ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣವನ್ನು ಬಡವರು, ದೀನದಲಿತರು ಸೇರಿ ಎಲ್ಲ ವರ್ಗದವರಿಗೂ ತಲುಪಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು (ಫೆ.19): ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಸಾರ್ವಜನಿಕರ ಹಣವನ್ನು ಬಡವರು, ದೀನದಲಿತರು ಸೇರಿ ಎಲ್ಲ ವರ್ಗದವರಿಗೂ ತಲುಪಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಶೇ.98ರಷ್ಟು ಮಹಿಳೆಯರು ಯೋಜನೆಗಳ ಸದುಪಯೋಗ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಸಮರ್ಥವಾಗಿ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನೂ 5ವರ್ಷಗಳ ಕಾಲ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತು ನೀಡಲಾಗುವುದು ಎಂದರು.
ಒಂದು ವರ್ಷದಲ್ಲಿ ತಾಲೂಕಿನ ಎಲ್ಲಾ ಹಳ್ಳಿಗೆ ಶುದ್ಧ ಕುಡಿವ ನೀರು: ಮುಂದಿನ ಒಂದು ವರ್ಷದಲ್ಲಿ ತಾಲೂಕಿನ ಎಲ್ಲಾ ಹಳ್ಳಿಗಳಿಗೂ ವಿವಿಸಾಗರದಿಂದ ಕುಡಿಯುವ ನೀರು ಕೊಡುತ್ತೇನೆ. ಅಲ್ಲದೇ ಜಿಲ್ಲೆಯ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ನಾನು ಮತ್ತು ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು. ತಾಲೂಕಿನ ಕೂನಿಕೆರೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿವಿ ಸಾಗರದಿಂದ ಶುದ್ಧೀಕರಿಸಿದ ಶುದ್ಧ ಕುಡಿವ ನೀರನ್ನು ವಿವಿಪುರ ಮತ್ತು ಇತರೆ 11 ಹಳ್ಳಿಗಳೂ, ಗುಡಿಹಳ್ಳಿ ಮತ್ತು ಇತರೆ 15 ಹಳ್ಳಿಗಳು ಹಾಗೂ ಈ ಮಾರ್ಗವಾಗಿ ಬರುವ 17 ಹಳ್ಳಿಗಳಿಗೆ ಬಹುಗ್ರಾಮ ಕುಡಿವ ನೀರು ಸರಬರಾಜು ಯೋಜನೆ 2ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
undefined
ಪ್ರಧಾನಿ ಮೋದಿಯವರ 10 ವರ್ಷದ ಸಾಧನೆ ಶೂನ್ಯ: ಸಚಿವ ಸಂತೋಷ್ ಲಾಡ್
ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಿಸಲು ಮಾರ್ಚ್ 3ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದು, ಕಾಮಗಾರಿ ಎಲ್ಲಾ ಹಂತ ವೀಕ್ಷಿಸಿ ಪರಿಶೀಲಿಸಿ, ಕಾಮಗಾರಿಗೆ ಚುರುಕು ಮುಟ್ಟಿಸಿ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಳಿದ್ದಾರೆ. ಜನತೆ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಕ್ಷೇತ್ರದಲ್ಲಿ ನಾನು ಅಧಿಕಾರಕ್ಕೆ ಬರಲು ಸಾಧ್ಯವಾಗಿದ್ದು ಅವರ ಋಣ ತೀರಿಸುವ ಕೆಲಸ ಮಾಡುತ್ತೇವೆ. ದೇಶದ ಇತಿಹಾಸದ ಪುಟ ತೆರೆದು ನೋಡಿದರೆ ಅಭಿವೃದ್ಧಿ ಪರ ಕೆಲಸ ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷವೇ ಪ್ರಧಾನವಾಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರದ್ದು ಪ್ರಚಾರ ಕಡಿಮೆ ಕೆಲಸ ಜಾಸ್ತಿ. ಅಭಿವೃದ್ಧಿಯೇ ನಮ್ಮ ಆಡಳಿತದ ಮೂಲಮಂತ್ರ. ಆದರೆ ಬಿಜೆಪಿವರು ಬರೀ ಸುಳ್ಳು ಹೇಳುತ್ತಾ ಪ್ರಚಾರ ಪಡೆಯುತ್ತಾರೆ.
ಯುಗಾದಿ ನಂತರ ರಾಜ್ಯದಲ್ಲಿ ಧಾರ್ಮಿಕ ಮುಖಂಡನ ಸಾವಾಗಲಿದ್ದು, ಒಳ್ಳೆಯ ಮಳೆ-ಬೆಳೆಯಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ!
ಮಹಿಳೆಯರು ಸದೃಢರಾದರೆ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ನಮ್ಮ ಸರ್ಕಾರ ಮನಗಂಡು ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳು ನೀಡಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಶೇ.74ರಷ್ಟು ಜನತೆ ಒಪ್ಪಿಕೊಂಡಿದ್ದಾರೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿ, ಹಿರಿಯೂರು ಚರಿತ್ರೆಯಲ್ಲಿ ಅತ್ಯಂತ ಹೆಚ್ಚು ಮತಗಳಿಂದ ಸುಧಾಕರ್ ರವರು ಗೆಲುವು ಸಾಧಿಸಲು ಈ ಕ್ಷೇತ್ರದ ಜನತೆ ಕಾರಣಿಭೂತರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟಂತಹ ಎಲ್ಲಾ ಗ್ಯಾರಂಟಿ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದು ಕೊಂಡಿದೆ. ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಶಾಸಕರು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ ಎಂದರು.