ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರ ಕುಟುಂಬಕ್ಕೆ ಕೊರೋನಾ ಶಾಕ್ ಕೊಟ್ಟಿದ್ದು, ಇದೀಗ ಅವರ ಪುತ್ರನ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು, (ಅ.18): ಮುಧೋಳ ಶಾಸಕ, ಕರ್ನಾಟಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಆದರೆ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರಿಗೆ ಕೊರೊನಾ ಸೋಂಕು ಇನ್ನೂ ಬಾಧಿಸುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊರೋನಾ ಸೋಂಕಿನಿಂದ 24 ದಿನಗಳಿಂದಲೂ ಬೆಂಗಳೂರಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಪಾಲ ಕಾರಜೋಳ ಅವರನ್ನು ಇದೀಗ ಚೆನ್ನೈಗೆ ಏರ್ಲಿಫ್ಟ್ ಮಾಡುವ ಬಗ್ಗೆ ಚಿಂತಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಶಾಸಕರೊಬ್ಬರ ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ
ಮಣಿಪಾಲ್ನಲ್ಲಿ ವೆಂಟಿಲೇಟರ್ ಮುಖಾಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರ ಆರೋಗ್ಯ ಸುಧಾರಿಸಿರಲಿಲ್ಲ. ಹಾಗಾಗಿ ಚೆನ್ನೈ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಡಿಸಿಎಂ ಮುಂದಾಗಿದ್ದಾರೆ.
ಸ್ಪಷ್ಟಪಡಿಸಿದ ಸಿಎಂ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿ, ಗೋವಿಂದ ಕಾರಜೋಳ ಅವರ ಮಗ ಸಿರಿಯಸ್ ಇದ್ದಾರೆ. ಸ್ಪೆಷಲ್ ಫ್ಲೈಟ್ ನಲ್ಲಿ ಅವರ ಮಗನನ್ನು ಚೆನ್ನೈಗೆ ಕರೆದುಕೊಂಡು ಹೋಗುತ್ತಿದ್ದಾರೆ. ನೆರೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ತೆರಳಲು ಸಾಧ್ಯವಾಗುತ್ತಿಲ್ಲ. ಕೆಲವು ಸಚಿವರು ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ. ಸಮಸ್ಯೆಗಳಿವೆ, ಉಳಿದವರು ಅವರ ಶಕ್ತಿ ಮೀರಿ ಕೆಲಸ ಮಾಡ್ತಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು.