
ಚಿಕ್ಕಮಗಳೂರು (ಜು.02): ಜೂನ್ ಮಾಹೆಯ ವಿದ್ಯುತ್ ಬಿಲ್ ಜುಲೈಗೆ ಬರುತ್ತೆ ಅದನ್ನು ಕಟ್ಟಬೇಕಾಗುತ್ತದೆ. ಜುಲೈ ತಿಂಗಳಿನಿಂದ ಗೃಹ ಜ್ಯೋತಿ ಯೋಜನೆ ಅನ್ವಯವಾಗುತ್ತದೆ. ಅದು ಉಚಿತವಾಗಲಿದ್ದು ಆಗಸ್ಟ್‌ನಿಂದ ಅರ್ಹರು ಬಿಲ್ ಕಟ್ಟುವಂತಿರುವುದಿಲ್ಲ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಪ್ರವಾಸಿ ಮಂದಿರದಲ್ಲಿ ಶನಿವಾರ ತಮ್ಮ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಗೃಹಜ್ಯೋತಿ ಗೊಂದಲಗಳು ಬಗೆಹರಿದಿವೆ. ಸುಮಾರು 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಪ್ರತಿ ದಿನ ಅರ್ಜಿಗಳು ಬರುತ್ತಿವೆ. ಜು.25 ರವರೆಗೆ ಅರ್ಜಿ ಸಲ್ಲಿಸಬಹುದು ಒಂದೊಮ್ಮೆ ಅವರು ಅರ್ಜಿ ಸಲ್ಲಿಸದೇ ಇದ್ದಲ್ಲಿ ಒಂದು ತಿಂಗಳ ಬಿಲ್ ಕಟ್ಟಬೇಕಾಗುತ್ತದೆ. ಮತ್ತೆ ಅವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಆದಷ್ಟು ಬೇಗ ಎಲ್ಲರೂ ಅರ್ಜಿ ಸಲ್ಲಿಸಬೇಕು ಎಂದರು. ಸದ್ಯಕ್ಕೆ ಅರ್ಜಿ ಸಲ್ಲಿಸಲು ಗಡುವು ವಿಧಿಸಿಲ್ಲ. ಎರಡರಿಂದ 2-3 ತಿಂಗಳ ಸಮಯಾವಕಾಶ ಕೊಡುತ್ತೇವೆ. ಅಷ್ಟರಲ್ಲಿ ಯಾರೂ ಅರ್ಜಿ ಹಾಕದಿದ್ದರೆ ಅರ್ಜಿ ಪಡೆಯುವುದನ್ನು ನಿಲ್ಲಿಸಬೇಕಾಗುತ್ತದೆ. ಭಾಗ್ಯ ಜ್ಯೋತಿ ಯೋಜನೆ ಫಲಾನುಭವಿಗಳು ಸಹ ಗೃಹಜ್ಯೋತಿ ಲಾಭ ಪಡೆಯಲು ಅರ್ಜಿ ಸಲ್ಲಿಸಲೇ ಬೇಕಾಗುತ್ತದೆ ಎಂದು ಹೇಳಿದರು. ಬಾಡಿಗೆ ಮನೆಯವರದ್ದು, ಹೊಸದಾಗಿ ಬಾಡಿಗೆ ಬಂದವರದ್ದು ಹೀಗೆ ಕೆಲವು ಗೊಂದಲಗಳು ನಮ್ಮ ಗಮನಕ್ಕೆ ಬಂದ ಕೂಡಲೇ ಸರಿಪಡಿಸುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ಆನಂದ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಎಸ್ಪಿ ಉಮಾ ಪ್ರಶಾಂತ್ ಇದ್ದರು.
ಸಮಾಜ ಶೋಷಿತ ವರ್ಗದ ಬಗ್ಗೆ ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು: ವೈದ್ಯರ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ
ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು: ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಕುಡತಿನಿ ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ (ಬಿಟಿಪಿಎಸ್) ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಿರುವ ಶಾಖೋತ್ಪನ್ನ ವಿದ್ಯುತ್ ಘಟಕಗಳನ್ನು ಬಲಪಡಿಸಲಾಗುವುದು. ಯಾವುದೇ ರೀತಿ ಶಾಖೋತ್ಪನ್ನ ಕೇಂದ್ರಗಳನ್ನು ಹೆಚ್ಚಿಸುವುದಿಲ್ಲ. ಸೌರ ವಿದ್ಯುತ್‌ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕಲ್ಲಿದ್ದಲಿನ ಕೊರತೆ ಇಲ್ಲ.
ಕಲ್ಲಿದ್ದಲಿನ ಗುಣಮಟ್ಟಕಾಯ್ದುಕೊಳ್ಳಲು ಕ್ರಮ ವಹಿಸಲಾಗಿದೆ ಎಂದರು. ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಪರಿಸರ ದೃಷ್ಟಿಯಿಂದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆ. ಅದನ್ನು ಉತ್ತೇಜಿಸಿ, ಪ್ರೋತ್ಸಾಹಿಸುವ ಕೆಲಸವನ್ನು ನಾವು ಮಾಡುತ್ತೇವೆ. ಜಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು. ‘ಗೃಹಜ್ಯೋತಿ’ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ ಸಚಿವರು, ರಾಜ್ಯದಲ್ಲಿ 2.16 ಕೋಟಿ ಜನರು ‘ಗೃಹಜ್ಯೋತಿ’ ಫಲಾನುಭವಿಗಳಿದ್ದು, ಅದರಲ್ಲಿ 2.14 ಕೋಟಿ ಜನರು ಅರ್ಹರಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿಯ ಎರಡೂ ಕಡೆ ಪೆಟ್ರೋಲಿಂಗ್: ಎಡಿಜಿಪಿ ಅಲೋಕ್ ಕುಮಾರ್
ನಾವೂ ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು. 200 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಆಗಸ್ಟ್ ತಿಂಗಳಿಂದ ಜನರಿಗೆ ‘ಶೂನ್ಯ’ ಬಿಲ್ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಯುನಿಟ್ ಬಳಸಿದಲ್ಲಿ ಬಳಕೆ ಮಾಡಿದ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ ಸಚಿವರು, ರಾಜ್ಯದಲ್ಲಿ ಮುಂಗಾರು ವಿಳಂಬದಿಂದಾಗಿ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗುವ ಆಶಾಭಾವನೆ ಇದೆ. ಒಂದು ವೇಳೆ ಮಳೆಯೇ ಆಗದಿದ್ದರೆ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.