
ಗದಗ, (ಆ.14): ಜಿಲ್ಲೆಯ ಇಬ್ಬರು ಪ್ರಭಾವಿ ಕಾಂಗ್ರೆಸ್ ನಾಯಕರು, ಮಾಜಿ ಶಾಸಕರಾದ ಡಿ.ಆರ್.ಪಾಟೀಲ್ ಮತ್ತು ಜಿ.ಎಸ್.ಗಡ್ಡದೇವರಮಠ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದಲ್ಲಿ ಸ್ವಾತಂತ್ರ್ಯ ಯೋಧರ ಕುಟುಂಬದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಆರ್.ಪಾಟೀಲ ಮತ್ತು ಜಿ.ಎಸ್.ಗಡ್ಡದೇವರಮಠ, ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ವಿ.ಶ್ರೀನಿವಾಸ ಪ್ರಸಾದ್
ಕೆ.ಎಚ್.ಪಾಟೀಲ್ ಅಕಾಲಿಕ ನಿಧನದ ನಂತರ ಗದಗ ಕ್ಷೇತ್ರದಿಂದ ಸ್ಪರ್ಧಿಸಿ ಡಿ ಆರ್ ಪಾಟೀಲ್ ಜಯ ಗಳಿಸಿದ್ದರು. ಅವರು 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಗದಗ ಕ್ಷೇತ್ರವನ್ನು ಎಚ್.ಕೆ.ಪಾಟೀಲ್ ಅವರಿಗೆ ಬಿಟ್ಟು ಕೊಟ್ಟಿದ್ದರು.
2019ರಲ್ಲಿ ಡಿ ಆರ್ ಪಾಟೀಲ್ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಶಿವಕುಮಾರ್ ಉದಾಸಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ನಂತರ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ಸ್ವಲ್ಪಮಟ್ಟಿಗೆ ಅಂತರ ಕಾಯ್ದುಕೊಂಡಿದ್ದರು.
ಇದೀಗ ಡಿ.ಆರ್.ಪಾಟೀಲ್ ಸದ್ಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು, ಪಕ್ಷ ಸಂಘಟನೆಗೆ ಗಮನ ಕೊಡುವುದಾಗಿ ತಿಳಿಸಿದ್ದಾರೆ. ಇನ್ನು ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಎರಡು ಬಾರಿ ಶಿರಹಟ್ಟಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇದೀಗ ಅವರು ಸಹ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರು ಏಕಕಾಲಕ್ಕೆ ಈ ನಿರ್ಧಾರ ಪ್ರಕಟಿಸಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.