
ಬೆಂಗಳೂರು(ಆ.12): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು(ಬುಧವಾರ) ಹುಟ್ಟುಹಬ್ಬದ ಸಂಭ್ರಮ. ಇಂದು 72 ನೇ ವಸಂತಕ್ಕೆ ಕಾಲಿಡುತ್ತಿರವ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರು ಹುಟ್ಟುಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಆತ್ಮೀಯರು ಆದ ಸಿದ್ದರಾಮಯ್ಯ ರವರಿಗೆ ಜನುಮ ದಿನದ ಶುಭಾಶಯಗಳು. ಸುಖ ಶಾಂತಿ ನೆಮ್ಮದಿ ಆರೋಗ್ಯ ಮತ್ತು ಯಶಸ್ಸು ಸದಾ ನಿಮ್ಮೊಂದಿಗಿರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಒಂದೆರಡು ದಿನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಸಾಧ್ಯತೆ
ಆದರೆ, ಸಿದ್ದರಾಮಯ್ಯ ಅವರಿಗೆ ಮಹಾಮಾರಿ ಕೊರೋನಾ ವೈರಸ್ ದೃಢಪಟ್ಟಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ನಡೆಸಲಾಗಿರುವ ಕೋವಿಡ್ ಪರೀಕ್ಷಾ ವರದಿ ಸದ್ಯದಲ್ಲೇ ಬರಲಿದ್ದು, ನೆಗೆಟಿವ್ ಬಂದರೆ ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.