಕಾರ್ಯಕ್ರಮದಲ್ಲಿ ಕೆಎಸ್‌ಡಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಕ್ಷೇತ್ರದ ಉಸ್ತುವಾರಿ ಮುಖೇಶ್ ಕೋಲಿ, ಎ.ಕೆ.ಮಹಾದೇವಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲಜ್ಜನಾಳ್ ಮಂಜುನಾಥ, ಉಪಾಧ್ಯಕ್ಷ ಸುಬ್ರಮಣಿ, ಜಗದೀಶ್ ಗೌಡ, ನಾಗಣ್ಣ, ತಿಪ್ಪೇಶಪ್ಪ, ಪಾಲಾಕ್ಷಪ್ಪ, ರಮೇಶ್, ಲೋಕಪ್ಪ, ರಘು, ಸುಧಾಮಣಿ ಬೋರಯ್ಯ ಇನ್ನಿತರರು ಹಾಜರಿದ್ದರು.