ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಮಾನದಂಡ ಅನುಸರಿಸಿದರೆ ಅಪ್ಪ ಒಬ್ಬರೇ ನಿಲ್ತಾರೆ. ಸಾಮರ್ಥ್ಯ ಪರಿಗಣಿಸಿ ಇಬ್ಬರಿಗೆ ನೀಡಿದರೆ ನಾನೂ ಕೂಡ ಸ್ಪರ್ಧಿಸುತ್ತೇನೆ. ಇದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪುತ್ರ ಗೋಪಾಲ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ವಿಜಯಪುರ (ಜ.20): ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಮಾನದಂಡ ಅನುಸರಿಸಿದರೆ ಅಪ್ಪ ಒಬ್ಬರೇ ನಿಲ್ತಾರೆ. ಸಾಮರ್ಥ್ಯ ಪರಿಗಣಿಸಿ ಇಬ್ಬರಿಗೆ ನೀಡಿದರೆ ನಾನೂ ಕೂಡ ಸ್ಪರ್ಧಿಸುತ್ತೇನೆ. ಇದೆಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪುತ್ರ ಮತ್ತು 2018ರಲ್ಲಿ ನಾಗಠಾಣ (ಮೀ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಗೋಪಾಲ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆಯೇ ಹೊರತು ಯಾವುದೇ ಪದಾಧಿಕಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ತಿಳಿಸಿದರು. ನಾಗಠಾಣ (ಮೀ) ಕ್ಷೇತ್ರದಿಂದ ಬಿಜೆಪಿ ಯಾರಿಗೆ ಟಿಕೇಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ. ಎರಡು ವರ್ಷಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಮತಕ್ಷೇತ್ರದಲ್ಲಿ ಸುತ್ತಾಡಲು ಸಾಧ್ಯವಾಗಿರಲಿಲ್ಲ. ಆದರೂ, ಕಾರ್ಯಕರ್ತರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಅವರ ಕೆಲಸ ಕಾರ್ಯಗಳಿಗೆ ಸ್ಪಂದಿಸಿದ್ದೇನೆ. ಈಗ ಮತಕ್ಷೇತ್ರಾದ್ಯಂತ ಸಂಚರಿಸುತ್ತಿದ್ದೇನೆ. ಈ ವರ್ಷ ನಡೆಯಲಿರುವ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯ ತಯಾರಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ.
ವಿಮಾನ ನಿಲ್ದಾಣ ಫೆಬ್ರುವರಿಗೆ ಉದ್ಘಾಟನೆ: ಸಚಿವ ಕಾರಜೋಳ
ಆಲಮಟ್ಟಿ: ವಿಜಯಪುರದ ಬಸವೇಶ್ವರ ವಿಮಾನ ನಿಲ್ದಾಣ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಇದೇ ಫೆಬ್ರುವರಿಯಲ್ಲಿ ಪ್ರಧಾನ ಮಂತ್ರಿಗಳನ್ನು ಕರೆಸಿ ಉದ್ಘಾಟಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸಿದ್ದರಾಮಯ್ಯ ಕಾಣುತ್ತಿರುವ ಸಿಎಂ ಕುರ್ಚಿ ಕನಸು ನನಸಾಗೋದಿಲ್ಲ: ಸಚಿವ ಕಾರಜೋಳ
ಆಲಮಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಅದರ ಜತೆಗೆ ಜಿಲ್ಲೆಯ ನೀರಾವರಿ ವಂಚಿತ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ .2700 ಕೋಟಿ ವೆಚ್ಚದ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೂ ಪ್ರಧಾನಿಯವರಿಂದಲೇ ಅಡಿಗಲ್ಲು ನೆರವೇರಿಸಲಾಗುವುದು ಎಂದರು.
2024ರ ಚುನಾವಣೆ ನಂತರ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚೋಕು ಯಾರು ಇರಲ್ಲ: ಕಾರಜೋಳ
ಟ್ವಿಟ್‌ಗೆ ತಿರುಗೇಟು: ಪ್ರಧಾನಿ ಮೋದಿ ಗುರುವಾರ ಲೋಕಾರ್ಪಣೆಗೊಳಿಸಿದ ನಾರಾಯಣಪುರ ಎಡದಂಡೆ ಕಾಲುವೆಯ ನೀರು ನಿಯಂತ್ರಣ ಹಾಗೂ ಸದ್ಬಳಕೆಯ ಸ್ಕಡಾ ತಂತ್ರಜ್ಞಾನಕ್ಕೆ ಬಸವರಾಜ ಬೊಮ್ಮಾಯಿ ಅವರು 2012ರಲ್ಲಿ ಜಲಸಂಪನ್ಮೂಲ ಸಚಿವರಿದ್ದಾಗ ಪ್ರಸ್ತಾವನೆ ಸಲ್ಲಿಸಿದ್ದರು. ಆಗಿನ ಬಿಜೆಪಿಯ ಸರ್ಕಾರ, ಅದರ ಅಳವಡಿಕೆಗೆ .3,060 ಕೋಟಿ ಕಾಮಗಾರಿಗೆ 5.12.2012 ರಂದು ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಈ ಯೋಜನೆಯನ್ನು ರಾಷ್ಟ್ರೀಯ ಜಲ ಉದ್ದಿಷ್ಟಯೋಜನೆಯಡಿ ನೀರು ಬಳಕೆ ದಕ್ಷತೆ ಕಾರ್ಯಕ್ರಮದಡಿ ಪರಿಗಣಿಸಿ .1,020 ಕೋಟಿ ಅನ್ನು ಕೇಂದ್ರ ಸರ್ಕಾರ ಅನುದಾನ ನೀಡಿದೆ. ಆ ಅನುದಾನದಲ್ಲಿ .1,010 ಕೋಟಿಗಳನ್ನು ಈಗಾಗಲೇ ಕೇಂದ್ರ ನೀಡಿದೆ ಎಂದು ಗೋವಿಂದ ಕಾರಜೋಳ, ಎಂ.ಬಿ. ಪಾಟೀಲ ಮಾಡಿದ ಟೀಕೆಗೆ ತಿರುಗೇಟು ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಇದ್ದರು.