ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದಿದ್ದಾರೆ, ನನಗೆ ಹಾಗೆ ಅನ್ನಿಸುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಸರ್ವರಿಗೂ ಸಮಪಾಲು-ಸಮಬಾಳು ಎನ್ನುವ ಹಾಗೆ ಎಲ್ಲ ಸಮುದಾಯಗಳಿಗೂ ಕಾಂಗ್ರೆಸ್ ಆದ್ಯತೆ ಹಾಗೂ ಸೂಕ್ತ ಸ್ಥಾನಮಾನ ನೀಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಬಳ್ಳಾರಿ (ಅ.08): ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದಿದ್ದಾರೆ, ನನಗೆ ಹಾಗೆ ಅನ್ನಿಸುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಸರ್ವರಿಗೂ ಸಮಪಾಲು-ಸಮಬಾಳು ಎನ್ನುವ ಹಾಗೆ ಎಲ್ಲ ಸಮುದಾಯಗಳಿಗೂ ಕಾಂಗ್ರೆಸ್ ಆದ್ಯತೆ ಹಾಗೂ ಸೂಕ್ತ ಸ್ಥಾನಮಾನ ನೀಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಮನೂರು ಅವರು ಯಾವ ಅರ್ಥದಲ್ಲಿ ಹೀಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಲಿಂಗಾ ಯತ ಸಮುದಾಯಕ್ಕೆ ಏಳೆಂಟು ಮಂತ್ರಿ ಸ್ಥಾನಗಳನ್ನು ನೀಡಲಾಗಿದೆ. ಸರ್ವರಿಗೂ ಸಮಪಾಲು ತತ್ವದಡಿ ನಮ್ಮ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದರು.
ಗೊಂದಲವಿಲ್ಲ: ರಾಜ್ಯದಲ್ಲಿ ಹೊಸದಾಗಿ ಬಾರ್‌ಗಳ ಲೈಸನ್ಸ್ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವೆ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.
undefined
ಸಣ್ಣ ಕೈಗಾರಿಕೆ ಕ್ಷೇತ್ರ ಉಳಿಯಲಿ: ರಾಜ್ಯದಲ್ಲಿ ಸಣ್ಣ ಕೈಗಾರಿಕೆ ಕ್ಷೇತ್ರ ಉಳಿಯಬೇಕಿದ್ದು, ಈ ಕ್ಷೇತ್ರದಲ್ಲಿ ಶೇ. 90 ರಷ್ಟು ಉದ್ಯೋಗ ಸೃಷ್ಟಿಸಲಾಗುತ್ತದೆ. ಸಣ್ಣ ಕೈಗಾರಿಕೆ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.
ಶಾಮನೂರು ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಲಿ: ಬೊಮ್ಮಾಯಿ
ಬೆಳಗಾವಿಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಹಮ್ಮಿಕೊಂಡಿದ್ದ ಸುವರ್ಣ ಸಾಧಕರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 26 ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು. ಸಣ್ಣ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸಣ್ಣ ಕೈಗಾರಿಕೆಗಳಿಗೆ ಬ್ಯಾಂಕ್ ಸ್ಥಾಪಿಸಬೇಕು. ಸಂದರ್ಭ ಬಂದ ವೇಳೆ ಸಣ್ಣ ಕೈಗಾರಿಕೆಗಳ ಸಾಲ ಮನ್ನಾ ಮಾಡಬೇಕು ಎಂದು ಹೇಳಿದರು. ಸಣ್ಣ ಕೈಗಾರಿಕೆ ಘಟಕಗಳು ನಡೆಸುವುದು ತುಂಬಾ ಕಷ್ಟಕರ. ನೇರವಾಗಿ ಇಲ್ಲವೇ ಪರೋಕ್ಷವಾಗಿ ಸಣ್ಣ ಕೈಗಾರಿಕೆಗಳು ದೇಶದ ಆರ್ಥಿಕತೆಗೆ ಬೆನ್ನಲುವಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಏಷಿಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ರಾಜ್ಯದ ವಿವಿಧ ಮೂಲೆ ಮೂಲೆಗಳಿಗೆ ತೆರಳಿ ಸಾಧಕರನ್ನು ಗುರುತಿಸಿ, ಸನ್ಮಾನಿಸುವ ಕೆಲಸ ಮಾಡಿರುವುದು ಅಭಿನಂದನಾರ್ಹ. ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯನಿರಂತರವಾಗಲಿ. ಕರಾವಳಿ, ಹೈದ್ರಾಬಾದ್ ಕರ್ನಾಟಕಕ್ಕೆ ತೆರಳಿ ಸ್ಥಳೀಯವಾಗಿ ವಿಶೇಷವಾಗಿ 26 ಜನ ಸಾಧಕರನ್ನು ಗುರುತಿಸಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಮಾಜದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸಿರುವುದು ಶ್ಲಾಘನೀಯ. ಸುವರ್ಣದಂತ ಕಾರ್ಯಕ್ರಮ ಇದಾಗಿದೆ.
ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಭಯ ಹುಟ್ಟಿರುವುದು ಪೋಸ್ಟರ್‌ನಿಂದ ಸ್ಪಷ್ಟ: ಡಿಕೆಶಿ
ಇವತ್ತಿನ ದಿನಮಾಮಗಳಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆ ಸುದ್ದಿಗೆ ಒತ್ತು ನೀಡುವ ಬದಲಿಗೆ ಇಂತಹ ಕಾರ್ಯಕ್ರಮ ಮಾಡಬೇಕು. ಅನೇಕ ವರ್ಷಗಳಿಂದ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸಾಧಕರ ನ್ನು ಗುರುತಿಸಿ ಗೌರವಿಸಿಕೊಂಡು ಬರುತ್ತಿದೆ. ಸ್ಪರ್ಧಾತ್ಮಕ ದಿಸೆಯಲ್ಲಿ ಮಾಧ್ಯಮಗಳು ನಡೆಯುತ್ತಿವೆ. ನರೇಗಾ ಕಾರ್ಯಕ್ರಮ ಚಾಲನೆ ಕೊಡುವ ಕಾರ್ಯಕ್ರಮದಲ್ಲಿ ನ್ಯೂಸ್ ನೋಡುವುದು ರಾಜಕಾರಣಿಗಳಿಗೆ ಅನಿವಾರ್ಯವಾಗಿದೆ. ಒಂದೇ ಸುದ್ದಿಯನ್ನು ಹಲವು ಬಾರಿ ತೋರಿಸುವ ಕಾರ್ಯ ಮಾಡುವುದನ್ನು ಬಿಟ್ಟು. ಸಾಧಕರನ್ನು ತೋರಿಸಿದಲ್ಲಿ ಸಮಾಜದಲ್ಲಿ ಪರಿವರ್ತನೆಗೆ ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಕಾರ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚು ನಡೆಯಲಿ ಎಂದು ಆಶಿಸಿದರು.