Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

By Kannadaprabha News  |  First Published Dec 1, 2021, 7:04 AM IST
  • ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಲಿ ಎಂದು  ಪೂಜೆ
  • ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ  ಶ್ರಿನಿವಾಸನ ಮುಂದೆ ಸಂಕಲ್ಪ

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

ಸಿದ್ದರಾಮಯ್ಯ, ಜಿ.ಟಿ. ದೇವೇಗೌಡ ಇಬ್ಬರು ಒಂದು ರೀತಿ ಲವ್‌ ಬರ್ಡ್ ಥರ ಆಗಿದ್ದಾರೆ :  ಸಿದ್ದರಾಮಯ್ಯ, ಜಿ.ಟಿ. ದೇವೇಗೌಡ ಇಬ್ಬರು ಒಂದು ರೀತಿ ಲವ್‌ ಬರ್ಡ್(Love Birds) ಥರ ಆಗಿದ್ದಾರೆ. ಇಬ್ಬರಿಗೂ ಯಾವಾಗ ಲವ್‌ ಆಗುತ್ತೆ, ಯಾವಾಗ ಡಿವೋರ್ಸ್‌ ಆಗುತ್ತೇ ಅನ್ನೋದು ಅವ್ರಿಗೇ ಗೊತ್ತು. ಅವರಿಬ್ಬರೂ ಯಾವಾಗ ಚೆನ್ನಾಗಿರ್ತಾರೋ, ಯಾವಾಗ ಕಿತ್ತಾಡ್ಕೋತಾರೋ ಗೊತ್ತಿಲ್ಲ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekhar ) ವ್ಯಂಗ್ಯವಾಡಿದರು.

Latest Videos

undefined

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಸಂಕಲ್ಪ ಮಾಡಿ ಪೂಜೆ ಮಾಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಪೂಜೆ ಮಾಡಿದ ತಕ್ಷಣ ಯಾರೂ ಮುಖ್ಯಮಂತ್ರಿ ಆಗಲ್ಲ. ಪೂಜೆ ಮಾಡಿ ಮುಖ್ಯಮಂತ್ರಿ (CM) ಆಗೋ ಆಗಿದ್ರೇ ಎಲ್ಲರೂ ಪೂಜೆ ಮಾಡಿಸ್ತಾ ಇದ್ರು ಎಂದರು.

ದೇವಸ್ಥಾನದ ಪೂಜೆಗೆ ಅಹ್ವಾನ ನೀಡಿದ್ದಾರೆ, ಹೀಗಾಗಿ ಅವ್ರು ಜೊತೆಯಾಗಿ ಹೋಗಿದ್ದಾರೆ ಅಷ್ಟೇ. ನಾನು ಸಹ ಪೂಜೆಗೆ ಹೋಗಿ ಬಂದಿದ್ದೇನೆ. ಸಂಕಲ್ಪ ಮಾಡಿದ ಮಾತ್ರಕ್ಕೆ ಯಾರು ಕೂಡ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿಯಿದೆ, ಅಲ್ಲಿಯವರೆಗೂ ಏನಾಗುತ್ತೋ ನೋಡೋಣ ಎಂದು ಅವರು ಹೇಳಿದರು.

ಒಂದೇ ವೇದಿಕೆ ಹಂಚಿಕೊಂಡಿದ್ದರು :   ರಾಜಕೀಯದಲ್ಲಿ (Politics) ಬದ್ಧ ವೈರಿಗಳಾಗಿದ್ದ ಜಿಡಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಇದೀಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಕ್ಕ-ಪಕ್ಕದಲ್ಲಿಯೇ ಕುಳಿತು ನಗುಮುಖದಲ್ಲಿಯೇ ಕುಶಲೋಪಾರಿ ವಿಚಾರಿಸಿದ್ದಾರೆ. ಅಲ್ಲದೇ ಚಾಮುಂಡೇಶ್ವರಿ ಕ್ಷೇತ್ರದ ಕೂರ್ಗಳ್ಳಿಯಲ್ಲಿ ಟ್ರಸ್ಟ್‌ ಉದ್ಘಾಟನೆ ಕಾರ್ಯಕ್ರಮದ ವೇದಿಕೆ ಮೇಲೆ ಸಿದ್ದು-ಜಿಟಿಡಿ ಒಬ್ಬರಿಗೊಬ್ಬರು ಹಾಡಿ ಹೊಗಳಿಕೊಂಡಿದ್ದಾರೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ (Election) ಚಾಮುಂಡೇಶ್ವರಿ ಕ್ಷೇತ್ರ ದೇಶದ ಗಮನಸೆಳೆದಿತ್ತು. ಚುನಾವಣೆ ಫೈಟ್‌ನಲ್ಲಿ ಅಂತಿಮವಾಗಿ ಜಿಟಿ ದೇವೇಗೌಡ ಎದುರು ಸೋಲುಕಂಡರು. ಆಗ ಪರಸ್ಪರ ಎದುರಾಳಿಗಳಾಗಿದ್ದವರು ಇದೀಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಒಂದಾಗುವ ಮುನ್ಸೂಚನೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡ ಅವರು ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯರ ಗುಣಗಾನ ಮಾಡಿದರು. ಈ ಮೂಲಕ ರಾಜಕೀಯದಲ್ಲಿ ಒಂದಾಗುವ ಸುಳಿವು ಕೊಟ್ಟರು.

ಸಿದ್ದರಾಮಯ್ಯರ ಗುಣಗಾನ ಮಾಡಿದ ಜಿಟಿಡಿ1983 ರಿಂದ ನಿರಂತರವಾಗಿ ನಾನು ಸಿದ್ದರಾಮಯ್ಯ ಜೊತೆಯಾಗಿ ಬೆಳೆದಿದ್ದೇವೆ. ಜೆಡಿಎಸ್‌ (JDS) ಅನ್ನು ನೆಲದಿಂದ ಜೊತೆಯಾಗಿ ಕಟ್ಟಿದ್ದೇವೆ. ನಂತರದ ಘಟನಾವಳಿಗಳಿಂದ ಸಿದ್ದರಾಮಯ್ಯ ಜೆಡಿಎಸ್ ತೊರೆದರು. ಕಾಂಗ್ರೆಸ್‍ಗೆ ಹೋಗಿ ಸಿದ್ದರಾಮಯ್ಯ ಸಿಎಂ ಆದರು. ಸಿದ್ದರಾಮಯ್ಯ ಅವರು ಕೊಟ್ಟ ಅನ್ನಭಾಗ್ಯ ಬಹಳ ಮುಖ್ಯವಾದ ಯೋಜನೆ. ಅವರಿಗೆ ಹಸಿವಿನ ಕಷ್ಟ ಗೊತ್ತಿದೆ. ಸಿದ್ದರಾಮಯ್ಯ ಎಲ್ಲಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಹೊಗಳಿದರು.

ಡಾ. ಎಚ್.ಸಿ.ಮಹದೇವಪ್ಪ ಎಂಬ ದಲಿತ ನಾಯಕನನ್ನು ದೊಡ್ಡದಾಗಿ ಬೆಳೆಸಿದ್ದು ಸಿದ್ದರಾಮಯ್ಯ. ಸಿದ್ದರಾಮಯ್ಯನನ್ನು ವೀರಶೈವ ವಿರೋಧಿ ಎಂಬ ಪಟ್ಟ ಕಟ್ಟಿದ್ದರು. ಹಲವು ವೀರಶೈವ ಮುಖಂಡರನ್ನು ಮೈಸೂರು ಭಾಗದಲ್ಲಿ ಬೆಳೆಸಿದ್ದು ಸಿದ್ದರಾಮಯ್ಯ. ದಲಿತರು, ಒಕ್ಕಲಿಗರು, ನಾಯಕರು, ವೀರಶೈವರು ಎಲ್ಲಾ ಸಮುದಾಯವನ್ನು ಸಿದ್ದರಾಮಯ್ಯ ಪ್ರೀತಿಸುತ್ತಾರೆ. ಸಿದ್ದರಾಮಯ್ಯ-ಜಿ.ಟಿ.ದೇವೇಗೌಡ ಯಾಕೆ ಬೇರೆಯಾದರು ಎಂಬ ಕೊರಗು ಜಿಲ್ಲೆಯ ಜನರಿಗೆ ಇತ್ತು. ನಾನು ಯಾವತ್ತೂ ಸಿದ್ದರಾಮಯ್ಯ ಅವರ ವಿರುದ್ಧ ಹಿಂದೆ ಮುಂದೆ ಯಾವುದೇ ಮಾತನಾಡಿಲ್ಲ. ಸಿದ್ದರಾಮಯ್ಯ ಸೋಲಲಿ, ಗೆಲ್ಲಲಿ ಚಾಮುಂಡೇಶ್ವರಿ ಕ್ಷೇತ್ರದ ಜನರು ಅವರನ್ನು ಪ್ರೀತಿಸುತ್ತಾರೆ. ಇಂತಹ ನಾಯಕನನ್ನು ಕೊಟ್ಟ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭಿನಂದನೆ ಎಂದು ಹೇಳಿದರು. 

click me!