ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ದರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮೈಸೂರು (ಮೇ.12): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ದರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐಗೆ ನೀಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಇದು ಅವರ ಅಭಿಪ್ರಾಯ ಅಷ್ಟೇ. ಈ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಹೇಳಿದ ಯಡಿಯೂರಪ್ಪ, ವಿಧಾನಪರಿಷತ್ತು ಚುನಾವಣೆಯಲ್ಲಿ ಮೈತ್ರಿ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
ರೈತರ ಸಾಲ ಮನ್ನಾ ಮಾಡಿ: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿ ಹೋಗಿದೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಬಿಜೆಪಿ ಅಂದುಕೊಂಡಷ್ಟು ರಾಮಮಂದಿರ ಪರಿಣಾಮ ಬೀರಿಲ್ಲವೇ?: ಮೋದಿ ಏಕ್‌ದಂ ಅಗ್ರೆಸಿವ್ ಆಗಿದ್ದು ಏಕೆ?
ರಾಜ್ಯದಲ್ಲಿ ಕನಿಷ್ಠ 24- 25 ಸ್ಥಾನ ಗೆಲುವು: ನರೇಂದ್ರ ಮೋದಿಯವರು 400 ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಮತ್ತೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತನೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24- 25 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.