ಲೋಕಸಭೆ ಚುನಾವಣೆಗೆ ಸಿದ್ದೇಶ್ವರೇ ಬಿಜೆಪಿ ಅಭ್ಯರ್ಥಿ: ಮಾಜಿ ಶಾಸಕ ಎಸ್.ವಿ.ರಾಮಚಂದ್ರ

By Kannadaprabha News  |  First Published Feb 2, 2024, 3:23 PM IST

ಆಡು ಮುಟ್ಟದ ಸೊಪ್ಪಿಲ್ಲ, ಸಂಸದ ಜಿ.ಎಂ.ಸಿದ್ದೇಶ್ವರ ನೋಡದಿರುವ ಹಳ್ಳಿಗಳಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸಂಸದ ಜಿಎಂ ಸಿದ್ದೇಶ್ವರ ಅವರೇ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದರು. 


ಜಗಳೂರು (ಫೆ.02): ಆಡು ಮುಟ್ಟದ ಸೊಪ್ಪಿಲ್ಲ, ಸಂಸದ ಜಿ.ಎಂ.ಸಿದ್ದೇಶ್ವರ ನೋಡದಿರುವ ಹಳ್ಳಿಗಳಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸಂಸದ ಜಿಎಂ ಸಿದ್ದೇಶ್ವರ ಅವರೇ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಸಂಸದ ಜಿ.ಎಂ.ಸಿದ್ದೇಶ್ವರ ನಾಲ್ಕು ಬಾರಿ ಹಾಗೂ ಅವರ ತಂದೆ ಎರಡು ಬಾರಿ ಸಂಸತ್‌ ಸದಸ್ಯರಾಗಿ ದಾವಣಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿ ಆಗಿ ಜಗಳೂರು ವಿಧಾನಸಭಾ ಕ್ಷೇತ್ರವೇ ಅತಿ ಹೆಚ್ಚು ಮತ ನೀಡಿ ಗೆಲ್ಲಿಸುವಂತಾಗಬೇಕೆಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಪ್ರಪಂಚ ಪ್ರಳಯವಾದರೂ ದೇಶದಲ್ಲಿ ನರೇಂದ್ರ ಮೋದಿಯೇ ಪ್ರಧಾನಿ, ದಾವಣಗೆರೆ ಕ್ಷೇತ್ರದಲ್ಲಿ ಸಿದ್ದೇಶ್ವರ ಅವರೇ 5ನೇ ಬಾರಿ ಸಂಸದರಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

2013ರಲ್ಲಿ ಟಿಕೆಟ್‌ ತಪ್ಪಿತು: ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್‌ ಮಾತನಾಡಿ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ, ಎಸ್ಸೆಸ್‌ ಮಲ್ಲಿಕಾರ್ಜುನ್ ಎದುರೇ ನಿಂತು ಅಲ್ಪ ಮತದಿಂದ ಸೋತಿದ್ದೇನೆ. ಕೆಲವರ ಚಿತಾವಣೆಯಿಂದ 2013ರಲ್ಲಿ ನನಗೆ ಟಿಕೆಟ್ ತಪ್ಪಿಸಿದ್ದರು. ಟಿಕೆಟ್ ಪಡೆದ ಅಭ್ಯರ್ಥಿ ಈಗ ಎಲ್ಲಿದ್ದಾರೆ ತೋರಿಸಿ ಎಂದು ರವೀಂದ್ರನಾಥರ ಹೆಸರು ಹೇಳದೆ ಮಾಜಿ ಸಚಿವರಿಗೆ ಪರೋಕ್ಷವಾಗಿ ವಾಗ್ದಾಳಿ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಮಾತನಾಡಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಮಾಧ್ಯಮಗಳೊಂದಿಗೆ ಸಂಸದರ ವಿರುದ್ಧ ಬೇರೆ ಜಿಲ್ಲೆಯವರಿಗೆ ಟಿಕೆಟ್ ಬೇಡ ಸ್ಥಳೀಯರಿಗೆ ಅವಕಾಶ ಕೊಡಿ ಅಂತ ಗೊಂದಲ ಸೃಷ್ಟಿಸುತ್ತಾರೆ. ಗೊಂದಲ, ಸಮಸ್ಯೆಗಳಿದ್ದರೆ ರಾಜ್ಯಮಟ್ಟದಲ್ಲಿ ಅದನ್ನು ಬಗೆಹರಿಸಿಕೊಳ್ಳಬೇಕು. ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡಬಾರದು ಎಂದರು.

Tap to resize

Latest Videos

ಮಂಡಲ ಬಿಜೆಪಿ ಅಧ್ಯಕ್ಷ ಎಚ್.ಸಿ ಮಹೇಶ್ ಮಾತನಾಡಿ ದಾವಣಗೆರೆ ಲೋಕಸಭಾ ಅಭ್ಯರ್ಥಿಗಳು ಯಾರೇ ಆಗಲಿ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರು ಸೇರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್ .ಕೆ. ಮಂಜುನಾಥ್, ಸವಿತಾ ಕಲ್ಲೇಶಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವೇಣುಗೋಪಾಲ ರೆಡ್ಡಿ, ಆರ್ಥಿಕ ಸ್ವಾಮಿ ಮತ್ತಿತರರು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿದ್ದಣ್ಣ, ಎಚ್ ನಾಗರಾಜ್, ಗಡಿ ಮಾಕುಂಟಿ ಸಿದ್ದೇಶ್, ಕೆಂಚನಗೌಡ, ಕಲ್ಲೇಶಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ದೇವರಾಜ್, ನವೀನ್, ಪಾಪು ಲಿಂಗಪ್ಪ, ಮುಖಂಡರಾದ ಓಬಳೇಶ್, ಹನುಮಂತಪ್ಪ, ವಿಶ್ವನಾಥಯ್ಯ, ಬೆಸ್ತಳ್ಳಿ ಬಾಬು ಶಿವಕುಮಾರ ಸ್ವಾಮೀಜಿ ಸೇರಿ ಇತರರಿದ್ದರು.

ಇಂದಲ್ಲ ನಾಳೆ ಸಿದ್ದರಾಮಯ್ಯ ಕೂಡ ಬಿಜೆಪಿಗೆ ಬರ್ತಾರೆ: ಕೆ.ಎಸ್.ಈಶ್ವರಪ್ಪ

ವಿಧಾನಸಭೆ ಚುನಾವಣೆ ಸೋಲು ನೋವಿದೆ: ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ 57 ಕೆರೆಗಳಿಗೆ ನೀರು ತುಂಬಿಸುವುದು, ಭದ್ರಾ ಮೇಲ್ದಂಡೆ ಸೇರಿ ₹3,500 ಕೋಟಿ ಅಧಿಕ ಹಣ ತಂದ ಅಭಿವೃದ್ಧಿ ಮಾಡಿದರೂ 400 ಮತಗಳ ಅಂತರ ಸೋಲು ನನಗೆ ಮಾತ್ರವಲ್ಲ, ಕಾರ್ಯಕರ್ತರಿಗೆ ದುಃಖ ತರಿಸಿದೆ ಎಂದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಾಗಿ ನಿಂತು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ.

click me!