ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಕಿವಿಗೊಡಬೇಡಿ: ರಮೇಶ ಜಾರಕಿಹೊಳಿ

Published : Apr 22, 2023, 09:11 PM IST
ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಕಿವಿಗೊಡಬೇಡಿ: ರಮೇಶ ಜಾರಕಿಹೊಳಿ

ಸಾರಾಂಶ

ರಮೇಶ್‌ ಜಾರಕಿಹೊಳಿ ಗುರುತು ಕಮಲವೆಂದು ತಾಯಂದಿರಿಗೆ ತಿಳಿಹೇಳಿ, 7ನೇ ಬಾರಿ ಆಯ್ಕೆ ಬಯಸಿ ಚುನಾವಣಾ ಪ್ರಚಾರದಲ್ಲಿ ಶಾಸಕ ರಮೇಶ ಜಾರಕಿಹೊಳಿ ಮನವಿ. 

ಗೋಕಾಕ(ಏ.22): ಈ ಬಾರಿಯ ಚುನಾವಣೆಯಲ್ಲಿ ಕಾರ್ಯಕರ್ತರೆ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು. ರಮೇಶ್‌ ಜಾರಕಿಹೊಳಿ ಅವರ ಗುರುತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು ಎಂದು ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ 7ನೇ ಬಾರಿ ಆಯ್ಕೆ ಬಯಸಿ ಚುನಾವಣಾ ಪ್ರಚಾರ ನಿಮಿತ್ತ ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಸುಳ್ಳು ಭರವಸೆಗಳಿಗೆ ಕಿವಿಕೊಡದೇ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು. ನನ್ನ ಅಭಿವೃದ್ಧಿ ಕಾಮಗಾರಿಗಳನ್ನು ಗಮನಿಸಿ ಈ ಸಾರಿ ನನಗೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು. ನೀರಾವರಿ, ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ ರಾಜ್ಯದಲ್ಲಿ ಗೋಕಾಕ ಮತಕ್ಷೇತ್ರದವನ್ನು ಅಭಿವೃದ್ಧಿ ಪಡಿಸೋಣ. ಚಹಾ ಮಾರಿ ಕಷ್ಟಪಟ್ಟು ಇಂದು ಮೋದಿ ಅವರು ದೇಶದ ಪ್ರಧಾನಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸುವ ಕಾರ್ಯ ಮಾಡಿದ್ದಾರೆ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಜನಸಾಮಾನ್ಯರ ಕಷ್ಟಗಳನ್ನು ಅರಿತ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋಣ ಎಂದರು.

ಕಾಂಗ್ರೆಸ್‌ ಬಲಪಡಿಸಿದ ಬಿಜೆಪಿಯ ಘಟಾನುಘಟಿ ನಾಯಕರು..!

ಶಾಸಕ ರಮೇಶ ಜಾರಕಿಹೊಳಿ ಅವರನ್ನು ನೂರಾರು ಗ್ರಾಮಸ್ಥರು ಪಾಲ್ಗೊಂಡು ಶಾಸಕರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಶಾಸಕರು ಸಂಗೋಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಿ ಈ ಬಾರಿಯೂ ನನ್ನನ್ನು ಆಶೀರ್ವದಿಸಿ ದಾಖಲೆಯ ಅಂತರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಟಿ.ಆರ್‌.ಕಾಗಲ, ಮಡೆಪ್ಪ ತೋಳಿನವರ, ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಲಕ್ಕಪ್ಪ ಮಾಳಗಿ, ಲಕ್ಷ್ಮಣ ಕಿಲಾರಿ, ಹನುಮಂತಗೌಡ ಪಾಟೀಲ, ಪ್ರಕಾಶ ವಡ್ಡರ, ಮುತ್ಯೆಪ್ಪಾ ಕಿಲಾರಿ, ವಿಠಲ ಗುಂಡಿ, ಬಿಜೆಪಿ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಬಾಳೇಶ ಗಿಡ್ನವರ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ಸೊಕ್ಕಿನ ಮನುಷ್ಯ ಸೋಲು ಕಾಣಬೇಕು; ಲಕ್ಷ್ಮಣ ಸವದಿ ವಿರುದ್ಧ ಗುಡುಗಿದ ಸಾಹುಕಾರ!

ಲಕ್ಷ್ಮಣ ಸವದಿ, ಶೆಟ್ಟರ್‌ ಅವರು ಪಕ್ಷ ಬಿಟ್ಟಿದ್ದು ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಡಿಕೆಶಿ ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ವಾಲ್ಮೀಕಿ ಸಮಾಜದಲ್ಲಿ ಹುಟ್ಟಿದರೂ ಸಹ ಎಲ್ಲ ಸಮುದಾಯಗಳ ಜನರ ಪ್ರತಿನಿಧಿಯಾಗಿ ಕಾರ್ಯಾಮಾಡುತ್ತೇನೆ ನನಗೆ ಈ ಬಾರಿ ಆಶೀರ್ವದಿಸಿಬೇಕು ಅಂತ ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ