ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

Published : Oct 12, 2025, 04:42 PM IST
N Cheluvarayaswamy

ಸಾರಾಂಶ

ಸದ್ಯ ಎಲ್ಲಾ ನಾಲೆಗಳಿಗೂ ನೀರನ್ನು ನಿಲ್ಲಿಸಲಾಗಿದೆ. ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಸಿಡಿಎಸ್ ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀರಂಗಪಟ್ಟಣ ((ಅ.12): ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಸಿಡಿಎಸ್ ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಡೆದು ಹೋಗಿದ್ದ ನಾಲೆ ಹಾಗೂ ರೈತರ ಜಮೀನು ಪರಿಶೀಲನೆ ನಡೆಸಿ ಮಾತನಾಡಿ, ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ವೇ ಕಾರ್ಯ ಬಳಿಕ ಎಷ್ಟು ಎಕರೆ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತಿಳಿಯುತ್ತದೆ ಎಂದರು.

ಸದ್ಯ ಎಲ್ಲಾ ನಾಲೆಗಳಿಗೂ ನೀರನ್ನು ನಿಲ್ಲಿಸಲಾಗಿದೆ. ಮಳೆ ನಿಂತ ನಂತರ ಒಡೆದ ನಾಲೆಯನ್ನು ಸರಿಪಡಿಸಲಾಗುವುದು. ಎನ್‌ಡಿಆರ್‌ಎಸ್ ನಲ್ಲಿ 1 ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ 8500 ರು. ನೀರಾವರಿ ಆಶ್ರಿತ ಬೆಳೆಗಳಿಗೆ 17,000 ರು. ತೋಟಗಾರಿಕೆ ಬೆಳೆಗೆ 22,500 ರು. ಪರಿಹಾರ ನೀಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ರೈತರ ಬೇಡಿಕೆಯಂತೆ ಎಲ್ಲಾ ಬಗೆಯ ಬೆಳೆಗಳಿಗೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 8,500 ರು. ನೀಡುವುದಾಗಿ ಘೋಷಣೆ ಮಾಡಲಾಗಿದೆ ಎಂದರು.

ಸರ್ಕಾರ ಪರಿಹಾರ ನೀಡಲಾಗುವುದು

ಜಂಟಿ ಸರ್ವೇ ನಡೆದ ತಕ್ಷಣ ಯಾರು ಕಾಯುವಂತಿಲ್ಲ. ವೆಬ್ ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಮಾರನೇ ದಿನಕ್ಕೆ ಪರಿಹಾರ ನೀಡಲಾಗುವುದು. ಈ ಪ್ರಕ್ರಿಯೆಯು ಮಳೆ ನಿಂತ ಒಂದು ವಾರದೊಳಗೆ ಮಾಡಲಾಗುತ್ತದೆ. ರೈತರು ತಮ್ಮ ಬೆಳೆಗಳಿಗೆ ಇನ್ಶೂರೆನ್ಸ್ ಮಾಡಿಸಿದ್ದರೆ ಇನ್ಶೂರೆನ್ಸ್ ಹಣದ ಜೊತೆ ಸರ್ಕಾರ ಪರಿಹಾರ ನೀಡಲಾಗುವುದು ಎಂದರು. ಈ ವೇಳೆ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಿಇಒ ಕೆ.ಆರ್.ನಂದಿನಿ, ತಹಸೀಲ್ದಾರ್ ಚೇತನ ಯಾದವ್, ನೀರಾವರಿ ನಿಗಮದ ರಘುರಾಮ್, ಕಾರ್ಯಪಾಲಕ ಎಂಜಿನಿಯರ್ ಜಯಂತ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Siddaramaiah: ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ
Davanagere Bypoll 2026: ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ; ₹15 ಲಕ್ಷದ ಭರವಸೆ ಏನಾಯ್ತು? ಡಿಕೆಶಿ ಪ್ರಶ್ನೆ