ನಿಮ್ಮ ಮನೆ ದೇವರು ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡಲ್ಲ | ಸಿಎಂ ಬಗ್ಗೆ ವಿಶ್ವನಾಥ್ ಮಾತು
ಮೈಸೂರು(ಜ.13): ಯಡಿಯೂರಪ್ಪನವರೇ ನಿಮ್ಮ ಮನೆ ದೇವರು ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡಲ್ಲ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೊಟ್ಟ ಮಾತು ಉಳಿಕೊಳ್ಳದ ನಿಮ್ಮನ್ನು ದೇವರು ಕೂಡ ಕ್ಷಮಿಸೋಲ್ಲ. ನೀವು ಎಂತಾ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ? 33 ರಲ್ಲಿ 13 ವೀರಶೈವ,11 ಜನ ಒಕ್ಕಲಿಗ,4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ. ಇದೇನಾ ನಿಮ್ಮ ಸಾಮಾಜಿಕ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.
ನಾಗೇಶ್ ಅವರನ್ನು ಯಾಕೇ ತೆಗೀಬೇಕು..? ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಕೊಡ್ತೀರಾ ಹೇಳಿ..? ಕೋರ್ಟ್ ಆದೇಶಕ್ಕೂ ನನಗೆ ಮಂತ್ರಿ ಸ್ಥಾನ ಕೊಡೋದಕ್ಕು ಸಂಬಂಧ ಇಲ್ಲ. ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ..? ಯಾಕೇ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಶಾಸಕ ಸಾರಾ, ಡಿಸಿ ರೋಹಿಣಿ ನಡುವೆ ‘ಮಾಸ್ಕ್ ಟಾಕ್’!
ಏನಾದರೂ ಬ್ಲಾಕ್ ಮೇಲ್ ಮಾಡ್ತಿದ್ತಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ..? ಅಥವಾ ನೀವೇನು ಸೈನಿಕನ ಕೈಗೊಂಬೆ ಆಗಿದ್ದೀರಾ? ನಿಮ್ಮ ಮಾಜಿ ಪಿಎ ಹಾಗೂ ಸ್ನೇನಿಕ ನಿಮ್ಮನ್ನು ಬ್ಲಾಕ್ ಮೇಲ್ ಸಚಿವ ಸ್ಥಾನ ಪಡೆದುಕೊಂಡ್ರಾ ಹೇಳಿ ಎಂದು ಪ್ರಶ್ನಿಸಿದ್ದಾರೆ.