ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು (ಜು.15): ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.
ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.
ಆ.16ಕ್ಕೆ ಮಹಿಳೆಯರ ಖಾತೆಗೆ 2000 ರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಯೋಜನೆಯನ್ನು ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರು ಹಣ ಸಿಗಲಿದೆ.
ಅಂಗನವಾಡಿಗೆ ಕಳಪೆ ಆಹಾರ ಪೂರೈಕೆದಾರರ ವಿರುದ್ಧ ಕ್ರಮ: ಅಂಗನವಾಡಿಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಧಾನ್ಯಗಳು ಕೋಳಿ ಕೂಡ ತಿನ್ನದಷ್ಟುಕಳಪೆಯಾಗಿವೆ. ಇಂತಹ ಕಳಪೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುತ್ತಿರುವವರಿಗೆ ನೋಟಿಸ್ ನೀಡಲಾಗಿದ್ದು, ಬರುವ ಉತ್ತರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್ ಹೇಳಿದರು. ಎಂ. ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಕಳಪೆ ಮಟ್ಟದ ಕಾಳು, ಮೊಟ್ಟೆಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳನ್ನು ಪೂರೈಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಕಾಂಗ್ರೆಸ್‌ನ ಕಣ, ಕಣದಲ್ಲೂ ಹಿಂದೂ ವಿರೋಧಿ ಗುಣವಿದೆ: ಮುತಾಲಿಕ್
ಇಲಾಖೆಯಿಂದ ಸಮಗ್ರ ವರದಿ ಕೇಳಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ನಾನೇ ಕೆಲ ಕಡೆ ದಿಢೀರ್ ಭೇಟಿ ನೀಡಿದ್ದಾಗ ಕಳಪೆ ಆಹಾರವನ್ನು ಕಂಡು ಬೆಚ್ಚಿಬಿದ್ದಿದ್ದೇನೆ, ಆಹಾರ ಪೂರೈಕೆದಾರರು ಕಳಪೆ ಆಹಾರ ನೀಡುತ್ತಿರುವುದು ಖೇದಕರ ಎಂದು ಸಚಿವರು ಹೇಳಿದರು. ಇಂತಹ ಲೋಪಗಳನ್ನು ತಪ್ಪಿಸಲು ಆಹಾರ ಪೂರೈಕೆ ವಿಕೇಂದ್ರಿಕರಣ ವ್ಯವಸ್ಥೆಯ ಬದಲು ಕೇಂದ್ರಿಕರಣ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದ್ದೇವೆ. ವಿವಿಧ ಜಿಲ್ಲೆಗಳಲ್ಲಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಈಗಾಗಲೇ ಸೂಚನೆ ನೀಡಿರುವುದಾಗಿ ಸಚಿವರು ಮಾಹಿತಿ ನೀಡಿದರು.