ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ ವಿಪಕ್ಷದ ನಾಯಕ: ದೇವೇಗೌಡ

Published : Jul 26, 2023, 10:18 AM IST
ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ ವಿಪಕ್ಷದ ನಾಯಕ: ದೇವೇಗೌಡ

ಸಾರಾಂಶ

ಕುಮಾರಸ್ವಾಮಿ ಎಲ್ಲಿ ಆಗುತ್ತಾರೆ? ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್‌ ಯತ್ನಾಳ ಪ್ರತಿಪಕ್ಷದ ನಾಯಕನಾಗಬೇಕು ಎನ್ನುವ ರೀತಿಯಲ್ಲಿಯೇ ಬಿಜೆಪಿಯಲ್ಲಿ ಸಭೆಯಾಗಿದೆ. ಒಂದು ಹಂತದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಹೀಗಿರುವಾಗ ಏನೇನೋ ಸುದ್ದಿ ಪ್ರಕಟಿಸುವುದು ಸರಿಯಲ್ಲ ಎಂದ ಎಚ್‌.ಡಿ.ದೇವೇಗೌಡ 

ಬೆಂಗಳೂರು(ಜು.26):  ‘ಸಿ.ಟಿ.ರವಿ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್‌ ಯತ್ನಾಳ ಪ್ರತಿಪಕ್ಷದ ನಾಯಕ ಆಗಬೇಕು’ ಎಂಬ ಚರ್ಚೆ ಬಿಜೆಪಿ ಪಕ್ಷದ ಸಭೆಯಲ್ಲಿ ಆಗಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕರಾಗುತ್ತಾರೆ ಎಂದು ಸುದ್ದಿ ಇದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಡಿಮಿಡಿಗೊಂಡ ಅವರು, ‘ಕುಮಾರಸ್ವಾಮಿ ಎಲ್ಲಿ ಆಗುತ್ತಾರೆ? ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್‌ ಯತ್ನಾಳ ಪ್ರತಿಪಕ್ಷದ ನಾಯಕನಾಗಬೇಕು ಎನ್ನುವ ರೀತಿಯಲ್ಲಿಯೇ ಬಿಜೆಪಿಯಲ್ಲಿ ಸಭೆಯಾಗಿದೆ. ಒಂದು ಹಂತದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಹೀಗಿರುವಾಗ ಏನೇನೋ ಸುದ್ದಿ ಪ್ರಕಟಿಸುವುದು ಸರಿಯಲ್ಲ’ ಎಂದು ತಿಳಿಸಿದರು.

‘ಸರ್ಕಾರ ಉರುಳಿಸಲು ಎಚ್‌ಡಿಕೆ ಅಪ್ಪನಿಂದಲೂ ಸಾಧ್ಯವಿಲ್ಲ’ ಕುಮಾರಸ್ವಾಮಿ ವಿರುದ್ಧ ಮೊಯ್ಲಿ ಕಿಡಿ

ಜಿಟಿಡಿ ನೇತೃತ್ವದಲ್ಲಿ ಸಮಿತಿ ರಚನೆ:

ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಹಿರಿಯ ಶಾಸಕರೂ ಆಗಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಇದೇ ವೇಳೆ ಗೌಡರು ತಿಳಿಸಿದರು.

ನೈಸ್‌ ವಿರುದ್ಧ ಕ್ರಮ ಏಕಿಲ್ಲ: ನೈತಿಕತೆ ಕುರಿತು ಪತ್ರಕರ್ತರಿಗೆ ಬೋಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈಸ್‌ ಸದನ ಸಮಿತಿ ವರದಿ ಕುರಿತು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಖಾರವಾಗಿ ಪ್ರಶ್ನಿಸಿದ್ದಾರೆ.

ನೈತಿಕತೆ ಬಗ್ಗೆ ಮಾತು ಸಾಲದು, ನೈಸ್‌ ಸದನ ಸಮಿತಿ ವರದಿ ಬಗ್ಗೆ ಕ್ರಮ ಏಕಿಲ್ಲ? ಸಿದ್ದುಗೆ ದೇವೇಗೌಡ ಚಾಟಿ

ನೈತಿಕತೆ ಪಾಲನೆ ಮಾಡುವ ಬಗ್ಗೆ ಪತ್ರಕರ್ತರಿಗೆ ಒಳ್ಳೆಯ ಸಂದೇಶ ನೀಡಿದ್ದಾರೆ. ಆದರೆ, ಅವರ ಪಕ್ಷದ ಮುಖಂಡ ಟಿ.ಬಿ.ಜಯಚಂದ್ರ ನೀಡಿರುವ ನೈಸ್‌ ಸಂಸ್ಥೆಯ ರಸ್ತೆ ಯೋಜನೆ ಕುರಿತ ವರದಿ ಮೇಲೆ ಯಾಕೆ ದೃಢ ನಿಲುವು ಹೇಳುತ್ತಿಲ್ಲ. ಸುಮಾರು 11 ಸಾವಿರ ಎಕರೆಯಷ್ಟು ಭೂಮಿ ಸರ್ಕಾರದ ವಶವಾಗಬೇಕಿದೆ. ಇದರಿಂದ ಬರುವ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಬಹುದು. ನೈತಿಕತೆಯ ಮಾತುಗಳು ಹೃದಯದ ಅಂತರಾಳದಿಂದ ಬರಬೇಕು’ ಎಂದು ತೀಕ್ಷ್ಣವಾಗಿ ಹೇಳಿದರು.

ಮುಂದೆ ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ, ಲೋಕಸಭೆ ಚುನಾವಣೆ ಬರಲಿವೆ. ಇದಕ್ಕಾಗಿ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸಲು ಕಾರ್ಯಪ್ರವೃತ್ತರಾಗಿದ್ದೇವೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಪಕ್ಷವನ್ನು ಸದೃಢಗೊಳಿಸಲಾಗುವುದು. ಸಮಿತಿಯು ಪಕ್ಷವನ್ನು ಬಲಗೊಳಿಸಲುವಲ್ಲಿ ರೂಪುರೇಷೆ ರೂಪಿಸಲಿದೆ. ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ
ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ