ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಡಿ.ರೇವಣ್ಣ, ವೆಂಕಟಶಿವಾರೆಡ್ಡಿ, ನೇಮಿರಾಜ ನಾಯ್ಕ್, ಸಿ.ಬಿ.ಸುರೇಶ್ ಬಾಬು ಹೆಸರುಗಳು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೇಳಿಬಂದಿವೆ. ಆದರೆ, ಈ ಪೈಕಿ ದೇವೇಗೌಡ ಅವರ ಹೆಸರು ಮುಂಚೂಣಿಯಲ್ಲಿದ್ದು, ಪಕ್ಷದ ವರಿಷ್ಠರು ಸಹ ದೇವೇಗೌಡ ಅವರನ್ನೇ ಆಯ್ಕೆ ಮಾಡುವ ಬಗ್ಗೆ ಒಲವನ್ನು ಹೊಂದಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ಜು.03): ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತೆರಳಿದ ಬಳಿಕ ತೆರವಾದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಯಾರು ಎಂಬ ಚರ್ಚೆ ನಡೆಯುತ್ತಿದ್ದು, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರ ಹೆಸರು ಬಲವಾಗಿ ಕೇಳಿಬಂದಿದೆ.
ಇದೇ ತಿಂಗಳು 15ರಿಂದ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಬರುವ ಸೋಮವಾರ ಅಥವಾ ಮಂಗಳವಾರ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕನ ಹೆಸರು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್
ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಡಿ.ರೇವಣ್ಣ, ವೆಂಕಟಶಿವಾರೆಡ್ಡಿ, ನೇಮಿರಾಜ ನಾಯ್ಕ್, ಸಿ.ಬಿ.ಸುರೇಶ್ ಬಾಬು ಹೆಸರುಗಳು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೇಳಿಬಂದಿವೆ. ಆದರೆ, ಈ ಪೈಕಿ ದೇವೇಗೌಡ ಅವರ ಹೆಸರು ಮುಂಚೂಣಿಯಲ್ಲಿದ್ದು, ಪಕ್ಷದ ವರಿಷ್ಠರು ಸಹ ದೇವೇಗೌಡ ಅವರನ್ನೇ ಆಯ್ಕೆ ಮಾಡುವ ಬಗ್ಗೆ ಒಲವನ್ನು ಹೊಂದಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನವೂ ತೆರವಾಗಿದೆ. ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಇರಬೇಕಾಗಿರುವ ಕಾರಣ ಅಷ್ಟರೊಳಗೆ ಆಯ್ಕೆಯಾಗಬೇಕಿದೆ. ಹೀಗಾಗಿ ಮುಂದಿನ ವಾರದಲ್ಲಿ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ.