ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಈಗ ಬೇರೆ ವಾಮಮಾರ್ಗಗಳ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಸದ್ಯ ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ, ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್
ಮಂಗಳೂರು(ಆ.21): ರಾಜ್ಯದ ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡುತ್ತಿದ್ದಾರೆ. ಅವರು ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ಆದರೆ ಇವರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಈಗ ಬೇರೆ ವಾಮಮಾರ್ಗಗಳ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಸದ್ಯ ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ, ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದರು.
ಬಿಜೆಪಿ ತಂದಿದ್ದ ಭೂಕಾಯ್ದೆ ವಾಪಸ್: ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಯಡಿಯೂರಪ್ಪ ಪ್ರಕರಣದಲ್ಲಿ 20 ಕೋಟಿ ರು. ಲಂಚವನ್ನು ಚೆಕ್ ಮೂಲಕ ಪಡೆಯಲಾಗಿತ್ತು. ಗಡೀಪಾರಾಗಿದ್ದ ಅಮಿತ್ ಶಾ ಕೂಡ ಮಂತ್ರಿಯಾಗಿಲ್ವಾ? ಬಿಜೆಪಿ ನಾಯಕರ ಮೇಲೆ ಎಷ್ಟೋ ಗಂಭೀರ ಆರೋಪಗಳಿದ್ದವು. ಈಗ ಮುಖ್ಯಮಂತ್ರಿ ಮೇಲಿನ ಆರೋಪ ಕಪೋಲಕಲ್ಪಿತ ಎಂದರು.
ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು, ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಬಿಜೆಪಿಯವರಿಗೆ ದಲಿತರ ಮೇಲೆ ಪ್ರೀತಿ ಇದ್ದರೆ ಸಂವಿಧಾನ ಬದಲಾವಣೆ ಅಂತ ಯಾಕೆ ಮಾತನಾಡುತ್ತಿದ್ದರು ಎಂದು ಬಿಕೆ ಹರಿಪ್ರಸಾದ್ ಪ್ರಶ್ನಿಸಿದರು.