ಈ ಬಾರಿ ಬಿಜೆಪಿಗೆ 50 ಸಾವಿರ ಮತಗಳ ಅಂತರ ಗೆಲುವು: ಸಂಸದ ಗೋವಿಂದ ಕಾರಜೋಳ

Published : Mar 28, 2026, 10:55 PM IST
Govind Karjol

ಸಾರಾಂಶ

ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಬಾಗಲಕೋಟೆ (ಮಾ.28): ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15-16ನೇ ವಾರ್ಡಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತದಲ್ಲಿ ಒಂದೇ ಒಂದು ಗಮನಾರ್ಹ ಅಭಿವೃದ್ಧಿ ಕಾರ್ಯಗಳಾಗದೆ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. 2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಮತ ನೀಡದೆ ತಪ್ಪು ಮಾಡಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದಾರೆ.

ಅನುದಾನ ದುರುಪಯೋಗ

ಈ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಾದ ಅನುದಾನ ದುರುಪಯೋಗ ಮಾಡಿಕೊಂಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಬಿಜೆಪಿ ಅಭ್ಯರ್ಥಿವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ.ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲಿಂ ಮೋಮಿನ್, ನರಸಪ್ಪ ಅಂಬಿಗೇರ, ದುರಗಪ್ಪ ನಾಯಕ್, ಹಣಮಂತ ಬಿಚ್ಚಲಿ, ಪರಶು ಕುರಬರ, ನಾಗರಾಜ ಕಟ್ಟಿಮನಿ, ರಾಜು ಕೋಟೆಕಲ್ಲ, ಬಸವರಾಜ ಅಂಬಿಗೇರ, ಮಲ್ಲಿಕಾರ್ಜುನ ಸುರಪೂರ, ಶೀವು ಸುರಪೂರ, ಅನಿತಾ ಸರೋದೆ, ಭಾಗ್ಯಾ ಉದ್ದನೂರ, ಶಶಿಕಲಾ ಮಜ್ಜಗಿ, ಕುಮಾರ ಪವಾರ್, ಮಂಜು ಚವ್ಹಾನ್, ಜ್ಯೋತಿ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗವಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡಲಿ: ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಜನರು ರೋಸಿ ಹೋಗಿದ್ದಾರೆ: ಸಂಸದ ಜಗದೀಶ ಶೆಟ್ಟರ್