ಜಿಬಿಎ ತಾತ್ಕಾಲಿಕ, ಮತ್ತೆ ಮಹಾನಗರ ಪಾಲಿಕೆ ತರುತ್ತೇವೆ : ಆರ್.ಅಶೋಕ್‌

Kannadaprabha News   | Kannada Prabha
Published : Sep 16, 2025, 07:35 AM IST
Karnataka LoP R Ashoka

ಸಾರಾಂಶ

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿರುವ ಐದು ಮಹಾನಗರ ಪಾಲಿಕೆಗಳು ತಾತ್ಕಾಲಿಕ. ನಮ್ಮ ಸರ್ಕಾರ ಬಂದ ಮೇಲೆ ಒಂದೇ ಮಹಾನಗರ ಪಾಲಿಕೆ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿರುವ ಐದು ಮಹಾನಗರ ಪಾಲಿಕೆಗಳು ತಾತ್ಕಾಲಿಕ. ನಮ್ಮ ಸರ್ಕಾರ ಬಂದ ಮೇಲೆ ಒಂದೇ ಮಹಾನಗರ ಪಾಲಿಕೆ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮಾಡುತ್ತಿರುವುದು ಓಳು.

ಈಗಿರುವ 198 ವಾರ್ಡ್‌ಗಳಲ್ಲಿ ಶೇ.90ರಷ್ಟು ಎಂಜಿನಿಯರ್‌ಗಳೇ ಇಲ್ಲ. ಇನ್ನು 500 ವಾರ್ಡ್‌ಗಳನ್ನು ಮಾಡಲು ಹೊರಟಿದ್ದಾರೆ. ಈಗಿರುವ ಪಾಲಿಕೆಯೇ ಪಾಪರ್ ಆಗಿದೆ. ಅದರ ಸೊಂಟ ಮುರಿದು ಹೋಗಿದೆ. ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿಗಳೇ ಸ್ಥಗಿತಗೊಂಡಿವೆ. ಇಂಥ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದರು.

ಬೆಂಗಳೂರಿನಲ್ಲಿ ಐದು ಸಾವಿರ ಕೋಟಿ ರು. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀ. ನೀರಿನ ದರವನ್ನು 5 ರಿಂದ 10 ರು.ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬ್ರ್ಯಾಂಡ್‌ ಬೆಂಗಳೂರು ಸಾಕಾರವಾಗಲಿದೆ ಎಂದು ವ್ಯಂಗ್ಯವಾಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್‌, ಆನೇಕಲ್ ನಲ್ಲಿ ಫಲವತ್ತಾದ 2300 ಎಕರೆ ಜಮೀನು ಭೂ ಸ್ವಾಧೀನ ಮಾಡಿದ್ದಾರೆ.ಬಿಡದಿಯಲ್ಲೂ ಬೆಟ್ಟ ಗುಡ್ಡಗಳನ್ನು ಬಿಟ್ಟಿಲ್ಲ. ಕೆಂಗೇರಿಯಲ್ಲೇ ಭೂ ಸ್ವಾಧೀನಕ್ಕೆ ನೋಟಿಸ್ ಬಂದಿದೆ. ಬೆಂಗಳೂರಿನ ಸುತ್ತಮುತ್ತ 50 ಸಾವಿರ ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದ್ದಾರೆ. ಬಿಡದಿಯಲ್ಲಿ ಹೋರಾಟ ಮಾಡಲು ನಮ್ಮ ಪಕ್ಷದ ಡಾ.ಸಿ.ಎನ್‌.ಅಶ್ವತ್ಥನಾರಾಯಣ್ ಹೋಗುತ್ತಿದ್ದಾರೆ. ನಾನು ಕೂಡ ಹೋಗುವ ಬಗ್ಗೆ ಯೋಚಿಸುತ್ತೇನೆ ಎಂದು ತಿಳಿಸಿದರು.

ವಿವಾದದಿಂದಲೇ ಆರಂಭವಾಯ್ತು ಗ್ರೇಟರ್ ಬೆಂಗಳೂರು ಆಡಳಿತ

ಬೆಂಗಳೂರು: ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತಿಹಾಸದ ಪುಟಗಳಲ್ಲಿ ಸೇರ್ಪಡೆಗೊಂಡು, ಹೊಸ ರೂಪದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಾರ್ಯಾರಂಭಗೊಂಡಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಅಧಿಸೂಚನೆಯಂತೆ, ಬೆಂಗಳೂರು ನಗರವನ್ನು ಐದು ವಿಭಿನ್ನ ನಗರಪಾಲಿಕೆಗಳಾಗಿ ವಿಭಜಿಸಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಆದರೆ, ಪ್ರಾಧಿಕಾರದ ಸದಸ್ಯತ್ವ ಹಂಚಿಕೆ ಕುರಿತು ಇದೀಗ ವಿವಾದ ಉಂಟಾಗಿದೆ. ವಿಶೇಷವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸದಸ್ಯತ್ವ ನೀಡಿರುವ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸದಸ್ಯತ್ವ ಹಂಚಿಕೆ ವಿವಾದ

ಸರ್ಕಾರದ ಆದೇಶದಂತೆ, ಬೆಂಗಳೂರಿನ ಸಂಸದರು, ಶಾಸಕರು, ರಾಜ್ಯಸಭಾ ಸದಸ್ಯರು ಮತ್ತು ವಿಧಾನಪರಿಷತ್ ಸದಸ್ಯರಿಗೆ GBA ಸದಸ್ಯತ್ವ ನೀಡಲಾಗಿದೆ. ಆದರೆ, ಬೆಂಗಳೂರು ನಗರದ ಮತದಾರರ ಪಟ್ಟಿಯಲ್ಲಿ ಇಲ್ಲದ ಹೊರ ಜಿಲ್ಲೆಯ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸದಸ್ಯತ್ವ ನೀಡಿರುವುದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಬಿಬಿಎಂಪಿ ಮಾಜಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, "ಯಾವ ಮಾನದಂಡದ ಮೇಲೆ ಸಿಎಂ ಪುತ್ರರಿಗೆ ಸದಸ್ಯತ್ವ ನೀಡಲಾಗಿದೆ ಎಂಬುದರ ಕುರಿತು ಮುಖ್ಯಮಂತ್ರಿ ಸ್ವತಃ ವಿವರಣೆ ನೀಡಬೇಕು" ಎಂದು ಒತ್ತಾಯಿಸಿದ್ದಾರೆ. ಮಾಜಿ ಕಾರ್ಪೊರೇಟರ್‌ಗಳೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, "ಬೇರೆ ಜಿಲ್ಲೆಯಿಂದ ಬಂದವರಿಗೆ ಅವಕಾಶ ನೀಡಿರುವಾಗ, ಬೆಂಗಳೂರಿನ ಜನಪ್ರತಿನಿಧಿಗಳನ್ನು ಕೈಬಿಟ್ಟಿರುವುದು ನ್ಯಾಯೋಚಿತವಲ್ಲ" ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!