ಕಾವೇರಿ ವಿಚಾರದಲ್ಲಿ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಈಶ್ವರ್‌ ಖಂಡ್ರೆ

By Kannadaprabha News  |  First Published Sep 25, 2023, 1:59 PM IST

ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆ ದೃಷ್ಟಿಯಿಂದ ರಾಜ್ಯ ಸರ್ಕಾರ ಕಾವೇರಿ ನೀರು ಬಳಕೆಯಲ್ಲಿ ರೈತರ ಅನುಕೂಲಕ್ಕಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು. 


ಚಿಕ್ಕಮಗಳೂರು (ಸೆ.25): ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆ ದೃಷ್ಟಿಯಿಂದ ರಾಜ್ಯ ಸರ್ಕಾರ ಕಾವೇರಿ ನೀರು ಬಳಕೆಯಲ್ಲಿ ರೈತರ ಅನುಕೂಲಕ್ಕಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ತಡೆ ಸಂಬಂಧ ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ. ಸರ್ವ ಪಕ್ಷಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ ಎಂದರು.

ಕೆಆರ್‌ಎಸ್ ಅಣೆಕಟ್ಟೆಯ ನೀರಿನ ಕೊರತೆ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದೇವೆ. ಕೆಆರ್‌ಎಸ್ ಅಣೆಕಟ್ಟೆ ನೀರು ಆಶ್ರಯಿಸಿರುವ ರೈತರಿಗೆ ಜನರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷಗಳ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ. ಈ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿಂದ ಎರಡು ಪಕ್ಷಗಳು ಕೈ ಕೈ ಹಿಸುಕಿಕೊಳ್ಳುತ್ತಿವೆ. ಕಾಂಗ್ರೆಸ್ ಪ್ರಾಬಲ್ಯ ಕಂಡು ನಮ್ಮ ಅಸ್ತಿತ್ವ ಹೋಗುತ್ತಿದೆ ಎಂದು ಮೈತ್ರಿಗೆ ಮುಂದಾಗಿವೆ ಎಂದರು.

Latest Videos

undefined

ಪತಿಯ ಐಷಾರಾಮಿ ಜೀವನದ ಹಕ್ಕು ಪತ್ನಿ, ಮಕ್ಕಳಿಗೂ ಇದೆ: ಹೈಕೋರ್ಟ್‌

ಬಿಜೆಪಿ ಮತ್ತು ಜೆಡಿಎಸ್ ಆರೋಪಗಳಲ್ಲಿ ಹುರುಳಿಲ್ಲ. ಕಾಂಗ್ರೆಸ್‌ಗೆ ಅವರ ಹೇಳಿಕೆಯಿಂದ ಯಾವುದೇ ನಷ್ಟವೂ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 25 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಯಿಂದಲೇ ಪೂರ್ಣಬಹುಮತದ ಸರ್ಕಾರ ಬಂದಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಪಾರದರ್ಶಕ ಆಡಳಿತ ನೀಡುತ್ತಿದೆ. ಬಿಜೆಪಿ-ಜೆಡಿಎಸ್ ಮುಖಂಡರು ಹೊಟ್ಟೆಕಿಚ್ಚಿನಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಆತ್ಮ ವಿಶ್ವಾಸ ಇದ್ರೆ ಗುರಿ ಮುಟ್ಟಲು ಸಾಧ್ಯ: ಪ್ರತಿಭೆ ಎಲ್ಲರಲ್ಲೂ ಇರುತ್ತದೆ, ಇದರ ಜತೆಗೆ ಆತ್ಮ ವಿಶ್ವಾಸ ಇರಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ಪಟ್ಟರೆ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ವಿ. ಖಂಡ್ರೆ ಹೇಳಿದರು. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಿಮಗೆ ಇಷ್ಟ ಇರುವ ವಿಷಯವನ್ನು ಶಿಕ್ಷಣದಲ್ಲಿ ಆಯ್ಕೆ ಮಾಡಿಕೊಂಡರೂ ಆ ಗುರಿ ಮುಟ್ಟಲು ಶ್ರಮ ಪಡಬೇಕು, ಆಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. 

ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಲಿ: ಸಚಿವ ಭೋಸರಾಜ್

ಅದಕ್ಕಾಗಿ ನೀವೇ ಮುನ್ನುಗ್ಗಬೇಕು ಎಂದು ಸಲಹೆ ಮಾಡಿದರು. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ರಾಜ್ಯದ 31 ಜಿಲ್ಲೆಗಳಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಪ್ರತಿ ವರ್ಷ ಸುಮಾರು ಒಂದು ಕೋಟಿ ರು.ಗಳನ್ನು ವಿದ್ಯಾರ್ಥಿಗಳಿಗಾಗಿ ನೀಡಲಾಗುತ್ತಿದೆ ಎಂದರು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು, ನಿಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ನಿಮ್ಮಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಮಹಾಸಭೆ ವತಿಯಿಂದ ಪ್ರೋತ್ಸಾಹದ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

click me!