ಜನೋತ್ಸವದಲ್ಲಿ ಸರ್ಕಾರದ ಯೋಜನೆಗಳ ಅನಾವರಣ: ಸದಾನಂದಗೌಡ

By Kannadaprabha News  |  First Published Aug 25, 2022, 2:30 AM IST

ಪ್ರತಿ ತಾಲೂಕಿನ ಮುಖಂಡರ ಸಲಹೆಗಳನ್ನು ಸ್ವೀಕರಿಸಲಾಗಿದೆ. ಜನೋತ್ಸವಕ್ಕೆ ಒಟ್ಟು ಎರಡು ಲಕ್ಷ ಜನರನ್ನು ಸೇರಿಸುವ ಉದ್ದೇಶವಿದೆ:  ಡಿ.ವಿ.ಸದಾನಂದಗೌಡ 


ದೊಡ್ಡಬಳ್ಳಾಪುರ(ಆ.25):  ಬರುವ ಸೆಪ್ಟೆಂಬರ್‌ 8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ‍್ಯಕ್ರಮ ಸರ್ಕಾರದ ಜನಸ್ನೇಹಿ ಯೋಜನೆಗಳ ಅನಾವರಣದ ವೇದಿಕೆಯಾಗಲಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

ಕಾರ‍್ಯಕ್ರಮ ನಡೆಯುವ ಸ್ಥಳಪರಿಶೀಲನೆ ನಡೆಸಿ, ಬಳಿಕ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನೋತ್ಸವ ಕಾರ‍್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಚರ್ಚಿಸಲು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಜಿಲ್ಲಾ ತಾಲೂಕು ಮುಖಂಡರ ಪೂರ್ವಸಿದ್ಧತೆ ಸಭೆ ನಡೆಸಲಾಗಿದೆ. ಪ್ರತಿ ತಾಲೂಕಿನ ಮುಖಂಡರ ಸಲಹೆಗಳನ್ನು ಸ್ವೀಕರಿಸಲಾಗಿದೆ. ಜನೋತ್ಸವಕ್ಕೆ ಒಟ್ಟು ಎರಡು ಲಕ್ಷ ಜನರನ್ನು ಸೇರಿಸುವ ಉದ್ದೇಶವಿದೆ ಎಂದು ಹೇಳಿದರು.

Latest Videos

undefined

ಬಿಎಸ್‌ವೈಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ, ಬಿಜೆಪಿಗೆ ಬಲ: ಎಂಟಿಬಿ ನಾಗರಾಜ್‌

ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಮಾತನಾಡಿ, ಬೆಂಗಳೂರು ನಗರದ ಕೆಲ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಮಧುಗಿರಿ ಭಾಗದ ಕೆಲ ಕ್ಷೇತ್ರಗಳನ್ನೂ ಒಳಗೊಂಡಂತೆ 19ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಂದ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್‌ಪ್ರಕಾಶ್‌ ನಡ್ಡಾ ಅವರು ಭಾಗಿಯಾಗಲಿದ್ದು, ಸರ್ಕಾರದ 3 ವರ್ಷಗಳ ಸಾಧನೆಯ ಅನಾವರಣ ಈ ಸಮಾವೇಶದಲ್ಲಿ ನಡೆಯಲಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಸೆ.8ರಂದು ಜನೋತ್ಸವಕ್ಕೆ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಚರ್ಚಿಸಲಾಗಿದೆ. ಸುಮಾರು 1.5ರಿಂದ 2 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಅಚ್ಚುಕಟ್ಟಾದ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಹೈಕೋರ್ಟ್ ನಿಂದ ಎಂಎಲ್ಸಿ ಮುನಿರಾಜುಗೌಡ ವಿರುದ್ಧದ ಕೇಸ್‌ ರದ್ದು

ಸಭೆಯಲ್ಲಿ ಕೋಲಾರ ಸಂಸದ ಮುನಿಸ್ವಾಮಿ, ವಿಧಾನಪರಿಷತ್‌ ಸದಸ್ಯರಾದ ಅಶ್ವತ್ಥನಾರಾಯಣಗೌಡ, ವೈ.ಎ.ನಾರಾಯಣಸ್ವಾಮಿ, ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ಫಲಾನುಭವಿಗಳ ಪ್ರಕೋಷ್ಠ ಮುಖಂಡ ನೀರಜ್‌ ಮುನಿರಾಜ್‌, ವಕ್ತಾರರಾದ ಪುಷ್ಪಾಶಿವಶಂಕರ್‌, ನಗರಾಧ್ಯಕ್ಷ ಎಚ್‌.ಎಸ್‌.ಶಿವಶಂಕರ್‌ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಜನರನ್ನು ಕರೆತರುವ ಸಲುವಾಗಿ ಗ್ರಾಮ ಮಟ್ಟದ ಪ್ರತಿ ಬೂತ್‌, ಹೋಬಳಿ, ತಾಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ರಾಜ್ಯಕ್ಕೆ ಸಂದೇಶ ರವಾನಿಸಬೇಕು ಅಂತ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದ್ದಾರೆ. 
 

click me!