
ವಿಧಾನಸಭೆ (ಡಿ.13): ಗೃಹಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿವೆ. ಈ ಬಗ್ಗೆಯೂ ಸೋಮವಾರ ಸಚಿವರಿಂದ ಸ್ಪಷ್ಟನೆ ಕೊಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್.ಅಶೋಕ್, ಈ ವಿಷಯ ಪ್ರಸ್ತಾಪಿಸಿದರು. ಆಗ ಸಿದ್ದರಾಮಯ್ಯ, ಹೆಬ್ಬಾಳ್ಕರ್ ಸದನದಲ್ಲಿ ಉಪಸ್ಥಿತರಿಲ್ಲ. ಆಗಸ್ಟ್‌ವರೆಗೆ ಎಲ್ಲಾ ಹಣ ಪಾವತಿ ಮಾಡಲಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಹಣವನ್ನು ಸದ್ಯದಲ್ಲೇ ಪಾವತಿಸಲಾಗುವುದು. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿಲ್ಲ ಎಂದಾದರೆ ಕೂಡಲೇ ಬಿಡುಗಡೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
ನೀವು ಸುಳ್ಳು ಹೇಳುತ್ತೀರೆಂದು ನೀವೇ ಹೇಳಿದ್ದೀರಿ: ಅಶೋಕ್‌ಗೆ ತಿರುಗೇಟು
ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಹೇಳಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧಪಕ್ಷದವರು ಇರುವುದೇ ಸುಳ್ಳು ಹೇಳೋಕೆ ಎಂದು ನೀವೇ ಹೇಳಿದ್ದೀರಿ. ಹಾಗಾದರೆ ನೀವು ಹೇಳೋದೆಲ್ಲವೂ ಸುಳ್ಳು ಎಂದು ತಾನೇ ಎಂದು ಪ್ರಶ್ನಿಸಿದರು. ಇದಕ್ಕೆ ಅಶೋಕ್, ನಾವು ಮಾತ್ರ ಎಂದು ಹೇಳಿಲ್ಲ. ವಿರೋಧಪಕ್ಷದಲ್ಲಿ ಕೂರುವವರೆಲ್ಲರೂ ಸುಳ್ಳು ಹೇಳುತ್ತಾರೆ ಎಂದು ನಿಮ್ಮನ್ನೂ ಸೇರಿಸಿ ಹೇಳಿದ್ದೇನೆ ಎಂದು ಸಮಜಾಯಿಷಿ ನೀಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ನಾನು ವಿರೋಧಪಕ್ಷದಲ್ಲಿದ್ದಾಗ ಎಂದೂ ಸುಳ್ಳು ಹೇಳಿಲ್ಲ ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ತರುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟವನ್ನು ಹೆಚ್ಚಿಸಿ ಅವುಗಳನ್ನು ಉಳಿಸಿ, ಖಾಸಗಿ ಶಾಲೆಗಳನ್ನು ಪೋಷಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಮಾಜಿ ಶಾಸಕ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಎಸ್. ಖಾದ್ರಿ ಹೇಳಿದರು.
ಪಟ್ಟಣದ ಜೆ.ಎಂ.ಜೆ ಶಾಲೆಯ ಬೆಳ್ಳಿಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯಾಪಾರೀಕರಣವಾಗಿರುವ ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿಗಳು ಉತ್ತಮ ಶಾಲೆಗಳನ್ನು ಪೋಷಿಸುವ ಕೆಲಸವನ್ನು ಮಾಡಬೇಕು. ಈ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆ ಇದ್ದ ಸಂದರ್ಭದಲ್ಲಿ ಕೆಲವು ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಥಾಪನೆಗೊಂಡು, ಯುವ ಸಮುದಾಯದ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿವೆ. ದುಶ್ಚಟ ಮತ್ತು ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳು ದೂರವಿದ್ದು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದು ಅವರು ಹೇಳಿದರು.
ಗಡಿ ಪ್ರದೇಶಾಭಿವೃದ್ದಿ ನಿಘಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತದಲ್ಲಿ ಶೇ.13ರಷ್ಟಿದ್ದ ವಿದ್ಯಾವಂತರ ಸಂಖ್ಯೆ ಇಂದು ಶೇ.76.6 ಕ್ಕೆ ಏರಿದೆ, ಕರ್ನಾಟಕದಲ್ಲಿ ವಿದ್ಯಾವಂತರ ಸಂಖ್ಯೆ ಶೇ.80ಕ್ಕೆ ಏರಿಕೆಯಾಗಿದೆ. ಅಂದಿನ ಬಡತನದಿಂದ ಹೊಟ್ಟೆ ತುಂಬಿಸಿಕೊಳ್ಳಲು ಬದುಕುತ್ತಿದ್ದ ಭಾರತೀಯರು ಇಂದು ವಿಶ್ವದೆಲ್ಲಡೆ ತಮ್ಮ ಜ್ಞಾನವನ್ನು ಉಣಬಡಿಸುತ್ತಿದ್ದಾರೆ. ಶಿಕ್ಷಕರು ಮತ್ತು ಪಾಲಕರು ಮಕ್ಕಳ ಜೀವನದಲ್ಲಿ ಸರಿಯಾದ ಪಾತ್ರ ವಹಿಸಿದಾಗ ಮಾತ್ರ ಅವರ ಜೀವನ ಉಜ್ವಲವಾಗಲು ಸಾಧ್ಯ. ಶಿಕ್ಷರಿಂದ ಶಿಕ್ಷೆ ಪಡೆಯ ಬಯಸದೆ ಬೆಳದ ಮಕ್ಕಳು ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆಯಲ್ಲಿ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬರುತ್ತಾರೆ. ಪಾಲಕರು ಶಿಕ್ಷಕರು ನೀಡುವ ಶಿಕ್ಷೆಯನ್ನು ಪ್ರಶ್ನಿಸುವ ಮನೋಪ್ರವೃತ್ತಿಯನ್ನು ಬಿಡಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.