ಶ್ರೀರಾಮುಲುಗೆ ತೊಡೆತಟ್ಟಿದ್ದ ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ

By Web DeskFirst Published Mar 1, 2019, 3:09 PM IST
Highlights

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಶ್ರೀರಾಮುಲು ವಿರುದ್ಧ ತೊಡೆತಟ್ಟಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಇಂದು ಕಾಂಗ್ರೆಸ್ ಸೇರಿದರು.

ಬೆಂಗಳೂರು, (ಮಾ.01): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾದರು. 

ಕೆ.ಪಿ.ಸಿ.ಸಿ. ಅಧ್ಯಕ್ಷರಾದ ರವರ ನೇತೃತ್ವದಲ್ಲಿ ಮೊಳಕಾಲ್ಮೂರು ಮಾಜಿ ಶಾಸಕರಾದ ತಿಪ್ಪೆಸ್ವಾಮಿಯವರು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಈ ಸಮಯದಲ್ಲಿ ಸಂಸದ ಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್ ಆಂಜನೇಯ ಹಾಗೂ ಇನ್ನಿತರ ಹಿರಿಯ ನಾಯಕರು ಉಪಸ್ಥಿತರಿದ್ದರು. pic.twitter.com/a9cSAowTyn

— Karnataka Congress (@INCKarnataka)

 ಇಂದು (ಶುಕ್ರವಾರ)  ಕೆಪಿಸಿಸಿ ಕಚೇರಿಯಲ್ಲಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಶಾಸಕ ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ್ ಉಪಸ್ಥಿತಿಯಲ್ಲಿ ಸೇರ್ಪಡೆಯಾದರು.

ಕಾಂಗ್ರೆಸ್ ಅತೃಪ್ತ ಶಾಸಕ ಬಿಜೆಪಿ ಸೇರ್ಪಡೆ ಖಚಿತಪಡಿಸಿದ ಈಶ್ವರಪ್ಪ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದ ಕಾರಣದಿಂದ ತಿಪ್ಪೇಸ್ವಾಮಿ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ. ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಪರಭಾವಗೊಂಡಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಟಿಕೇಟ್ ಬಯಸಿದ್ದರು. ಆದ್ರೆ, ಕಾಂಗ್ರೆಸ್ ಟಿಕೇಟ್ ನೀಡಲು ನಿರಾಕರಿಸಿತ್ತು.

ಇದೀಗ ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್, ತಿಪ್ಪೇಸ್ವಾಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ.

click me!