ದಿನ ಬೆಳಗ್ಗೆ 6 ಗಂಟೆಗೆ ಹಿಂದಿ ಕ್ಲಾಸ್‌ಗೆ ಹೋಗ್ತಿನಿ, 6 ತಿಂಗಳಲ್ಲಿ ಮಾತಾಡ್ತೀನಿ: ಸಂಸದ ಸೋಮಣ್ಣ

By Kannadaprabha NewsFirst Published Aug 19, 2024, 12:36 PM IST
Highlights

ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬಹಳ ಶ್ರದ್ಧೆಯಿಂದ ಹಿಂದಿ ಭಾಷೆ ಕಲಿಯುತ್ತಿದ್ದಾರಂತೆ. ಈ ವಿಷಯವನ್ನು ಸ್ವತ: ಸಚಿವರೇ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ.

ತುಮಕೂರು (ಆ.19): ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬಹಳ ಶ್ರದ್ಧೆಯಿಂದ ಹಿಂದಿ ಭಾಷೆ ಕಲಿಯುತ್ತಿದ್ದಾರಂತೆ. ಈ ವಿಷಯವನ್ನು ಸ್ವತ: ಸಚಿವರೇ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. 'ಈಗ ನಾನು ಹಿಂದಿ ಕಲಿಯುತ್ತಿದ್ದೇನೆ. ಇದಕ್ಕಾಗಿ ದೆಹಲಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹಿಂದಿ ಕ್ಲಾಸ್‌ಗೆ ಹೋಗುತ್ತೇನೆ. ಇನ್ನು 6 ತಿಂಗಳಲ್ಲಿ ಸಂಸತ್‌ನಲ್ಲಿ ಹಿಂದಿಯಲ್ಲೇ ಮಾತನಾಡುವೆ' ಎಂದರು. 'ನಾಡಿದ್ದು ಮಲೇಷ್ಯಾ ಪ್ರಧಾನಿ ಭಾರತಕ್ಕೆ ಬರುತ್ತಿದ್ದಾರೆ.ಅವರನ್ನು ಸ್ವಾಗತಿಸುವಜವಾಬ್ದಾರಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನನಗೆ ಕೊಟ್ಟಿದ್ದಾರೆ. ನನಗೆ ಭಾಷಾ ಸಮಸ್ಯೆ ಇದೆ ಎಂದು ಪ್ರಧಾನಿಗೆ ಹೇಳಿದೆ. ಪರವಾಗಿಲ್ಲ, ಮ್ಯಾನೇಜ್ ಮಾಡಿ, ಜವಾಬ್ದಾರಿ ನಿರ್ವಹಿಸಿ ಎಂದು ಮೋದಿ ಹೇಳಿದ್ದಾರೆ' ಎಂದು ಇದೇ ವೇಳೆ ಸೋಮಣ್ಣ ತಿಳಿಸಿದರು.

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀ ಹೆಸರಿಡಲು ಸಮ್ಮತಿ: ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ತಮ್ಮ ಕಚೇರಿ ಉದ್ಘಾಟಿಸಿ ಮಾತನಾಡಿದರು. ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಹಾಗೂ ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡುವಂತೆಯೂ ಪತ್ರಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಲಾಗಿದೆ. ಜತೆಗೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದು, ಅವರು ಸಮ್ಮತಿಸಿದ್ದಾರೆ ಎಂದು ಹೇಳಿದರು.

Latest Videos

ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿ ಕಿಡ್ನಾಪ್: ಹಣಕ್ಕಾಗಿ ವಿದ್ಯಾರ್ಥಿಯನ್ನ ನಗ್ನಗೊಳಿಸಿ ಹಲ್ಲೆ ಆರೋಪ, ಎಫ್‌ಐಆರ್ ದಾಖಲು

ರಾಜ್ಯಕ್ಕೆ 3 ಮೆಮೋ ರೈಲು ನೀಡಲಾಗುತ್ತಿದ್ದು, ಈ ಪೈಕಿ ತುಮಕೂರಿಗೂ ಒಂದು ಮೆಮೋ ರೈಲು ಬರಲಿದೆ. ಈ ರೈಲು ಬೆಳಿಗ್ಗೆ 9.05 ಕ್ಕೆ ತುಮಕೂರಿನಿಂದ ಹೊರಟು 10.05ಕ್ಕೆ ಯಶವಂತಪುರ ತಲುಪಲಿದೆ. ಮತ್ತೆ ಸಂಜೆ ತುಮಕೂರಿಗೆ ಆಗಮಿಸಲಿದೆ. ಈ ರೈಲಿನಲ್ಲಿ ೫ ಸಾವಿರ ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು 2 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ 61 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ರಾಜ್ಯದ ರೈಲ್ವೆ ಇಲಾಖೆಗೆ 7560 ಕೋಟಿ ರೂ. ಮೀಸಲಿರಿಸಲಾಗಿದೆ. ಇದುವರೆಗೂ ಪ್ರತಿ ವರ್ಷ 5 ಸಾವಿರ ಕೋಟಿ ರೂ.ಗಳನ್ನು ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿ ಈ ಮೊತ್ತವನ್ನು 7560 ರು.ಗೆ ಹೆಚ್ಚಿಸಲಾಗಿದೆ ಎಂದರು. ರಾಜ್ಯದಲ್ಲಿ 118 ಕೋಟಿ ರು. ವೆಚ್ಚದಲ್ಲಿ ವ್ಯವಸ್ಥಿತ ರೈಲ್ವೆ ನಿಲ್ದಾಣಗಳ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ಕಂಟೋಲ್‌ಮೆಂಟ್, ಯಶವಂತಪುರ ಸೇರಿದಂತೆ ಇನ್ನಿತರೆಡೆ ವ್ಯವಸ್ಥಿತ ರೈಲ್ವೆ ನಿಲ್ದಾಣಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದು ಮುಂದುವರೆದರೆ ಸಂತೋಷ ಪಡ್ತಿನಿ ಎಂದಿಲ್ಲ: ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿದ್ದರೆ ಸಂತೋಷ ಪಡುತ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ. ಅವರ ಪಕ್ಷ ನಿರ್ಧಾರ ಮಾಡಿ ಗೃಹ ಸಚಿವ ಪರಮೇಶ್ವರ್‌ರವರನ್ನು ಮುಖ್ಯಮಂತ್ರಿ ಮಾಡಿದರೆ ನಾನು ಸಂತೋಷ ಪಡುತ್ತೇನೆ ಎಂದು ಹೇಳಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಆರೋಪ ಬಂದ ತಕ್ಷಣ ಪತ್ರಕರ್ತರನ್ನು ಬಂಧಿಸಿದ್ರೆ ಹೇಗೆ?: ಖಾರವಾಗಿಯೇ ಮಾತಾಡಿದ ಸಚಿವ ಪರಮೇಶ್ವರ್

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾನೂನು ಎಲ್ಲರಿಗೂ ಒಂದೇ. ಕಾನೂನು ತನ್ನದೇ ಆದ ಕೆಲಸವನ್ನು ಮಾಡುತ್ತದೆ. ನಾನು 45 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಈಗ ತುಮಕೂರಿಗೆ ರಾಜಕಾರಣ, ದ್ವೇಷ, ಅಸೂಯೆ ಮಾಡಲು ಬಂದಿಲ್ಲ. ಏನಾದರೂ ಮಾಡಿ ನನ್ನ ಅವಧಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಚಿತ್ರಣವನ್ನು ಬದಲಾಯಿಸಬೇಕು ಎಂಬುದು ನನ್ನ ಧ್ಯೇಯವಾಗಿದೆ. ಕೇಂದ್ರ ಸರ್ಕಾರದಿಂದ ಬರುವ ಅನುದಾನ ಸರಿಯಾಗಿ ವಿನಿಯೋಗ ಮಾಡಲು ರಾಜ್ಯ ಸರ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರು ಕಾರ್ಯೋನ್ಮುಖರಾಗಲಿ ಎಂದು ಹೇಳಿದರು.

click me!