ಪಂಚರಾಜ್ಯ ಚುನಾವಣೆಗೆ ಡಿಕೆಶಿ ಹಣ ಸಾಗಿಸಿರುವುದು ಎಲ್ಲರಿಗೂ ಗೊತ್ತಿದೆ; ಎಚ್‌ಡಿ ದೇವೇಗೌಡ ವಾಗ್ದಾಳಿ

Published : Jan 06, 2024, 01:42 PM ISTUpdated : Jan 06, 2024, 01:44 PM IST
ಪಂಚರಾಜ್ಯ  ಚುನಾವಣೆಗೆ  ಡಿಕೆಶಿ ಹಣ ಸಾಗಿಸಿರುವುದು ಎಲ್ಲರಿಗೂ ಗೊತ್ತಿದೆ; ಎಚ್‌ಡಿ ದೇವೇಗೌಡ ವಾಗ್ದಾಳಿ

ಸಾರಾಂಶ

ಪಂಚರಾಜ್ಯ ಚುನಾವಣೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಧಟತನದಿಂದ ಹಣ ಸಂಗ್ರಹಿಸಿದ್ದು, ಎಷ್ಟು ಹಣ ಎಲ್ಲಿಗೆ ಹೋಗಿದೆ ಎಂಬ ಮಾಹಿತಿ ಎಲ್ಲರಿಗೂ ಗೊತ್ತಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ಬೆಂಗಳೂರು (ಜ.6) : ಪಂಚರಾಜ್ಯ ಚುನಾವಣೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಧಟತನದಿಂದ ಹಣ ಸಂಗ್ರಹಿಸಿದ್ದು, ಎಷ್ಟು ಹಣ ಎಲ್ಲಿಗೆ ಹೋಗಿದೆ ಎಂಬ ಮಾಹಿತಿ ಎಲ್ಲರಿಗೂ ಗೊತ್ತಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆ ವೇಳೆ ಬೇರೆ ರಾಜ್ಯಗಳಿಗೆ ಹೋಗಿರುವುದು ನಮ್ಮ ರಾಜ್ಯದ ಸಂಪತ್ತು. ಉಪಮುಖ್ಯಮಂತ್ರಿಗಳು ಎಲ್ಲೆಲ್ಲಿ ಹೋಗಿದ್ದಾರೆ? ಎಷ್ಟು ಹಣ ಸಾಗಿಸಿದ್ದಾರೆ? ಎಷ್ಟು ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದೆ? ಈ ಹಣ ಹೋಗಿರುವುದು ಬೆಂಗಳೂರಿನಿಂದ ಎನ್ನುವುದು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಆರ್ಥಿಕ ಸಲಹೆಗಾರರಾಗಿ ಬಸವರಾಜ ರಾಯರೆಡ್ಡಿ ನೇಮಕ; ವಿಶ್ವದ ದೊಡ್ಡ ಆರ್ಥಿಕ ತಜ್ಞ ಎಂದ ಎಚ್‌ಡಿಕೆ

ರಾಜ್ಯದ ಸಂಪತ್ತು ನೈಸ್‌ ಸಂಸ್ಥೆಯ ಮೂಲಕ ಬೇರೆ ರಾಜ್ಯಗಳಿಗೆ ಹೋಗಿದೆ. ನೈಸ್‌ ಮಾತ್ರವಲ್ಲ, ಬೆಂಗಳೂರಿನ ಎಲ್ಲ ಸಂಸ್ಥೆಗಳು ಮತ್ತು ಜಲಸಂಪನ್ಮೂಲ ಇಲಾಖೆ ಅವರ ಬಳಿಯೇ ಇದೆ. ಏನೇನು ಆಗುತ್ತಿದೆ ಎಂದು ಹೇಳಿದರೆ ನಾಚಿಕೆಯಾಗುತ್ತದೆ. ಮುಖ್ಯಮಂತ್ರಿಗಳು ದೇಶ, ಬಡವರ ಬಗ್ಗೆ ಉಪದೇಶ ಮಾಡುತ್ತಾರೆ. ಆದರೆ, ಇಂತಹ ಅಕ್ರಮಗಳನ್ನು ತಡೆಯುವ ಕೆಲಸ ಯಾಕೆ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್