ಗ್ಯಾರಂಟಿಯಿಂದ ಸರ್ಕಾರ ಆಗಿಲ್ಲ ದಿವಾಳಿ : ಸಿಎಂ

Kannadaprabha News   | Kannada Prabha
Published : Jan 08, 2026, 09:42 AM IST
Siddaramaiah

ಸಾರಾಂಶ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ₹52 ಸಾವಿರ ಕೋಟಿ ಖರ್ಚು ಮಾಡುತ್ತಿದೆ.

ಹಾವೇರಿ : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ₹52 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜನರಲ್ಲಿ ತಪ್ಪು ಕಲ್ಪನೆ ಬಿಂಬಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮ್ಮ ಸರ್ಕಾರ ಯಾವುದೆ ತಾರತಮ್ಯ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ

ಇಲ್ಲಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಯಾವುದೆ ತಾರತಮ್ಯ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಹಾಗಾಗಿ, ಎಲ್ಲ ಧರ್ಮ, ಜಾತಿಯ ಬಡವರಿಗೆ ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯ ಸಿಗಬೇಕು. ಆಗ ಮಾತ್ರ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ನೀರಾವರಿ ಯೋಜನೆ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ನೀರಾವರಿ ಯೋಜನೆ ಜಾರಿಯಾಗಬೇಕಿದೆ. ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಜಾರಿ ಆಗಬೇಕಿದೆ. ಕೃಷ್ಣ ಮೇಲ್ದಂಡೆ ಯೋಜನೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಕೇಸ್‌ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಗತ್ಯವಿದ್ದರೆ ಸುಪ್ರೀಂಕೋರ್ಟ್‌ಗೆ ಅಫಿಡೆವಿಟ್‌ ಸಲ್ಲಿಸಿ ಕೇಸ್‌ ಹಿಂದಕ್ಕೆ ಪಡೆಯುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ ಮುಗಿಯದಿದ್ದರೆ ನಮಗೆ ಬರಬೇಕಿರುವ 173 ಟಿಎಂಸಿ ನೀರು ಬಳಸಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಿಯೋಗದಲ್ಲಿ ತೆರಳಿ ಕೇಂದ್ರ ಸರ್ಕಾರವನ್ನು ಒತ್ತಾಯಿಸೋಣ ಎಂದು ಹೇಳಿದರು.

22 ಸರ್ಕಾರಿ ಮೆಡಿಕಲ್ ಕಾಲೇಜ್

ರಾಜ್ಯದಲ್ಲಿ ಈಗ 22 ಸರ್ಕಾರಿ ಮೆಡಿಕಲ್ ಕಾಲೇಜ್ ಇವೆ. ಎಲ್ಲೆಲ್ಲಿ ಇಲ್ಲವೋ ಅಲ್ಲಿ ಮೆಡಿಕಲ್‌ ಕಾಲೇಜು ಮಾಡುತ್ತೇವೆ. ನಮ್ಮ ಸಮಾಜದಲ್ಲಿ ಬಡವರು ಹೆಚ್ಚಾಗಿದ್ದಾರೆ. ಅವರೆಲ್ಲರೂ ಸರ್ಕಾರಿ ಆಸ್ಪತ್ರೆಯನ್ನೇ ನಂಬಿದ್ದಾರೆ. ಹಾಗಾಗಿ, ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ಅಗತ್ಯವಿದ್ದು, ಅದನ್ನು ನಾವು ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
ರಾಜ್ಯದಲ್ಲಿ ಸಿಎಂ ಕಸರತ್ತು ಹೊತ್ತಲ್ಲೇ ಡಿಕೇಶಿಗೆ ಹೊಸ ಹೊಣೆ