ವಿಪಕ್ಷ ನಾಯಕರಿಲ್ಲದೆ ರಾಜ್ಯಪಾಲರ ಭಾಷಣ ದುರ್ದೈವ: ಸಚಿವ ಎಚ್‌.ಕೆ.ಪಾಟೀಲ್‌

Published : Jul 04, 2023, 02:00 AM IST
ವಿಪಕ್ಷ ನಾಯಕರಿಲ್ಲದೆ ರಾಜ್ಯಪಾಲರ ಭಾಷಣ ದುರ್ದೈವ: ಸಚಿವ ಎಚ್‌.ಕೆ.ಪಾಟೀಲ್‌

ಸಾರಾಂಶ

ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ನಡೆದಿರುವ ನಮ್ಮ ದುರ್ದೈವ. ಈ ಪ್ರಸಂಗದಿಂದ ಸದನದ ಘನತೆ ಹಾಗೂ ಪರಂಪರೆಗೆ ಧಕ್ಕೆಯಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. 

ಬೆಂಗಳೂರು (ಜು.04): ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ನಡೆದಿರುವ ನಮ್ಮ ದುರ್ದೈವ. ಈ ಪ್ರಸಂಗದಿಂದ ಸದನದ ಘನತೆ ಹಾಗೂ ಪರಂಪರೆಗೆ ಧಕ್ಕೆಯಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸದನದಲ್ಲಿ ಯಾವಾಗಲೂ ವಿರೋಧ ಪಕ್ಷದ ನಾಯಕರು ಇದ್ದೇ ಇರುತ್ತಿದ್ದರು.

ಈಗ ನಮ್ಮ ರಾಜ್ಯಪಾಲರ ಭಾಷಣಕ್ಕೆ ವಿರೋಧ ಪಕ್ಷದ ನಾಯಕರು ಇಲ್ಲದೆ ಭಾಷಣ ಆಗಿದೆ. ಇದು ಒಳ್ಳೆಯ, ಆರೋಗ್ಯಕರ ಬೆಳವಣಿಗೆ ಅಲ್ಲ. ಅದು ಅವರ ಪಕ್ಷದ ವಿಚಾರ ಇರಬಹುದು. ಆದರೆ ಸದನದ ಘನತೆ ಮತ್ತು ಸಂಸ್ಕೃತಿ, ಪರಂಪರೆಗೆ ಧಕ್ಕೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ಬಿಜೆಪಿಯ ಜನ ವಿರೋಧಿ ಕಾನೂನುಗಳನ್ನು ವಾಪಸ್‌ ಪಡೆಯುವಂತಹ ಚಿಂತನೆ ಇದೆ. ಕಲಾಪ ಸಲಹಾ ಸಮಿತಿ ಸಭೆ ಬಳಿಕ ತೀರ್ಮಾನಿಸುತ್ತೇವೆ ಎಂದು ಹೇಳಿದರು.

ನೆಕ್ಕುಂದಿ ಕೆರೆ ಅವ್ಯವಸ್ಥೆ: ಮೀನುಗಾರಿಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಚಿವ ಸುಧಾಕರ್‌ ಗರಂ

ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಪ್ರತ್ಯೇಕ ಕಾನೂನು: ರಾಜ್ಯದಲ್ಲಿ ಸರ್ಕಾರಿ ವ್ಯಾಜ್ಯಗಳ ಸಂಖ್ಯೆಯೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವುಗಳ ನಿರ್ವಹಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು. ನ್ಯಾಯಾದಾನ ವ್ಯವಸ್ಥೆಯಲ್ಲಿ ಸರ್ಕಾರಿ ಪ್ರಕರಣಗಳನ್ನು ಕಡಿಮೆಗೊಳಿಸಲು ಹಲವು ಕಾನೂನಾತ್ಮಕ ಬದಲಾವಣೆ ಮಾಡಲು ಸಾಧ್ಯವಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ 1.80 ಲಕ್ಷ ವ್ಯಾಜ್ಯಗಳಿವೆ. ಈ ಸರ್ಕಾರಿ ವ್ಯಾಜ್ಯಗಳಲ್ಲಿ ಅಧಿಕ ಪ್ರಕರಣದಲ್ಲಿ ಸರ್ಕಾರಕ್ಕೆ ಸೋಲಾಗುತ್ತಿದೆ. 

ಹಾಗಾಗಿ ನ್ಯಾಯದಾನ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ತರಲು ಉನ್ನತ ಮಟ್ಟದಲ್ಲಿ ಸಭೆ ನಡೆಸಲಾಗಿದೆ. ಸದ್ಯದಲ್ಲಿ ಕ್ಯಾಬಿನೆಟ್‌ ಮುಂದೆ ಬರಲಿದೆ ಎಂದರು. ಬಡವರ ವ್ಯಾಜ್ಯಗಳನ್ನು ತೀವ್ರಗತಿಯಲ್ಲಿ ವಿಲೇವಾರಿ ಮಾಡಲು ಕೋಡ್‌ ಆಫ್‌ ಸಿವಿಲ ಪೊ›ಸೀಜರ್‌ (ಸಿಪಿಸಿ) ನಿಯಮಕ್ಕೆ ತಿದ್ದುಪಡಿ ತರಲಾಗುವುದು. ಇದರಿಂದಾಗಿ ಬಡವರಿಗೆ ಬಹಳ ದಿನಗಳ ಕಾಲ ವ್ಯಾಜ್ಯ ನಡೆಸಲು ಸಾಧ್ಯವಿಲ್ಲ. ಅಂಥ ವ್ಯಾಜ್ಯಗಳ ವಿಲೇವಾರಿಗೆ ಸಿಪಿಸಿ ಕಾನೂನು ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.

ರಾಜಕಾರಣದಲ್ಲಿ ಸೇವಾ ಮನೋಭಾವನೆ ಕಣ್ಮರೆ: ಸಂತೋಷ್‌ ಹೆಗ್ಡೆ ಆತಂಕ

ಬಡವರಿಗೆ ದ್ರೋಹ: ರಾಜ್ಯದ ಬಿಜೆಪಿ ನಾಯಕರು ಅಕ್ಕಿ ಕೊಡುವುದಕ್ಕೆ ಅಡ್ಡಗಾಲು ಹಾಕಿದರು. ಈಗ ಹಣ ಕೊಡುತ್ತೇವೆ ಎಂದರೂ ಅದಕ್ಕೂ ಕೊಂಕು ಮಾತನಾಡುತ್ತಿದ್ದಾರೆ ಎಂದು ಅಕ್ಕಿ ವಿಷಯವಾಗಿ ಬಿಜೆಪಿಯನ್ನು ಅಂಕಿ-ಅಂಶಗಳ ಸಮೇತ ಟೀಕಿಸಿದ ಅವರು, ಇವರಿಗೆ ಜನ ಈಗಷ್ಟೇ ಬುದ್ಧಿ ಕಲಿಸಿದ್ದರೂ ಬಡವರಿಗೆ ದ್ರೋಹ ಮಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಭೂ ಕಬಳಿಕೆ ಮತ್ತು ಭೂ ಒತ್ತುವರಿ ವಿಷಯದಲ್ಲಿ ಅಧಿಕಾರಿಗಳು ತಾವು ಗೊಂದಲ ಸೃಷ್ಟಿಸಿಕೊಂಡು ರಾಜ್ಯದ ಬಡವರಿಗೆ ಮಾಡಿರುವ ಅನ್ಯಾಯದಿಂದ ಅವರೆಲ್ಲಾ ತೊಂದರೆ ಅನುಭವಿಸುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ