ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯುಲು ಫೈಟ್
ಪರೋಕ್ಷವಾಗಿ ಹೆಚ್.ಡಿ.ತಮ್ಮಯ್ಯ ವಿರುದ್ಧ ಬಹಿರಂಗ ಸಭೆ
ಕಾಂಗ್ರೆಸ್ ಮುಖಂಡ ಮಹಡಿಮನೆ ಸತೀಶ್ ಗೆ ಟಿಕೆಟ್ ಒತ್ತಾಯ
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಮಾ.26): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯನ್ನ ಸೋಲಿಸಲು ಕಾಂಗ್ರೆಸ್‌ನಿಂದ ಹೆಚ್.ಡಿ. ತಮ್ಮಯ್ಯರನ್ನ ಕಣಕ್ಕಿಳಿಸಲು ಹೈಕಮಾಂಡ್ ಸಿದ್ಧತೆ ನಡೆಸುತ್ತಿದೆ. ಆದರೆ, ಕಾಂಗ್ರೆಸ್ ಮುಖಂಡರು ಮಹಡಿಮನೆ ಸತೀಶ್ ಟಿಕೆಟ್ ನೀಡಬೇಕೆಂದು ಸಭೆ ನಡೆಸುತ್ತಿದ್ದಾರೆ.
undefined
ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರು ಮಾತ್ರ ಪರೋಕ್ಷವಾಗಿ ಹೆಚ್.ಡಿ. ತಮ್ಮಯ್ಯ ವಿರುದ್ಧ ಬಹಿರಂಗ ಸಭೆ ನಡೆಸಿ ಅರ್ಜಿ ಹಾಕಿರುವ ಮಹಡಿಮನೆ ಸತೀಶ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಹಾಗೂ ಲಿಂಗಾಯುತ ಸಮಾಜದ ಮುಖಂಡರು ಬಹಿರಂಗ ಸಭೆ ನಡೆಸಿದ್ದಾರೆ. ಕಡೂರು ತಾಲೂಕಿನ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸಖರಾಯಪಟ್ಟಣದಲ್ಲಿ ಬಹಿರಂಗ ಸಮಾವೇಶ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಣಿವೆ ಕೆಳಭಾಗ ಸಖರಾಯಪಟ್ಟಣದ ಕಾಂಗ್ರೆಸ್ ಮುಖಂಡ ಮಹಡಿಮನೆ ಸತೀಶ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರಕ್ಕೆ ಶಾಸಕ ಸಿಟಿ ರವಿ ಆಪ್ತನಿಗೆ ಘೇರಾವ್: ಸ್ಥಳದಿಂದ ಕಾಲ್ಕಿತ್ತು ಬಚಾವ್
ಜನರ ಸೇವೆ ಮಾಡುವ ವ್ಯಕ್ತಿಗೆ ಟಿಕೇಟ್ ನೀಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಯಲುಸೀಮೆ ಹಾಗೂ ಕ್ಷೇತ್ರದ ನಂಟು ಹೊಂದಿರುವ ಮತ್ತು ಪಕ್ಷದಲ್ಲಿ ಪ್ರಾಮಾಣಿಕವಾಗಿ ಹಲವಾರು ವರ್ಷಗಳು ಸೇವೆ ಸಲ್ಲಿಸಿರುವ ಮಹಡಿ ಮನೆ ಸತೀಶ್ ಅವರಿಗೆ ಪಕ್ಷದಿಂದ ಟಿಕೇಟ್ ಘೋಷಣೆ ಮಾಡಬೇಕೆಂಬ ಒತ್ತಾಯ ಸಭೆಯಲ್ಲಿ ಕೇಳಿಬಂತು. ಕ್ಷೇತ್ರದ ಮತದಾರರಲ್ಲಿ ಮಹಡಿಮನೆ ಸತೀಶ್ ಉತ್ತಮ ಒಡನಾಟ ಹೊಂದಿದ್ದು ಪ್ರತಿ ಗ್ರಾಮ ಪಂಚಾಯಿತಿ ಗಳಲ್ಲೂ ತೆರಳಿ ಸಭೆ, ಸಮಾರಂಭಗಳನ್ನು ಆಯೋಜಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇದೀಗ ಇತರೆ ಪಕ್ಷದಿಂದ ಬಂದಿರುವ ವ್ಯಕ್ತಿಗೆ ಹೈಕಮಾಂಡ್ ಮಣೆಹಾಕುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಮತದಾರರನ್ನು ಕೈಬಿಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.
ಪಕ್ಷಾಂತರ ಮಾಡಿದ ತಮ್ಮಯ್ಯ ವಿರುದ್ದ ಅಸಮಾಧಾನ : ಮಹಡಿಮನೆ ಸತೀಶ್ 20 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ. ಈ ಬಾರಿ ಅವರು ಅರ್ಜಿ ಕೂಡ ಹಾಕಿದ್ದಾರೆ. ಹಾಗಾಗಿ, ಅವರಿಗೆ ಟಿಕೆಟ್ ನೀಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಹೆಚ್.ಡಿ.ತಮ್ಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ ಆರು ಜನ ಟಿಕೆಟ್ಗಾಗಿ ಅರ್ಜಿ ಹಾಕಿದ್ದಾರೆ. ಆ ಆರು ಜನರಲ್ಲೇ ಯಾರಿಗಾದರೂ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.
ನನ್ನ ಖಡ್ಗ ಕಾಫಿಗರ ರಕ್ತಕ್ಕಾಗಿ ತಹತಹಿಸುತ್ತಿದೆ: ಟಿಪ್ಪು ಖಡ್ಗದ ಮೇಲಿನ ಬರಹ ರಿವೀಲ್
ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ಕೊಡಿ: ಈಗ ಜಿಲ್ಲಾ ಕಾಂಗ್ರೆಸ್ ಸಿ.ಟಿ.ರವಿ ಮೂಲಕ ಕಣಕ್ಕಿಳಿಯುವ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಮೊದಲ ಹಂತದ ಕೈ ಟಿಕೆಟ್ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಳಿದ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರೇ ಕಾರ್ಯಕರ್ತರ ಮೂಲಕ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರುದ್ರಾಮೂರ್ತಿ, ಕೆಂಗೇಗೌಡ, ಅಮೀರ್‌ಜಾನ್, ನಯಾಜ್, ಸೌಂದರ್ಯ ಜಗದೀಶ್, ಮೋಹನ್‌ನಾಯಕ್, ಮಲ್ಲೇಗೌಡ, ಅಚ್ಯುತ್‌ರಾವ್, ಈಶ್ವರಪ್ಪ, ರಾಮಚಂದ್ರ, ತಿಮ್ಮೇಗೌಡ, ಹೇಮಾವತಿ, ಆದಿ, ಸಚ್ಚಿನ್, ಧನಂಜಯ್ ಹಾಗೂ ಗ್ರಾ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು