ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಗೋವಿಂದ ಕಾರಜೋಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.
ಚಿತ್ರದುರ್ಗ(ಮಾ.24): ಚಿಕ್ಕಮಗಳೂರಿನಲ್ಲಿ ಸಚಿವ ಶೋಭಾ ಕರಂದ್ಲಾಜೆ ವಿರುದ್ಧ ನಡೆಸಿದ ಗೋ ಬ್ಯಾಕ್ ಚಳವಳಿ ಮಾದರಿಯಲ್ಲಿ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆಗಳು ನಡೆದಿದ್ದು, ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಗೋವಿಂದ ಕಾರಜೋಳ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.
ಹೊರಗಿನವರಿಗೆ ಮಣೆ ಹಾಕಿದ್ದು ಸಾಕು, ಸ್ಥಳೀಯರಿಗೆ ಟಿಕೆಟ್ ಕೊಡಿ ಎಂದು ಪ್ರತಿಭಟನಾಕಾರರು ಹಕ್ಕೊತ್ತಾಯ ಮಂಡಿಸಿದರು. ಚಿತ್ರದುರ್ಗ ಕ್ಷೇತ್ರದಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಗ್ರಹಿಸಿದ ಮತ್ತೋರ್ವ ಟಿಕೆಟ್ ಆಕಾಂಕ್ಷಿ ರಘು ಚಂದನ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.
undefined
ಸಿದ್ದಗಂಗಾ ಮಠ ವಿಶ್ವಕ್ಕೆ ಪರಿಚಯಿಸುವಲ್ಲಿ ನನ್ನ ಸೇವೆಯೂ ಇದೆ: ವಿ ಸೋಮಣ್ಣ
ಗೋಬ್ಯಾಕ್ ನಾರಾಯಣಸ್ವಾಮಿ, ಗೋ ಬ್ಯಾಕ್ ಕಾರಜೋಳ ಘೋಷಣೆಯ ಪ್ಲೇ ಕಾರ್ಡ್ ಹಿಡಿದ ಪ್ರತಿಭಟನಾಕಾರರು ನಂತರ ಬಿಜೆಪಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಿದರು. ಪಕ್ಷ ಕಟ್ಟೋಕೆ ನಾವು ಬೇಕು, ಟಿಕೆಟ್ ನೀಡಿ ಸಂಸತ್ ಗೆ ಕಳಿಸಲು ಬೇರೆಯವರು ಬೇಕಾ ಎಂದು ಅಸಮಾಧಾನ ಹೊರ ಹಾಕಿದರು.