ರಾಜ್ಯದಲ್ಲಿ ವಕ್ಫ್ ಭೂಕಬಳಿಕೆ ವಿರುದ್ಧ ಮಾಡಿದ ಹೋರಾಟದ ವರದಿ ಸಲ್ಲಿಸಲು ದೆಹಲಿಗೆ ಬಂದಿದ್ದು, ಸಹಜವಾಗಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ವಿಜಯೇಂದ್ರ ಅವರು ಅಧ್ಯಕ್ಷರಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಮಗೆ ಈ ಪರಿಸ್ಥಿತಿ ಬಂತು. ಪಕ್ಷದ ಹಿತದೃಷ್ಟಿಯಿಂದ ವಕ್ಫ್ ಹೋರಾಟ ಮಾಡಿದೆವು ಎಂದು ಸ್ಪಷ್ಟನೆ ನೀಡಿದ ಶಾಸಕ ರಮೇಶ್ ಜಾರಕಿಹೊಳಿ
ನವದೆಹಲಿ(ಡಿ.04): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದು, ಮೊದಲು ಅವರಿಗೆ ನೋಟಿಸ್ ನೀಡಬೇಕು. ವಿಜಯೇಂದ್ರ ಪರ ಕೆಜೆಪಿ ನಾಯಕರು ಮಾತ್ರ ಮಾತನಾಡುತ್ತಿದ್ದು, ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಭೂಕಬಳಿಕೆ ವಿರುದ್ಧ ಮಾಡಿದ ಹೋರಾಟದ ವರದಿ ಸಲ್ಲಿಸಲು ದೆಹಲಿಗೆ ಬಂದಿದ್ದು, ಸಹಜವಾಗಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ವಿಜಯೇಂದ್ರ ಅವರು ಅಧ್ಯಕ್ಷರಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಮಗೆ ಈ ಪರಿಸ್ಥಿತಿ ಬಂತು. ಪಕ್ಷದ ಹಿತದೃಷ್ಟಿಯಿಂದ ವಕ್ಫ್ ಹೋರಾಟ ಮಾಡಿದೆವು ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್ ಸರ್ಕಾರ ಬೀಳಿಸೋದಾಗಿದ್ರೆ ನಾನೇ ನೇತೃತ್ವ ವಹಿಸ್ತಿದ್ದೆ: ರಮೇಶ ಜಾರಕಿಹೊಳಿ
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಕೊಡ್ತಾರಂತೆ ಗೊತ್ತಿತ್ತು. ಯತ್ನಾಳ್ ಅವರು ನೋಟಿಸ್‌ಗೆ ಉತ್ತರ ಕೊಡುತ್ತಾರೆ. ವಿಜಯೇಂದ್ರ ಅವರಿಗೆ ಯಾವಾಗ ನೋಟಿಸ್ ಕೊಡುತ್ತೀರಿ? ಎಂದು ಪ್ರಶ್ನಿಸಿದರು.
ವಿಜಯೇಂದ್ರ, ಯಡಿಯೂರಪ್ಪ ಕಾಲಿನ ಧೂಳಿಗೂ ಸಮನಲ್ಲ: ರಮೇಶ ಜಾರಕಿಹೊಳಿ
ಬೆಳಗಾವಿ: ಶಾಸಕ ಬಿ.ವೈ.ವಿಜಯೇಂದ್ರಗೆ ನಾಲ್ಕು ವರ್ಷದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದ್ದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಎರಡು ದಿನಗಳ ಹಿಂದೆಯೇ ಶೋಕಾಸ್ ನೋಟಿಸ್ ಬಂದಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರ. ಆದರೆ, ವಿಜಯೇಂದ್ರ, ಬಿಎಸ್‌ವೈ ಅವರ ಕಾಲಿನ ಧೂಳಿಗೂ ಸಮನಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದು. ಇನ್ನೂ 4 ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದು ತಿಳಿಸಿದ್ದರು.
ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರನ್ನು ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ಹೇಳುತ್ತೇನೆ ಎಂದು ಹೇಳಿದ್ದರು.
ಯತ್ನಾಳ್ ಬೆನ್ನಿಗೆ ನಿಲ್ಲೇವೆ: ಕುಮಾರ ಬಂಗಾರಪ್ಪ
ಬೆಳಗಾವಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಾವು ಹೈಕಮಾಂಡ್ ನಾಯಕರ ಭೇಟಿ ಮಾಡಿ ಯತ್ನಾಳ್ ಅವರ ಪರವಾಗಿ ಮಾತನಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದ್ದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಕ್ಫ್ ಬೋರ್ಡ್ ಭೂಕಬಳಿಕೆ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಶೋಕಾಸ್ ನೋಟಿಸ್ ನೀಡಿಲ್ಲ ಅನಿಸುತ್ತದೆ. ನಮ್ಮ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮನವೊಲಿಸುತ್ತೇವೆ. ಬಿಜೆಪಿ ಸಂಘಟನೆಯಲ್ಲಿ ಯತ್ನಾಳ್ ಅವರ ಪಾತ್ರ ಬಹುಮುಖ್ಯವಾಗಿದ್ದು, ನಾವೆಲ್ಲರೂ ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.
ಯತ್ನಾಳ್, ಜಾರಕಿಹೊಳಿ ಹೇಳಿಕೆಗೆ ಕಿಮ್ಮತ್ತಿಲ್ಲ, ಅವರ ಆಟ ಜಾಸ್ತಿ ದಿನ ನಡೆಯಲ್ಲ: ವಿಜಯೇಂದ್ರ
ರೆಬಲ್ ಅನ್ನೋದೆ ಸಚಿವ ಸ್ಥಾನವಿದ್ದಂತೆ, ನನಗೆ ಕಾಂಗ್ರೆಸ್, ಬಿಜೆಪಿಯಲ್ಲೂ ಅನ್ಯಾಯ: ರಮೇಶ ಜಾರಕಿಹೊಳಿ
ಗೋಕಾಕ: ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೆಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೆಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದರು.
ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿದ ರಾಜಋಷಿ ಶ್ರೀ ಭಗೀರಥರ ಮೂರ್ತಿ ಅನಾವರಣ ಕಾರ್ಯಕ್ರಮ ಹಾಗೂ ಶುಕ್ರವಾರ ಆಯೋಜಿಸಿದ್ದ ಜಗದ್ಗುರು ಶ್ರೀ ಪುರುಷೋತ್ತಮಾ ನಂದಪುರಿ ಮಹಾಸ್ವಾಮಿಗಳ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಪಕ್ಷದಲ್ಲೂ ಅನ್ಯಾಯ ಆಗಿದೆ. ಬಿಜೆಪಿ ಕೆಲ ಮುಖಂಡರಿಂದಲೂ ಅನ್ಯಾಯವಾಗಿದೆ. ನನ್ನದು ಹೋರಾಟದ ಬದುಕು ಎಂದರು.