ಗಣೇಶೋತ್ಸವ ವೇಳೆ ಡಿಜೆ ನಿಷೇಧ ಇಲ್ಲ, ನಿಯಮ ಪ್ರಕಾರ ಬಳಕೆ: ಸಚಿವ ಶಿವರಾಜ್ ತಂಗಡಗಿ

Published : Aug 25, 2025, 07:09 AM IST
Shivaraj tangadagi

ಸಾರಾಂಶ

ಡಿಜೆ ನಿಷೇಧ ಎಂಬ ಬಿಜೆಪಿ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್‌ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್‌ ಇರಬೇಕು ಎಂಬ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದರು.

ಕೊಪ್ಪಳ (ಆ.25): ಗಣೇಶ ಹಬ್ಬದಲ್ಲಿ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ, ಆದರೆ, ಡಿಜೆ ನಿಷೇಧ ಮಾಡಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿಜೆ ನಿಷೇಧ ಎಂಬ ಬಿಜೆಪಿ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್‌ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್‌ ಇರಬೇಕು ಎಂಬ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು. 18ನೇ ವಯಸ್ಸಿಗೆ ಮತದಾನದ ಹಕ್ಕುನೀಡಿದ್ದು ನಮ್ಮ ಕಾಂಗ್ರೆಸ್ ಹೀಗಿದ್ದ ಮೇಲೆ ನಾವು ಯುವಕರಿಗೆ ಅದು ಹೇಗೆ ಡಿಜೆ ಬಳಕೆಗೆ ನಿಷೇಧ ಹೇರಲು ಸಾಧ್ಯವೆಂದು ತಂಗಡಗಿ ಹೇಳಿದರು.

ರಾಜ್ಯಕ್ಕೆ ಬಿಳಿ ಆನೆ: ತುಂಗಭದ್ರಾ ಬೋರ್ಡ್‌ನಿಂದಲೇ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಈಗ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ವಿಳಂಬವಾಗಲು ಬೋರ್ಡ್ ನೇರ ಹೊಣೆ ಎಂದು ವಾಗ್ದಾಳಿ ಮಾಡಿದ್ದಾರೆ. ತುಂಗಭದ್ರಾ ಬೋರ್ಡ್ ನಿರ್ವಹಣೆಯಲ್ಲಿಯೂ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ಅದರ ಕಾರ್ಯದರ್ಶಿ ಆಂಧ್ರ ಮತ್ತು ಕರ್ನಾಟಕಕ್ಕೆ ಸೇರಿದವರು ಆಗಬಾರದು ಎನ್ನುವ ನಿಯಮ ಇದೆ. ಆದರೂ ಕಳೆದ ಹತ್ತಾರು ವರ್ಷಗಳಿಂದ ತುಂಗಭದ್ರಾ ಬೋರ್ಡ್ ಕಾರ್ಯದರ್ಶಿ ಮಾತ್ರ ಆಂಧ್ರದವರೇ ಇರುತ್ತಾರೆ. ಇದರಿಂದ ರಾಜ್ಯಕ್ಕೆ ಅನ್ಯಾಯ ಮುಂದುವರಿದಿದೆ ಎಂದರು.

ತುಂಗಭದ್ರಾ ಕ್ರಸ್ಟ್ ಗೇಟ್ ಕಳೆದ ವರ್ಷ ಮುರಿದಿದ್ದರೂ ಅದನ್ನು ತಕ್ಷಣ ದುರಸ್ತಿ ಮಾಡಿಲ್ಲ ಮತ್ತು ದುರಸ್ತಿಗೆ ಅನುಮತಿ ನೀಡಲಿಲ್ಲ. ಈಗ 33 ಕ್ರಸ್ಟ್‌ಗೇಟ್‌ಗಳೂ ಸುಸ್ಥಿತಿಯಲ್ಲಿಲ್ಲ. ತುರ್ತಾಗಿ ಬದಲಾಯಿಸುವಂತೆ ತಜ್ಞರು ಸೂಚಿಸಿದ್ದಾರೆ. ಆದರೂ ಅದನ್ನು ಮಾಡುವುದಿರಲಿ, ಮುರಿದಿರುವ 19ನೇ ಕ್ರಸ್ಟ್‌ಗೇಟ್ ಸಹ ಹೊಸದಾಗಿ ಅಳವಡಿಸಲೇ ಇಲ್ಲ. ಇದರ ಪರಿಣಾಮ ಈಗ ಜಲಾಶಯದಲ್ಲಿ ಕೇವಲ 80 ಟಿಎಂಸಿ ನೀರು ಮಾತ್ರ ಸಂಗ್ರಹಿಸಲಾಗುತ್ತದೆ. ಇದರಿಂದ ನೀರು ಪೋಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಮನವೊಲಿಸಲಿ: ತುಂಗಭದ್ರಾ ಕ್ರಸ್ಟ್‌ಗೇಟ್ ಸಮಸ್ಯೆ ಆಗಿರುವುದಕ್ಕೆ ರಾಜ್ಯ ಸರ್ಕಾರ ದೂರುವ ಬದಲು ಬಿಜೆಪಿ ನಾಯಕರು ಮೊದಲು ಕೇಂದ್ರದ ಮನವೊಲಿಸಲಿ. ಕೇಂದ್ರ ಸರ್ಕಾರದ ಮೂಲಕ ತುಂಗಭದ್ರಾ ಬೋರ್ಡ್ ಚುರುಕಾಗಿ ಕ್ರಮ ವಹಿಸುವಂತೆ ಮಾಡಲಿ. ಸಾಧ್ಯವಾದರೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನೊಮ್ಮೆ ಭೇಟಿ ಮಾಡಿಸಿ ತುಂಗಭದ್ರಾ ಬೋರ್ಡ್‌ನಲ್ಲಿ ನಿಯಮಾನುಸಾರ ಕಾರ್ಯದರ್ಶಿಗಳ ನೇಮಕ ಮಾಡಲಿ, ಅದು ಬಿಟ್ಟು ಕೇವಲ ಆಂಧ್ರದವರನ್ನೇ ನಿಯಮಬಾಹಿರವಾಗಿ ನೇಮಕ ಮಾಡುವುದು ಯಾಕೆ? ತಕ್ಷಣ, ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತುಂಗಭದ್ರಾ ಬೋರ್ಡ್ ರದ್ದು ಮಾಡಿಸುವ ಮೂಲಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಕಾರ್ಯ ಮಾಡಲಿ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!