ಕಾಂಗ್ರೆಸ್‌ನಲ್ಲಿ ಸಿಗದ ಸೂಕ್ತ ಸ್ಥಾನಮಾನ: ಪರಮೇಶ್ವರ ಹೇಳಿದ್ದಿಷ್ಟು

By Kannadaprabha News  |  First Published Jun 26, 2022, 7:00 AM IST

*  ಅಸ್ಥಿರತೆ ಹಿಂದೆ ಬಿಜೆಪಿ ಇದೆ ಅಂತ ಜಗತ್ತಿಗೇ ಗೊತ್ತು
*  ಇನ್ನು ತಮಗೆ ಪಕ್ಷದಲ್ಲಿ ಸ್ಥಾನಮಾನ ಕೊಡುತ್ತಿರುವ ಬಗ್ಗೆ ಕಿಂಚಿತ್ತೂ ಬೇಸರ ಇಲ್ಲ
*  ಬಿಜೆಪಿಯವರೇ ಮಾಡಿಸುತ್ತಿದ್ದಾರೆ ಎನ್ನುವಂತದ್ದು ಇಡೀ ಜಗತ್ತಿಗೆ ಗೊತ್ತಾಗಿದೆ


ಕಲಬುರಗಿ(ಜೂ.26): ಬಿಜೆಪಿಯವರು ಕರ್ನಾಟಕದಲ್ಲಿ ಮಾಡಿದ್ದನ್ನೇ ಮಹಾರಾಷ್ಟ್ರದಲ್ಲೂ ಮಾಡುತ್ತಿದ್ದು, ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದು ಕಾಂಗ್ರೆಸ್‌ ಮುಖಂಡ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷಕ್ಕೆ ಬಹುಮತ ಬರದೇ ಇದ್ದ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸುವುದು ಸಾಮಾನ್ಯ. ಇದಕ್ಕೆ ದೇಶದ ಸಂವಿಧಾನದಲ್ಲಿಯೇ ಅವಕಾಶ ಇದೆ. ಅದಕ್ಕಾಗಿ ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಸೇರಿ ಸರ್ಕಾರ ರಚನೆ ಮಾಡಿವೆ. ಆದರೆ ಆಂತರಿಕವಾಗಿ ಇದಕ್ಕೆ ಪ್ರಚೋದನೆ ಮಾಡಿ ಸರಕಾರ ಬೀಳಿಸುವುದು ಬಿಜೆಪಿಯ ವ್ಯವಸ್ಥಿತವಾದ ಸಂಚು ಮಾಡಿದೆ ಎಂದರು.

Tap to resize

Latest Videos

ಪರಮೇಶ್ವರ ಮುಂದಿನ ಸಿಎಂ ಘೋಷಿಸಿ: ಕಾಂಗ್ರೆಸ್‌ಗೆ ಶೆಟ್ಟರ್‌ ಸವಾಲ್‌

ಇದು ಬಿಜೆಪಿಯವರೇ ಮಾಡಿಸುತ್ತಿದ್ದಾರೆ ಎನ್ನುವಂತದ್ದು ಇಡೀ ಜಗತ್ತಿಗೆ ಗೊತ್ತಾಗಿದೆ. ಈ ಸರ್ಕಾರ ಕೆಡವಿ ತಮ್ಮ ಸರಕಾರ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ಹವಣಿಸುತ್ತಿದೆ. ಇದು ಬಹಳ ದಿನ ನಡೆಯುವುದಿಲ್ಲ. ಇದು ಒಳ್ಳೆಯ ಬೆಳವಣಿಗೆ ಖಂಡಿತ ಅಲ್ಲ. ಇದನ್ನು ತಡೆಯಲು ಚುನಾವಣಾ ಕಾಯ್ದೆಗಳಲ್ಲಿ ತಿದ್ದುಪಡಿ ತರುವ ಅಗತ್ಯವಿದೆ. ಇಡೀ ದೇಶದಲ್ಲಿಯೇ ಇದನ್ನ ಚರ್ಚೆ ಮಾಡಿ ದೊಡ್ಡ ಬದಲಾವಣೆ ತರಬೇಕಾಗಿದೆ. ಇಲ್ಲದಿದ್ದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಅಗೋದಿಲ್ಲ ಎಂದರು.

ಇನ್ನು ತಮಗೆ ಪಕ್ಷದಲ್ಲಿ ಸ್ಥಾನಮಾನ ಕೊಡುತ್ತಿರುವ ಬಗ್ಗೆ ಕಿಂಚಿತ್ತೂ ಬೇಸರ ಇಲ್ಲ ಎಂದ ಅವರು ಎಂಟು ವರ್ಷ ಸತತ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ನಂತರ ಬಂದ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ, ಯಾವುದೇ ರೀತಿಯ ಬೇಸರವಿಲ್ಲ ಎಂದರು.
 

click me!