
ಬೆಳಗಾವಿ (ಡಿ.30) ಬೆಳಗಾವಿ ಗ್ರಾಮೀಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬಣ ಭರ್ಜರಿ ಗೆಲುವು ಸಾಧಿಸಿದೆ. ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಭರ್ಜರಿ ಜಯಭೇರಿ ದಾಖಲಿಸಿದ್ದಾರೆ.
ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟೂ 44 ಗ್ರಾಮ ಪಂಚಾಯಿತಿಗಳಿದ್ದು, ಈವರೆಗೆ ಪ್ರಕಟವಾಗಿರುವ ಫಲಿತಾಂಶಗಳ ಪೈಕಿ ಶೇ.75ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ತಮ್ಮ ಬೆಂಬಲಿಗರು ಜಯಗಳಿಸಿದ್ದಾಗಿ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.
ಭರ್ಜರಿ ಸ್ಟೆಪ್ ಹಾಕಿದ ಶಾಸಕಿ ಹೆಬ್ಬಾಳ್ಕರ್
ಬಡಾಲ ಅಂಕಲಗಿಯ 13 ಸದಸ್ಯರ ಪೈಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ರಾಜೇಂದ್ರ ಅಂಕಲಗಿ ಬಣ ಕೇವಲ 2 ಸ್ಥಾನಗಳೊಂದಿಗೆ ಮುಖಭಂಗ ಅನುಭವಿಸಿದೆ. ಕುದ್ರಮನಿಯಲ್ಲಿ 10 ಸ್ಥಾನಗಳು ಲಕ್ಷ್ಮಿ ಹೆಬ್ಬಾಳಕರ್ ಬಣಕ್ಕೆ ಬಂದರೆ, 3 ಎಂಇಎಸ್ ಮತ್ತು 1 ಬಿಜೆಪಿ ಬೆಂಬಲಿಗರಿಗೆ ಬಂದಿದೆ.
ಹಿರೇಬಾಗೇವಾಡಿಯ 32 ಸ್ಥಾನಗಳ ಪೈಕಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಈಗಾಗಲೆ ಹೆಬ್ಬಾಳಕರ್ ಬೆಂಬಲಿಗರು ಗೆದ್ದಿದ್ದಾರೆ.. ಹಿಂಡಲಗಾ, ತುರಮರಿ, ಕಮಕಾರಟ್ಟಿಗಳಲ್ಲಿ ಸಹ ಲಕ್ಷ್ಮಿ ಹೆಬ್ಬಾಳಕರ್ ಬಣ ಭರ್ಜರಿ ಗೆಲುವು ಸಾಧಿಸಿದೆ. ಮತದಾರರು ಅಭಿವೃದ್ಧಿಗೆ ಮತ ನೀಡಿರುವುದಕ್ಕೆ, ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸದಾ ಋಣಿಯಾಗಿರುವುದಾಗಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.