
ಸಿಂಧನೂರು(ಜ.31): ಬಡವರ ಸೇವೆ ಮಾಡಲು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಜೆಡಿಎಸ್ ಪಕ್ಷ ಅಧಿಕಾರ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸ್ಥಳೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಪಂಚರತ್ನ ರಥಯಾತ್ರೆಯ ಬೃಹತ್ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ನೊಂದವರು, ಬಡವರಿಗೆ ನೆಮ್ಮದಿ ಕಲ್ಪಿಸಲು ಸ್ಪಷ್ಟ ಬಹುಮತದೊಂದಿಗೆ ಐದು ವರ್ಷಗಳ ಕಾಲ ಅಧಿಕಾರ ಕೊಟ್ಟು ಜನಸೇವೆ ಮಾಡಲು ಅವಕಾಶ ಕೊಡಿ. ಸಿಂಧನೂರಿನ ಬಾಲಕಿಯೊಬ್ಬಳಿಗೆ ಬೋನ್ ಮ್ಯಾರೋ ಕಾಯಿಲೆಯಿದ್ದು, ಇದರ ಚಿಕಿತ್ಸೆಗಾಗಿ ರು.35 ಲಕ್ಷ ಬೇಕು. ಫೆ.5ಕ್ಕೆ ಬೆಂಗಳೂರಿನಲ್ಲಿ ಆ ಬಾಲಕಿಗೆ ಚಿಕಿತ್ಸೆ ಕೊಡಿಸುತ್ತೇನೆಂದು ಹೇಳಿದ್ದೇನೆ.
ರಾಜಕಾರಣಿಗಳ ಮಕ್ಕಳೇಕೆ ರಾಜಕೀಯ ಮಾಡಬಾರದು? : ಎಚ್ಡಿಕೆ
ಈಗಾಗಲೇ 40 ರಿಂದ 50 ಜನರಿಗೆ ಈ ಕಾಯಿಲೆಯ ಚಿಕಿತ್ಸೆ ಕೊಡಿಸಿದ್ದೇನೆ. ಮುಂದೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇಂತಹ ದುಬಾರಿ ಕಾಯಿಲೆಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸುವಂತೆ ಮಾಡುತ್ತೇನೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಾಲಮನ್ನಾ ಹಾಗೂ 60 ವರ್ಷ ಮೇಲ್ಪಟ್ಟಹಿರಿಯ ನಾಗರಿಕರಿಗೆ 6 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸುತ್ತೇನೆ ಎಂದು ಹೇಳಿದರು.
ನಂತರ ಶಾಸಕ ವೆಂಕಟರಾವ್ ನಾಡಗೌಡರು ಮಾತನಾಡಿದರು. ಗೊರೇಬಾಳ ಸಿದ್ಧಯ್ಯತಾತ, ಮಾಜಿ ಸಚಿವ ಸಾ.ರಾ.ಮಹೇಶ, ಶಾಸಕರಾದ ಭೋಜೇಗೌಡ, ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್ ಸದಸ್ಯರಾದ ರಮೇಶಗೌಡ, ಮಂಜೇಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.