
ಭದ್ರಾವತಿ (ಏ.29) : ಈ ಬಾರಿ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಗುರಿಯೊಂದಿಗೆ ಬಿಜೆಪಿ ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶುಕ್ರವಾರ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಸಮಾಜಗಳ ಸ್ನೇಹಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ವೀರಶೈವ ಲಿಂಗಾಯತ (Veerashaiva lingayat community), ಒಕ್ಕಲಿಗ(Vakkaliga), ಮಡಿವಾಳ, ದೇವಾಂಗ, ಮರಾಠ ಮತ್ತು ಭಾವಸಾರ ಸೇರಿದಂತೆ ವಿವಿಧ ಸಮುದಾಯಗಳ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡು ಆಯಾ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿದರು. ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹೀರೋ ಅಲ್ಲ, ವಿಲನ್: ಕೆ.ಎಸ್.ಈಶ್ವರಪ್ಪ
ಬಿಜೆಪಿ ಸೇರ್ಪಡೆ:
ಕಾಂಗ್ರೆಸ್-ಜೆಡಿಎಸ್ ತೊರೆದು ಹಲವು ಮಂದಿ ಬಿ.ವೈ.ರಾಘವೇಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿನೋದ್, ಉಪಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್, ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದ ಜಿಲ್ಲಾಧ್ಯಕ್ಷ ಕೆ. ಮೋಹನ್, ಮಂಜುನಾಥ ಸಾಮಿಲ್ ಬಾಬಣ್ಣ, ವೆಂಕಟೇಶ್ವರ ಸಾಮಿಲ್, ಮರಾಠ ಸಮಾಜದ ಮುಖಂಡ ಗಣೇಶ್ ರಾವ್ ಹಾಗೂ ಜೆಡಿಎಸ್ ಪಕ್ಷ ತೊರೆದು ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ. ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಾಲೇರ ಶೇಖರಪ್ಪ, ಬಿ. ರವಿ, ಮುರಳಿಧರ್, ಎಂಪಿಎಂ ಯೂನಿಯನ್ ಮಾಜಿ ಕಾರ್ಯದರ್ಶಿ ಬಿ.ಪ್ರಶಾಂತ್, ಅಶೋಕ್ ರಾವ್, ಬೀರಪ್ಪ, ಸಾರಿಕಾ, ಜ್ಯೋತಿ, ಸಂಗೀತ, ವೇದಮೂರ್ತಿ, ಎಚ್.ಬಿ. ರಾಮಪ್ಪ, ಬಸವರಾಜ್ ತಾರಿಕಟ್ಟೆ, ಯದು, ಜಗದೀಶ್, ಜೈಶೀಲ, ಭೈರಪ್ಪ ಇನ್ನಿತರರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಪಕ್ಷದ ತತ್ವ-ಸಿದ್ಧಾಂತ ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಅಭ್ಯರ್ಥಿ ಮಂಗೋಟೆ ರುದ್ರೇಶ್, ವಿಧಾನ ಪರಿಷತ್ತು ಸದಸ್ಯ ಎಸ್.ರುದ್ರೇಗೌಡ, ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ಚುನಾವಣಾ ಪ್ರಭಾರ ಅಶೋಕ್ ಮೂರ್ತಿ, ಮುಖಂಡರಾದ ಉತ್ತರಾಖಂಡ್‌ನ ಜಿತೇಂದ್ರಸಿಂಗ್, ಸಿ. ಮಂಜುಳ, ಪವಿತ್ರಾ ರಾಮಯ್ಯ, ಜಿ.ಆನಂದಕುಮಾರ್, ವಾದಿರಾಜ್, ಚನ್ನೇಶ್, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ರಾಮಚಂದ್ರ, ಸಿದ್ದಲಿಂಗಯ್ಯ, ಮಂಜುನಾಥ್ ಕದಿರೇಶ್, ಕವಿತಾ ರಾವ್, ಬಿ.ಎಂ ಸಂತೋಷ್ ಮತ್ತು ಗೋಕುಲ ಕೃಷ್ಣ, ಬಿ.ಎಸ್. ಶ್ರೀನಾಥ್ ಇನ್ನಿತರರು ಉಪಸ್ಥಿತರಿದ್ದರು.
ಜೆಡಿಎಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖ: ಚಲುವರಾಯಸ್ವಾಮಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.