ಮೂಲ ಜೆಡಿಎಸ್ ನಮ್ಮದೆ. ಅದರ ಖಾತೆ, ಪಾಣಿ ಎಲ್ಲಾ ನಮ್ಮ ಹೆಸರಿನಲ್ಲಿದೆ. ಈಗಲೂ ಎಚ್.ಡಿ.ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ ಜೆಡಿಎಸ್ ನ್ನು ಕಟ್ಟುತ್ತೇವೆ. ಹೊಸ ಪಕ್ಷವೊ ತೃತೀಯ ರಂಗವೊ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವೂ ಮುಂದಿನ ದಿನಗಳಲ್ಲಿ ತೀರ್ಮಾನ ಆಗಲಿದೆ: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ
ಮೈಸೂರು(ನ.26): ಕಳೆದ ಚುನಾವಣೆ ವೇಳೆಯೇ ಜಿ.ಟಿ. ದೇವೇಗೌಡರು ಕಾಂಗ್ರೆಸ್ ಗೆ ಹೋಗಿದ್ದರೆ ಇವತ್ತು ಸಚಿವರಾಗಿ ಇರುತ್ತಿದ್ದರು. ನಾವೇ ಜೆಡಿಎಸ್ ಪಕ್ಷ ಬಲ ಪಡಿಸಲು ಜೆಡಿಎಸ್ ನಲ್ಲಿ ಉಳಿಸಿಕೊಂಡಿದೆ. ಈಗ ಅವರ ಕತ್ತು ಕುಯ್ಯುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಆರೋಪಿಸಿದರು.
ಸೋಮವಾರ ಶಾಸಕ ಜಿ.ಟಿ. ದೇವೇಗೌಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿಚಾರಗಳ ಬಗ್ಗೆ ನಾನು ಜಿ.ಟಿ.ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇನೆ. ಇನ್ನೂ ಎರಡು ದಿನ ಬಿಟ್ಟು ನಾನು ರಾಜ್ಯ ಪ್ರವಾಸ ಹೋಗುತ್ತಿದ್ದೇನೆ. ಆಗ ಕೆಲವು ನಾಯಕರನ್ನು ಭೇಟಿ ಮಾಡುತ್ತೇನೆ. ಆ ನಂತರ ಮತ್ತೆ ನಾನು ಜಿ.ಟಿ ದೇವೇಗೌಡರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.
ಒರಿಜಿನಲ್ ಜೆಡಿಎಸ್‌ಗೆ ನಾನೇ ಅಧ್ಯಕ್ಷ, ಇಂಡಿಯಾಕ್ಕೆ ನಮ್ಮ ಬೆಂಬಲ: ಇಬ್ರಾಹಿಂ
ಮೂಲ ಜೆಡಿಎಸ್ ನಮ್ಮದೆ. ಅದರ ಖಾತೆ, ಪಾಣಿ ಎಲ್ಲಾ ನಮ್ಮ ಹೆಸರಿನಲ್ಲಿದೆ. ಈಗಲೂ ಎಚ್.ಡಿ.ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ ಜೆಡಿಎಸ್ ನ್ನು ಕಟ್ಟುತ್ತೇವೆ. ಹೊಸ ಪಕ್ಷವೊ ತೃತೀಯ ರಂಗವೊ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವೂ ಮುಂದಿನ ದಿನಗಳಲ್ಲಿ ತೀರ್ಮಾನ ಆಗಲಿದೆ ಎಂದರು.
ಜೆಡಿಎಸ್ 12- 13 ಶಾಸಕರು ಬೇಸರಗೊಂಡಿದ್ದಾರೆ:
ಜೆಡಿಎಸ್ 12 ರಿಂದ 13 ಶಾಸಕರು ಪಕ್ಷದ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ಜಿ.ಟಿ.ದೇವೇಗೌಡರಂತೆ ಹಲವು ಜೆಡಿಎಸ್ ಶಾಸಕರುನೋವುನುಂಗಿದ್ದಾರೆ. ಈಗ ಅವರೆನ್ನಲ್ಲಾ ಒಗ್ಗೂಡಿಸುವ ಕೆಲಸವನ್ನ ನಾನು ಶುರು ಮಾಡಿದ್ದೇನೆ. ಮುಂದೆ ಏನೇನ್ ಆಗುತ್ತೆ ನೋಡೋಣ. ಈಗಲೂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ, ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು. ಜೆಡಿಎಸ್ ಹೆಸರಿನಲ್ಲೇ ನಾವು ಇರಬೇಕಾ? ತೃತೀಯ ರಂಗಕ್ಕೆ ಬೇರೆ ಹೆಸರು ಕೊಡಬೇಕಾ. ಮುಂದೆ ಎಲ್ಲವನ್ನೂ ಚರ್ಚೆ ಮಾಡುತ್ತೇನೆ. ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ ಎಂದರು. ಎಲ್ಲಾ ಜೆಡಿಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ, ಒಬ್ಬೊಬ್ಬರೇ ಮಾತು ಶುರು ಮಾಡಿದ್ದಾರೆ. ಕುಮಾರಸ್ವಾಮಿ ಈಗಲಾದರೂ ಬುದ್ಧಿ ಕಲಿಯಬೇಕು. ಜೆಡಿಎಸ್ ಅನ್ನು ಫ್ಯಾಮಿಲಿ ಕಂಪನಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಜೆಡಿಎಸ್ ಮೂಲ ಅಸ್ತಿತ್ವ ಸಾಧ್ಯ ಎಂದರು.
ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ತರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟು ಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ ಖರ್ಚು ಮಾಡಿ ಗೆದ್ದರು. ಈಗ ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲಿಂರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದಿದ್ದು ಮುಸ್ಲಿಂರಿಂದ ಎಂಬುದು ಈಗ ಸಾಬೀತಾಗಿದೆ. ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ ಎಂದರು.
ಸಿ.ಪಿ.ಯೋಗೇಶ್ವರ್ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರ ಬಗ್ಗೆ ಗಮನಹರಿಸಲಿ: ಮಾಜಿ ಶಾಸಕ ಸಾ.ರಾ.ಮಹೇಶ್
ಮೈಸೂರು: ಸಿ.ಪಿ.ಯೋಗೇಶ್ವರ್‌ಮೊದಲು ಪಕ್ಷದಶಾಸಕರ ಬಗ್ಗೆ ಗಮನಹರಿಸಲಿ. ಆಮೇಲೆ ಬೇಕಿದ್ದರೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್. ಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆ ಎಂಬಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಕ್ಷೇತ್ರದ ಜನರು ಯೋಗೇಶ್ವರ್‌ಗೆ ಅಶೀರ್ವಾದ ಮಾಡಿದ್ದಾರೆ. ಇನ್ನು ಮೂರು ವರ್ಷ ಜನರ ಸೇವೆ ಅವಕಾಶವಿದೆ ಎಂದರು.
ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಜಿ.ಟಿ.ದೇವೇಗೌಡ
ಕಾಂಗ್ರೆಸ್ ನಲ್ಲಿ 30 ರಿಂದ 35 ಶಾಸಕರು ಅಸಮಾದಾನಿತರಿದ್ದಾರೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದರು. ಅವರು ಯಾರ್ಯಾರು ಅಂತ ಯೋಗೇಶ್ವರ್‌ಗೆ ಚೆನ್ನಾಗಿ ಗೊತ್ತು. ಮೊದಲು ಕಾಂಗ್ರೆಸ್ ನ ಅಸಮಾಧಾನಿತ ಶಾಸಕರ ಹೆಸರುಗಳನ್ನು ಸಿಎಂ, ಡಿಸಿಎಂ ಅವರಿಗೆ ಕೊಡಲಿ. ಆಮೇಲೆ ಜೆಡಿಎಸ್ ಶಾಸಕರ ಬಗ್ಗೆ ಮಾತನಾಡಲಿ ಎಂದು ಅವರು ತಿರುಗೇಟು ನೀಡಿದರು.
ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಸ್ಥಾನದಿಂದ ಕೆಳಗಿಳಿಸಿದವರ ಪೈಕಿ ಇವರದು ಕೂಡ ಪ್ರಮುಖ ಪಾತ್ರ ಇದೆ. ಇವರೇನು ಅಂತ ನಮಗೂ ಗೊತ್ತಿದೆ. ಜೆಡಿಎಸ್ ಪ್ರಾದೇಶಿಕ ಪಕ್ಷವಾದರೂ ನಮ್ಮ ಶಾಸಕರು ದೇವೇಗೌಡರು, ಕುಮಾರಸ್ವಾಮಿ ಜೊತೆ ವಿಶ್ವಾಸದಲ್ಲಿದ್ದಾರೆ. ಯೋಗೇಶ್ವರ್‌ತಮ್ಮ ಸರ್ಕಾರ ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಅವರು ಸಲಹೆ ನೀಡಿದರು.