ಗಂಗಾ ಮತಸ್ಥರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ : ಸಚಿವ ಶಿವರಾಜ ತಂಗಡಗಿ ಭರವಸೆ

Published : Jan 22, 2024, 06:23 AM IST
ಗಂಗಾ ಮತಸ್ಥರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ : ಸಚಿವ ಶಿವರಾಜ ತಂಗಡಗಿ ಭರವಸೆ

ಸಾರಾಂಶ

ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಅವರ ಪ್ರತಿಮೆ ಸ್ಥಾಪನೆ, ಗಂಗಾ ಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು, ಹಾಗೂ ಸಾಂಸ್ಕೃತಿಕ ಭವನಕ್ಕೆ 5 ಕೋಟಿ ರು. ಅನುದಾನ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು. 

ಬೆಂಗಳೂರು (ಜ.22): ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಅವರ ಪ್ರತಿಮೆ ಸ್ಥಾಪನೆ, ಗಂಗಾ ಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು, ಹಾಗೂ ಸಾಂಸ್ಕೃತಿಕ ಭವನಕ್ಕೆ 5 ಜ.22ಕೋಟಿ ರು. ಅನುದಾನ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ನಗರದಲ್ಲಿ ಹಲವು ಸ್ಥಳ ಪರಿಶೀಲನೆ ನಡೆಸಿದ್ದು ಸ್ಥಳ ಅಂತಿಮವಾದ ಬಳಿಕ ಪ್ರತಿಮೆ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಮೈಸೂರು ವಿವಿ ನೀಡಿದ ವರದಿ ಸ್ವೀಕರಿಸಿ ಗಂಗಾ ಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು. ಗಂಗಾಮತಸ್ಥ ಸಮುದಾಯದವರಿಗೆ ನೀಡಿರುವ ಒಂದು ಎಕರೆ ಭೂಮಿ ಬಗ್ಗೆ ಕೆಲವು ಕಾನೂನು ತೊಡಕು ಎದುರಾಗಿವೆ. ಆದ್ದರಿಂದ ಭೂಮಿ ಹಸ್ತಾಂತರ ತಡವಾಗಿದೆ. ಸ್ಥಳದ ವಿವಾದ ನ್ಯಾಯಾಲಯದಲ್ಲಿ ಬಗೆಹರಿದರೆ ಅಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ 5 ಕೋಟಿ ರು. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದು, ಗಂಗಾಮತಸ್ಥರು, ಕೋಲಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಂಬಿಗರ ಚೌಡಯ್ಯ ಅವರು ಬಸವಣ್ಣನವರ ಕಾಲಘಟ್ಟದಲ್ಲಿ ತಮ್ಮ ವಿಶಿಷ್ಟವಾದ ವಚನಗಳ ಮೂಲಕ ಸಮಾಜಕ್ಕೆ ಬಹು ದೊಡ್ಡ ಸಂದೇಶ ಕೊಟ್ಟಿದ್ದಾರೆ. ನಿಜ ಜೀವನದ ಬಗ್ಗೆ ತಿಳಿಸುವ ಮೂಲಕ ಇತರ ವಚನಕಾರರಿಗಿಂತ ಭಿನ್ನರಾಗಿ ನಿಲ್ಲುತ್ತಾರೆ ಎಂದು ಸ್ಮರಿಸಿದರು.

ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿಗೆ ಸಿದ್ದು ಗುಂಡು: ಸಂಸದ ಪ್ರತಾಪ ಸಿಂಹ

ವಿಧಾನಸೌಧದ ಆವರಣದೊಳಗೆ ಪ್ರತಿಮೆ ಸ್ಥಾಪಿಸಿ: ಹಾವೇರಿಯ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಮಾತನಾಡಿ, ವರ್ಷದೊಳಗೆ ವಿಧಾನಸೌಧದ ಆವರಣದಲ್ಲಿಯೇ ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪಿಸಬೇಕು. ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ಕೆ ಚುರುಕು ಮುಟ್ಟಿಸಬೇಕು. ಅಂಬಿಗರ ಚೌಡಯ್ಯರ ವಚನಗಳನ್ನು ಸರ್ಕಾರವೇ ಮುದ್ರಿಸಿ ಹಂಚಬೇಕು ಎಂದು ನುಡಿದರು. ಅಂಬಿಗರ ಚೌಡಯ್ಯ ಕುರಿತಂತೆ ಯಾದಗಿರಿಯ ಸಂಶೋಧಕ ಡಾ.ಎಂ.ಎಸ್.ಶಿರವಾಳ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕಿ ಡಾ.ಧರಣಿ ದೇವಿ ಮಾಲಗತ್ತಿ, ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ರಾಜ್ಯಾಧ್ಯಕ್ಷ ಡಾ.ಜಿ.ಮೌಲಾಲಿ, ಉಪಾಧ್ಯಕ್ಷ ಮಣ್ಣೂರು ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ