ಹಳೆಗಂಡನ ಪಾದವೇ ಗತಿ ಮರಳಿ ಜೆಡಿಎಸ್‌ಗೆ ವೈಎಸ್‌ವಿ ದತ್ತಾ, ಏ.18 ನಾಮಪತ್ರ ಸಲ್ಲಿಕೆ

By Gowthami K  |  First Published Apr 13, 2023, 5:31 PM IST

 ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ ಎಸ್ ವಿ  ದತ್ತಾ  ಮರಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದೇವೇಗೌಡರ ಮಾನಸಪುತ್ರ ಮರಳಿ ಹಳೆ ಗೂಡಿಗೆ ಸೇರಿದ್ದಾರೆ.


ಚಿಕ್ಕಮಗಳೂರು (ಏ.13):  ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ ಎಸ್ ವಿ  ದತ್ತಾ  ಮರಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ದೇವೇಗೌಡರ ಮಾನಸಪುತ್ರ ಮರಳಿ ಹಳೆ ಗೂಡಿಗೆ ಸೇರಿದ್ದಾರೆ. ದತ್ತಾ ಬಳಿ ಇರೋದು ಎರಡೇ... ಎರಡು...  ಒಂದು ಪಂಚೆ, ಒಂದು ಶರ್ಟ್ ಅಷ್ಟೆ. ನಾನೇ ಮಿನಿಸ್ಟರ್ ಆದಾಗ ಕಾರ್ ಕೊಡುಸ್ತೀನಿ ಅಂದೆ. ಬೇಡ ಸರ್. ನಂಗೇ ಆಟೋನೆ ಸಾಕು ಅಂದಿದ್ರು. 18ನೇ ತಾರೀಖು ದತ್ತಾ ನಾಪಪತ್ರ ಸಲ್ಲಿಕೆ ಮಾಡಲಿದ್ದಾರೆ ಅಂದು ಎಷ್ಟೆ ಕಷ್ಟ ಆದ್ರು ದೇವೆಗೌಡರು ಬರುತ್ತಾರೆ, ಬಂದೇ ಬರುತ್ತಾರೆ. ದತ್ತಾ ಅವರ ನಾಮಪತ್ರ ಸಲ್ಲಿಕೆಗೆ ದೇವೇಗೌಡರು ಪಕ್ಕದಲ್ಲಿ ಕೂತಿರ್ತಾರೆ. ನಾನು ಬದುಕಿರುವವರೆಗೇ ದತ್ತಾನ ಕೈ ಬಿಡಬಾರದು ಎಂದು ಹೇಳಿದ್ದಾರೆ ಎಂದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಹೇಳಿಕೆ ನೀಡಿದ್ದಾರೆ.

ನೀವು ಬೇರೆ ಯೋಚನೆ ಮಾಡಬೇಡಿ, ದೇವೇಗೌಡರ ಮಾತನ್ನ ನಾನು, ದತ್ತಾ, ನೀವು ಎಲ್ಲಾ ಪಾಲಿಸಬೇಕು. ದತ್ತ ನನ್ನ ಶಾಸಕ ಮಾಡ್ಲೇಬೇಕು ಅಂತ ದೇವೇಗೌಡರು ಹೇಳಿದ್ದಾರೆ. ನಮ್ಮ ಮನೆ ಎಲೆಕ್ಷನ್ ಅಂತ ಚುನಾವಣೆ ಮಾಡ್ತೀವಿ. ನಮಗೆ ಹೊಳೆನರಸೀಪುರ-ಕಡೂರು ಬೇರೆ-ಬೇರೆ ಅಲ್ಲ. ನಾನು ದತ್ತಾ ಜೊತೆ ಇರುತ್ತೇನೆ  ಎಂದು ಕಡೂರಿನ ಯಗಟಿ ಗ್ರಾಮದ ದತ್ತ ಅವರ ಮನೆಯಲ್ಲಿ ರೇವಣ್ಣ ಹೇಳಿಕೆ ನೀಡಿದ್ದಾರೆ.

Tap to resize

Latest Videos

undefined

ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಹರಿಬಿಟ್ಟ ಹೆಚ್.ಡಿ. ಕುಮಾರಸ್ವಾಮಿ: ಮೋದಿ, ಅಮಿತ್‌ ಶಾಗೆ ಟಾಂಗ್

 ದತ್ತಾ ಅವರನ್ನು ಮತ್ತೆ ಜೆಡಿಎಸ್‌ ಗೆ ಸೇರ್ಪಡೆಗೊಳಿಸುವ ಹಿನ್ನೆಲೆಯಲ್ಲಿ ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಯುಗಟಿ ಗ್ರಾಮದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ  ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ದತ್ತಾ ಅವರು  ಜೆಡಿಎಸ್ ನಿಂದ ಮತ್ತೆ ಆಹ್ವಾನ ಹಿನ್ನೆಲೆ ಮತ್ತೆ ಮರಳಿ ಹೋಗುವ ಆಲೋಚನೆಯಲ್ಲಿದ್ದರು. ಈಗಾಲೇ ದೇವೇಗೌಡರೊಂದಿಗೆ ಒಂದು‌ ಸುತ್ತಿನ ಮಾತುಕತೆ ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ದತ್ತಾ ನಿವಾಸಕ್ಕೆ ಆಗಮಿಸಿದ್ದರು. ಈ ಹಿಂದೆ ಜೆಡಿಎಸ್‌ ನಲ್ಲಿದ್ದಾಗ ಸ್ಪರ್ಧಿಸಿ ದತ್ತಾ ಶಾಸಕರಾಗಿದ್ದರು.

ಮಲ್ಲಿಕಾರ್ಜುನ್ ಖರ್ಗೆ ಒಂದು ಕ್ಷೇತ್ರದಲ್ಲಿ ನಿಂತು ಗೆದ್ದು ತೋರಿಸಲಿ, ಆಮೇಲೆ ಸಿಎಂ ಆಗ

ದತ್ತಾ ಜೆಡಿಎಸ್ ಸೇರ್ಪಡೆ ಏನಿಲ್ಲ, ಜೆಡಿಎಸ್ ಅವರಿದ್ದ ಮನೆ. ಇದು ಅವರ ಕಳೆದ 50 ವರ್ಷದ ಮನೆ, ಅವರಿಗೆ ಅವರ ಮನೆಗೆ ಬರೋದಕ್ಕೆ ಏನು. ದತ್ತಾ ಅವರಿಗೆ ಜೆಡಿಎಸ್ ತಂದೆ-ತಾಯಿ ಮನೆ ತರ ಬೇರೆ ಏನು ಅಲ್. ಸೇರೋ ಕಾರ್ಯಕ್ರಮ ಏನಿಲ್ಲ, ಅವರ ಮನೆಗೆ ಅವರು ಬಂದಿದ್ದಾರೆ. ದೇವೇಗೌಡರೇ ಹೇಳಿದ ಮೇಲೆ ಎಲ್ಲಾ ಮುಗಿಯಿತು. ಘೋಷಣೆ ಅಭ್ಯರ್ಥಿ ಧನಂಜಯ್ ಅವರನ್ನ ಕರೆಸಿ ದೇವೇಗೌಡರು ಮಾತನಾಡುತ್ತಾರೆ. ಜೆಡಿಎಸ್ ಗೆಲ್ಲಬೇಕು, ಕಾರ್ಯಕರ್ತರು ಉಳಿಯಬೇಕು, ದೇವೇಗೌಡರು, ಕುಮಾರಣ್ಣ ನಿರ್ಣಯ ಮಾಡುತ್ತಾರೆ. ಅರ್ಜಿ ಹಾಕಿಸಲು ದೇವೇಗೌಡರು ನಾನೇ ಬರುತ್ತೇನೆ ಎಂದು ಹೇಳಿದ್ದಾರೆ. ಕಡೂರಿನ ಯಗಟಿ ಗ್ರಾಮದ ದತ್ತ ಮನೆಯಲ್ಲಿ ರೇವಣ್ಣ ಹೇಳಿಕೆ ನೀಡಿದ್ದಾರೆ.

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!