
ವಿಧಾನಸಭೆ (ಮಾ.12): ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ನೀಡಬೇಕೆಂ ದರೆ ನಾಯಕರು ಭಿಕ್ಷೆಬೇಡಿಕೊಂಡು ಕೊಡಲಿ. ಅದನ್ನು ಬಿಟ್ಟು ಸರ್ಕಾರದ ಖಜಾನೆಯಿಂದ ಹಣ ಪಾವತಿಸಬಾರದು. ಯಾವುದೇ ಮುಖ್ಯ ಮಂತ್ರಿಯೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದಿಂದ ದುಡ್ಡು ನೀಡುವಂತಹ ಇಂತಹ ಮನೆಹಾಳು ಕೆಲಸ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ ವಿರೋಧಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಕ್ಕೂ, ಕಾಂಗ್ರೆಸ್ ಕಾರ್ಯಕ್ರಮಕ್ಕೂ ಯಾವುದೇ ವ್ಯತ್ಯಾಸವಿಲ್ಲ.
ಜನರ ತೆರಿಗೆ ಹಣವನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಹಂಚಲಾಗುತ್ತಿದೆ. ಒಂದು ವೇಳೆ ಅವರ ಕಾರ್ಯಕರ್ತರಿಗೆ ದುಡ್ಡು ಕೊಡಬೇಕು ಎಂದಾದರೆ, ಕೆಪಿಸಿಸಿಯಿಂದ ಕೊಡಲಿ, ಇಲ್ಲವೇನಾಯಕರು ವಿಧಾನಸೌಧ, ಕಬ್ಬನ್‌ಪಾರ್ಕ್‌ನಲ್ಲಿ ಜನರಿಂದ ಭಿಕ್ಷೆ ಬೇಡಿ ಹಂಚಲಿ. ನಮ್ಮ ದುಡ್ಡಿನಲ್ಲಿ ಕಾರ ಕರ್ತರಿಗೆ ಕಾರು, ಬಂಗಲೆ ನೀಡುವುದು ಬೇಡ ಎಂದು ಆಗ್ರಹಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿರುವ ತೆಲಂಗಾಣ, ಹಿಮಾಚಲಪ್ರದೇಶದಲ್ಲಿ ಗ್ಯಾರಂಟಿ ಯೋಜನೆ ಗಳ ಅನುಷ್ಠಾನದಿಂದ ಆರ್ಥಿಕ ಹೊಡೆತ ಎದುರಾಗುತ್ತಿದೆ ಎಂಬಂತಹ ಹೇಳಿಕೆ ನೀಡಲಾಗುತ್ತಿದೆ.
ಆದರೂ, ಕರ್ನಾಟಕದಲ್ಲಿ ಮಾತ್ರ ಗ್ಯಾರಂಟಿ ಅನುಷ್ಠಾನಕ್ಕೆ ಯಾವುದೇ ಆರ್ಥಿಕ ಹೊರೆಯಿಲ್ಲ ಎನ್ನಲಾಗುತ್ತಿದೆ. ನಾವು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಿಲ್ಲ. ಆದರೆ, ಸರ್ಕಾ ರದ ದುಡ್ಡನ್ನು ನಿಮ್ಮ ಕಾರ್ಯಕರ್ತರಿಗೇಕೆ ನೀಡುತ್ತಿದ್ದೀರಿ. ಇಂತಹ ಮನೆಹಾಳು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ನಾನು ಈವರೆಗೆ ನೋಡಿಲ್ಲ. ಸರ್ಕಾರದ ದುಡ್ಡನ್ನು ಪಕ್ಷಕ್ಕೆ ಹಂಚಿರುವುದು ಇದೇ ಮೊದಲು ಎಂದರು. ಸರ್ಕಾರದಲ್ಲಿರುವವರು ತಾವು ಶಾಶ್ವತವಾಗಿ ಅಧಿ ಕಾರದಲ್ಲಿರುತ್ತೇವೆ ಎಂದುಕೊಂಡಿದ್ದಾರೆ. ಆದರೆ, 3 ವರ್ಷದಲ್ಲಿ ಸರ್ಕಾರ ಬದಲಾಗಲಿದೆ. ಅದಕ್ಕೂ ಮುನ್ನವೇ ಸಿಎಂ ಬದಲಾಗುತ್ತಾರೆ. ಕ್ಷೇತ್ರಗಳಲ್ಲಿ ಶಾಸಕರೇ ಸುಪ್ರೀಂ.
ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ ಮಾರ್ಮಿಕ ಹೇಳಿಕೆ
ಅವರು ಈಗ ಕಾಂಗ್ರೆಸ್ ಕಾರ್ಯಕರ್ತರ ಗುಲಾಮರಾಗಿ ಕೆಲಸಮಾಡಬೇಕಾಗಿದೆ. ಇದು ಸರಿಯಲ್ಲ, ಎಂದರು. ಆಗ ಮಧ್ಯಪ್ರವೇಶಿಸಿದಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರು ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಕ್ರಮವನ್ನು ಅವಲೋಕಿಸಬೇಕು. ಮಹಾರಾಷ್ಟ್ರದಲ್ಲಿ ಸಚಿವರ ಆಪ್ತ ಸಹಾಯಕರಾಗಿ ಆರ್‌ಎಸ್‌ಎಸ್ ಕಾರ್ಯ ಕರ್ತರನ್ನು ನೇಮಿಸುವಂತೆ ಆದೇಶಿಸಲಾಗಿದೆ. ಅವರಿಗೆ ಸರ್ಕಾರದಿಂದಲೇ ಹಣ ಪಾವತಿಸಲಾಗುತ್ತದೆ. ನಿಮ್ಮ ಪಕ್ಷದ ಸರ್ಕಾರದ ಕ್ರಮವನ್ನೂ ಟೀಕಿಸಿ ಎಂದು ಆಗ್ರಹಿಸಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧದ ಘೋಷಣೆ ತೀವ್ರಗೊಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.